Home
Deal of the day

ಈ ಜನಪ್ರಿಯ 5G ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಆಕರ್ಷಕ ರಿಯಾಯಿತಿ!

ಜನಪ್ರಿಯ ಅಮೆಜಾನ್ ಇ ಕಾಮರ್ಸ್‌ ತಾಣವು ಒಂದಿಲ್ಲೊಂದು ಆಫ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡುತ್ತದೆ. ಇನ್ನು ಕೆಲವೊಮ್ಮೆ ವಿಶೇಷ ಮಾರಾಟ ಇಲ್ಲದ ವೇಳೆಯಲ್ಲಿಯೂ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್‌ ನೀಡುತ್ತದೆ. ಇದರೊಂದಿಗೆ ಎಕ್ಸ್‌ಚೇಂಜ್ ಕೊಡುಗೆ ಹಾಗೆಯೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ಸಹ ಲಭ್ಯವಾಗಲಿದೆ.

ಈ ಜನಪ್ರಿಯ 5G ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಆಕರ್ಷಕ ರಿಯಾಯಿತಿ!

ಹೌದು, ಅಮೆಜಾನ್‌ನಲ್ಲಿ ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ. ಅಮೆಜಾನ್ ಸೇಲ್‌ ವೇಳೆ ಅಮೆಜಾನ್ ಅಗ್ಗದ ದರದ ಫೋನ್‌ಗಳಿಂದ ಹಿಡಿದು ದುಬಾರಿ ಬೆಲೆಯ ಮಾಡೆಲ್ ಫೋನ್‌ಗಳ ವರೆಗೂ ಡಿಸ್ಕೌಂಟ್ ನೀಡುತ್ತದೆ. ಹಾಗೆಯೇ ಹೊಸದಾಗಿ ಲಾಂಚ್ ಆದ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ 5G ಬೆಂಬಲ ಪಡೆದ ಕೆಲವು ಜನಪ್ರಿಯ ಫೋನ್‌ಗಳಿಗೂ ಅಮೆಜಾನ್‌ನಲ್ಲಿ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯ ಇರುವ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

iQOO Z3 5G ಸ್ಮಾರ್ಟ್‌ಫೋನ್‌
iQOO Z3 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆ ಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ವನ್ನು ಪಡೆದುಕೊಂಡಿದೆ.

ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

English summary
Great Deals On These Top Brands 5G Phones in Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+