10000 ಅಗ್ಗ! ದೈತ್ಯ ಫೋನಿನ ಬೆಲೆ ಭಾರೀ ಇಳಿಕೆ.. ಜೊತೆಗೆ ಭರ್ಜರಿ ಡಿಸ್ಕೌಂಟ್.. ಹೊಸ ಬೆಲೆ ಎಷ್ಟು?
ಪ್ರಸಿದ್ಧ ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್ (Flipkart Black Friday Sale) ಆಯೋಜಿಸಿದೆ. ಇದು ನವೆಂಬರ್ 29 ರವರೆಗೆ ನಡೆಯಲಿದೆ. ನೀವು, ಈ ವಿಶೇಷ ಸೇಲ್‌ನಲ್ಲಿ ಪ್ರಸಿದ್ಧ ಸಂಸ್ಥೆಯ ಮೊಬೈಲ್‌ಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು. ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೇಲೆ ಬ್ಯಾಂಕ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಅದರಂತೆ, ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ (Google Pixel 9 Pro Fold) ಫೋನ್ ಸಹ ಭರ್ಜರಿ ರಿಯಾಯಿತಿ ಪಡೆದಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ.
ಹೌದು, ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಮೊಬೈಲ್ ಬರೋಬ್ಬರಿ 10,000 ರೂ. ಕಡಿಮೆ ಬೆಲೆಗೆ ಲಭ್ಯವಿದೆ. ವಿಶೇಷವೆಂದರೆ, ಇದು ಗೂಗಲ್ ಕಂಪನಿಯ ಮೊದಲ ಫೋಲ್ಡ್ ಮೊಬೈಲ್ ಆಗಿದೆ. ಈ ಫೋನ್ ಗೂಗಲ್ Tensor G4 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು 6.3 ಇಂಚಿನ ಕವರ್ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 4650mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಬೆಲೆ ಮತ್ತು ಆಫರ್‌ಗಳು
ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಫೋನ್ ಕೇವಲ 16GB ಮತ್ತು 256GB RAM ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯು ಇದನ್ನು 1,72,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್ ಬ್ಲಾಕ್ ಫ್ರೈಡೆ ಸೇಲ್‌ನಲ್ಲಿ 10,000 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ಶೇ.5 ರಷ್ಟು ಕ್ಯಾಶ್‌ಬ್ಯಾಂಕ್ ಮತ್ತು ನೋ ಕಾಸ್ಟ್ ಇಎಂಐ ಸಹ ಲಭ್ಯವಿದೆ. ಈ ಫೋನ್ ಎರಡು ಬಣ್ಣಗಳಲ್ಲಿ ಮಾರಾಟವಾಗಲಿದೆ. ನೀವು, ಅಬ್ಸಿಡಿಯನ್ (ಬೂದು) ಮತ್ತು ಪಿಂಗಾಣಿ (ಆಫ್ ವೈಟ್) ಬಣ್ಣದಲ್ಲಿ ಖರೀದಿಸಬಹುದು.
ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಮೊಬೈಲ್ 6.3 ಇಂಚಿನ ಕವರ್ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 8 ಇಂಚಿನ ಓಎಲ್‌ಇಡಿ ಸೂಪರ್ ಆಕ್ಟುವಾ ಫ್ಲೆಕ್ಸ್ ಮುಖ್ಯ ಡಿಸ್ಪ್ಲೇ ಹೊಂದಿದೆ. ಎರಡೂ ಡಿಸ್ಪ್ಲೇಗಳು 120Hz ರಿಫ್ರೆಶ್ ದರ ಮತ್ತು 2,700 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿವೆ. ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಫೋನನ್ನು ಗೂಗಲ್ Tensor G4 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 16GB ಮತ್ತು 256GB RAM ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 10.8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 10.5 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 10 ಮೆಗಾಪಿಕ್ಸೆಲ್ ಸಾಮರ್ಥ್ಯದ ಎರಡು ಕ್ಯಾಮೆರಾಗಳನ್ನು ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಗೂಗಲ್ ಪಿಕ್ಸೆಲ್ 9 ಪ್ರೊ ಫೋಲ್ಡ್ ಮೊಬೈಲ್ 4650mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೈರ್ಡ್ ಚಾರ್ಜಿಂಗ್ ಮತ್ತು Qi ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ನೀರಿನ ವಿರುದ್ಧ ರಕ್ಷಣೆಗಾಗಿ IPX8 ರೇಟಿಂಗ್ ಪಡೆದಿದೆ.


Click it and Unblock the Notifications








