Home
Deal of the day

ಸಖತ್ ಬೆಲೆ ಇಳಿಕೆ!..ಆಕರ್ಷಕ ಫೀಚರ್ಸ್‌ ಇರುವ ಈ ಫೋನಿಗೆ ಭಾರೀ ಡಿಸ್ಕೌಂಟ್‌!

ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ ಮೂಲಕ ಗಮನ ಸೆಳೆದಿರುವ ಐಕ್ಯೂ ಮೊಬೈಲ್‌ ಕಂಪನಿಯು Z ಸರಣಿಯಲ್ಲಿ ಬೊಂಬಾಟ್‌ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯ ಇರುವ ಐಕ್ಯೂ Z9s ಪ್ರೊ 5G (iQOO Z9S Pro 5G) ಮೊಬೈಲ್‌ ಖಡಕ್‌ ಲುಕ್‌ ಹಾಗೂ ಸೂಪರ್‌ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ನಲ್ಲಿ ಇದೀಗ ದೊಡ್ಡ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಸಿಗಲಿದೆ.

ಹೌದು, ಅಮೆಜಾನ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ Z9s ಪ್ರೊ 5G (iQOO Z9S Pro 5G) ಸ್ಮಾರ್ಟ್‌ಫೋನ್‌ ಶೇ. 17% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB + 128 GB ಸ್ಟೋರೇಜ್‌ ವೇರಿಯಂಟ್‌ 24,998ರೂ. ಗಳ ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ ಕಾರ್ಡ್‌ ಮೂಲಕ ಖರೀದಿ ಮಾಡಿದರೆ, ಇನ್ನಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ.

ಸಖತ್ ಬೆಲೆ ಇಳಿಕೆ!..ಆಕರ್ಷಕ ಫೀಚರ್ಸ್‌ ಇರುವ ಈ ಫೋನಿಗೆ ಭಾರೀ ಡಿಸ್ಕೌಂಟ್‌!

ಇನ್ನು ಈ ಫೋನ್‌ 5,500 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದ್ದು, ಜೊತೆಗೆ 8GB RAM + 128 GB, 8GB + 256 GB ಹಾಗೂ 12GB + 256 GB ಆಯ್ಕೆಗಳನ್ನು ಪಡೆದಿದೆ. iQOO Z9S Pro 5G ಫೋನ್‌ ಅನ್ನು ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಭಾರೀ ಡಿಸ್ಕೌಂಟ್‌ ಬೆಲೆಗೆ ಖರೀದಿಸಬಹುದು. ಹಾಗಾದರೆ ಐಕ್ಯೂ Z9s ಪ್ರೊ 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಐಕ್ಯೂ Z9s ಪ್ರೊ 5G (iQOO Z9S Pro 5G) ಫೋನ್‌ ಫೀಚರ್ಸ್‌ ಐಕ್ಯೂ Z9s ಪ್ರೊ ಫೋನ್‌ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, 2392 × 1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಇದರ ಜೊತೆಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಪಡೆದಿದೆ.

ಪ್ರೊಸೆಸರ್‌ ಬಲ

ಐಕ್ಯೂ Z9s ಪ್ರೊ 5G ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 7 ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 8GB RAM + 128 GB, 8GB + 256 GB ಹಾಗೂ 12GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್ ಮಾಹಿತಿ

ಐಕ್ಯೂ Z9s ಪ್ರೊ 5G (iQOO Z9S Pro 5G) ಫೋನ್‌ ಸಹ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಇದ್ದು, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಆಗಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಫೋನ್‌ 5,500 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, 80W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.

ಇನ್ನು ಸಂಸ್ಥೆಯ ಐಕ್ಯೂ Z9s ಮೊಬೈಲ್‌ 6.67 ಇಂಚಿನ ಡಿಸ್‌ಪ್ಲೇ ಪಡೆದಿದ್ದು, ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಸೌಲಭ್ಯ ಇದೆ. ಹಾಗೆಯೇ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 5,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

Best Mobiles in India

English summary
Grab iQOO Z9s Pro 5G at an Incredible Discount on Amazon: Check offer price, other specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+