ಕರ್ವ್ಡ್ ಡಿಸ್‌ಪ್ಲೇ ಇರುವ ಈ ಸ್ಲಿಮ್ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!
ಪ್ರಮುಖ ಇ ಕಾಮರ್ಸ್ ಫ್ಲಿಪ್‌ಕಾರ್ಟ್ (Flipkart) ಪ್ಲಾಟ್‌ಫಾರ್ಮ್ ನಲ್ಲಿ ಆಯ್ದ ಕೆಲವು ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಪಡೆದಿವೆ. ಫ್ಲಿಪ್‌ಕಾರ್ಟ್‌ನ ಈ ಸ್ಪೆಷಲ್ ಸೇಲ್‌ನಲ್ಲಿ ಡಿಸ್ಕೌಂಟ್ ಪಡೆದ ಫೋನ್‌ಗಳ ಪೈಕಿ ಜನಪ್ರಿಯ ಮೊಬೈಲ್‌ಗಳ ಜೊತೆಗೆ ಕೆಲವು ಹೊಸ ಫೋನ್‌ಗಳು ಸೇರಿವೆ. ಅವುಗಳ ಪೈಕಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ ಎಡ್ಜ್ 50 ಫ್ಯೂಜನ್ (Motorola Edge 50 Fusion) ಮೊಬೈಲ್ ಪಡೆದಿರುವ ರಿಯಾಯಿತಿ ವಾವ್ ಎನಿಸುವಂತೆ ಇದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ (Flipkart) ತಾಣದಲ್ಲಿ ಸದ್ಯ ಮೊಟೊ ಸಂಸ್ಥೆಯ ಮೊಟೊರೊಲಾ ಎಡ್ಜ್ 50 ಫ್ಯೂಜನ್ (Motorola Edge 50 Fusion) ಫೋನ್ ಶೇ. 15% ರಷ್ಟು ಆಫರ್ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್ 21,999ರೂ. ಗಳ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಬಹುದು.

ಇನ್ನು ಈ ಫೋನ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಪಡೆದಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಫ್ಯೂಜನ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ಫ್ಯೂಜನ್ - ಫೀಚರ್ಸ್
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಫೋನ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಈ ಫೋನಿನ 1600 ನಿಟ್ಸ್ ಪೀಕ್ ಬ್ರೈಟ್ನೆಸ್, 144Hz ರಿಫ್ರೆಶ್ ರೇಟ್ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಸೌಲಭ್ಯ ಸಹ ಕಾಣಬಹುದಾಗಿದೆ
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್ ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಅಲ್ಲದೇ ಈ ಫೋನ್ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ನ 2x ಟೆಲಿಫೋಟೋ ಲೆನ್ಸ್ ಸೌಲಭ್ಯ ಒಳಗೊಂಡಿದೆ. ಇನ್ನು ಈ ಮೊಬೈಲ್‌ನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.
ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ ಇದು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್ ಆಯ್ಕೆಗಳು ಹಾಗೂ ಡಾಲ್ಬಿ ಅಟ್ಮಾಸ್ ಆಡಿಯೋ ಸೌಲಭ್ಯ ಸಹ ಇದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಸಹ ಕಾಣಬಹುದಾಗಿದೆ.


Click it and Unblock the Notifications








