Home
Deal of the day

ಅಗ್ಗದ ಬೆಲೆಯಲ್ಲಿ ಸ್ಟೈಲಿಶ್‌ ಫೋನ್‌ ಬೇಕೆ? ಹಾಗಿದ್ರೆ, ಈ ಆಫರ್‌ ನಿಮಗಾಗಿ!

ಇ ಕಾಮರ್ಸ್‌ ಹಿರಿಯಣ್ಣ ಎಂದೇ ಬಿಂಬಿತವಾಗಿರುವ ಜನಪ್ರಿಯ ಅಮೆಜಾನ್‌ (Amazon) ಇ ಕಾಮರ್ಸ್‌ ತಾಣವು ಆನ್‌ಲೈನ್‌ ಶಾಪಿಂಗ್‌ ಇಷ್ಟಪಡುವ ಗ್ರಾಹಕರಿಗೆ ಒನ್‌ಸ್ಟಾಪ್‌ ನಿಲುಗಡೆ ಎನಿಸಿದೆ. ಈ ಆನ್‌ಲೈನ್‌ ವೆಬ್‌ಸೈಟ್‌ ಪ್ರಮುಖವಾಗಿ ಸ್ಮಾರ್ಟ್‌ಫೊನ್‌ಗಳಿಗೆ ಒಂದಿಲ್ಲೊಂದು ಜಬರ್ದಸ್ತ್‌ ರಿಯಾಯಿತಿ ಆಫರ್‌ ತಿಳಿಸುವ ಮೂಲಕ ಅಧಿಕ ಗ್ರಾಹಕರನ್ನು ಸೆಳೆಯುತ್ತದೆ. ಸದ್ಯ ಐಟೆಲ್‌ ಸಂಸ್ಥೆಯು ಐಟೆಲ್‌ A70 (itel A70) ಫೋನ್‌ ಭಾರೀ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ನಲ್ಲಿ ಐಟೆಲ್‌ A70 (itel A70) ಸ್ಮಾರ್ಟ್‌ಫೋನ್‌ ಶೇ. 32% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 6,799ರೂ. ಗಳ ಕೊಡುಗೆಯ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ರಿಯಾಯಿತಿ ಸಹ ಪಡೆದುಕೊಳ್ಳಬಹುದಾಗಿದೆ.

ಅಗ್ಗದ ಬೆಲೆಯಲ್ಲಿ ಸ್ಟೈಲಿಶ್‌ ಫೋನ್‌ ಬೇಕೆ? ಹಾಗಿದ್ರೆ, ಈ ಆಫರ್‌ ನಿಮಗಾಗಿ!

ಇನ್ನು ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಈ ಎಂಟ್ರಿ ಲೆವೆಲ್‌ ಫೋನ್‌ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್‌ ಪ್ರೊಸೆಸರ್‌ ಪ್ರಯೋಜನ ಹೊಂದಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೇ ಐಟೆಲ್‌ A70 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ಐಟೆಲ್‌ A70 - ಫೀಚರ್ಸ್‌ ಹೀಗಿವೆ

ಐಟೆಲ್‌ A70 ಫೋನ್‌ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್‌ ಸಪೋರ್ಟ್‌ ಇದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಲೆವೆಲ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಡೈನಾಮಿಕ್ ಬಾರ್ ಫೀಚರ್ಸ್‌ ಲಭ್ಯ.

ಐಟೆಲ್‌ A70 ಮೊಬೈಲ್‌ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಗೋ ಆವೃತ್ತಿ ಆಧಾರಿತ ಐಟೆಲ್‌ ಓಎಸ್‌ 13 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಲ್ಲಿ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 12GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ಐಟೆಲ್‌ A70 ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಅಲ್ಲದೇ ಇದರ ಸೆಕೆಂಡರಿ ಕ್ಯಾಮೆರಾವು ಬೇಸಿಕ AI-ಬೆಂಬಲಿತ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಐಟೆಲ್‌ A70 ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದುಕೊಂಡಿದ್ದು, 10W ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, Wi-Fi 802.11, ಬ್ಲೂಟೂತ್ 5.0, GPS/GLONASS, ಮತ್ತು USB ಟೈಪ್-C ಹಾಗೂ ಹೆಡ್‌ಫೋನ್‌ ಜ್ಯಾಕ್‌ ಕನೆಕ್ಷನ್‌ ಪಡೆದುಕೊಂಡಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ ಸೌಲಭ್ಯ ಸಹ ಲಭ್ಯ.

Best Mobiles in India

English summary
Fabulous price drop on itel A70 Phone in India. check out price, specifications, offer and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+