Realme: ಇತ್ತೀಚೆಗೆ ಲಾಂಚ್ ಆದ ರಿಯಲ್‌ಮಿ P1 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್...
ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು (Realme smartphone) ಭಿನ್ನ ಫೀಚರ್ಸ್ ಮೂಲಕ ವಿಶೇಷ ಬೇಡಿಕೆ ಪಡೆದುಕೊಂಡಿವೆ. ಈ ನಡುವೆ ಕೆಲವು ದಿನಗಳ ಹಿಂದೆ ರಿಯಲ್‌ಮಿ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್ ಆಗಿರುವ ರಿಯಲ್‌ಮಿ P1 5G ಸರಣಿ ಫೋನ್‌ಗಳನ್ನು (Realme P1 5G series phone) ಲಾಂಚ್ ಮಾಡಿತ್ತು. ಆದರೆ, ಈಗ ಈ ಫೋನ್‌ಗೆ ಪ್ರಮುಖ ಇ-ಕಾಮರ್ಸ್ ಸೈಟ್‌ನಲ್ಲಿ ಭರ್ಜರಿ ಅಫರ್ ಘೋಷಣೆ ಮಾಡಲಾಗಿದೆ.
ಹೌದು, ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ (Realme P1 5G smartphone) ಇದೀಗ ಆಫರ್ ಬೆಲೆಗೆ ಲಭ್ಯ ಇದೆ. ಈ ಫೋನ್ 6 GB RAM ಆಯ್ಕೆ ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ರನ್ ಮಾಡಲಿದೆ. ಇದರ ಜೊತೆಗೆ ಅಮೋಲೆಡ್ ಡಿಸ್‌ಪ್ಲೇಯನ್ನು ಕಾಣಬಹುದು. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್ ಹಾಗೂ ಇದರ ಆಫರ್ ಬೆಲೆ ಮಾಹಿತಿ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರಿಯಲ್‌ಮಿ P1 5G ಸ್ಮಾರ್ಟ್‌ಫೋನ್: ಈ ಸ್ಮಾರ್ಟ್‌ಫೋನ್‌ನ ಸಾಮಾನ್ಯ ಬೆಲೆ 20,999 ರೂ.ಗಳಾಗಿದೆ. ಆದರೆ ನೀವು ಈಗ ಈ ಫೋನ್ ಅನ್ನು 23% ರಿಯಾಯಿತಿಯೊಂದಿಗೆ ಪ್ರಮುಖ ಇ ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ 15,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಮೂಲಕ ನೀವು ಐದು ಸಾವಿರಕ್ಕೂ ಹೆಚ್ಚಿನ ಹಣ ಉಳಿತಾಯ ಮಾಡಬಹುದಾಗಿದೆ. ಅಲ್ಲದೆ ಕೆಲವು ಬ್ಯಾಂಕ್ ಆಫರ್ ಸಹ ಇದೆ.
ಮೊದಲ ಫ್ಲಿಪ್‌ಕಾರ್ಟ್ ಯುಪಿಐ ಟಿಎಕ್ಸ್‌ಎನ್‌ಎಸ್‌ನಲ್ಲಿ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ನಲ್ಲಿ 5% ಕ್ಯಾಶ್‌ಬ್ಯಾಕ್, ಕಾಂಬೊ ಮೊಬೈಲ್ ಮತ್ತು ಕೇಸ್‌ಕವರ್‌ನಲ್ಲಿ ಹೆಚ್ಚುವರಿ 10% ರಿಯಾಯಿತಿ, ಫ್ರೀಬಿಸ್ಫಾಟಿಫೈ ಪ್ರೀಮಿಯಂ ಸೌಲಭ್ಯ, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ನಂತರ ಪಾವತಿ ಮಾಡಿದ್ರೆ 20,000 ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಪ್ರಯೋಜನ ಸೇರಿದಂತೆ ಸಾಕಷ್ಟು ಸೌಲಭ್ಯಗಳನ್ನು ಈ ಮೂಲಕ ಪಡೆಯಬಹುದಾಗಿದೆ.

ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.67 ಇಂಚಿನ ಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್, 600 ನಿಟ್ಸ್ ಕನಿಷ್ಟ ಬ್ರೈಟ್‌ನೆಸ್ ಆಯ್ಕೆ ಹಾಗೂ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದಿದ್ದು, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ, 395 ಪಿಪಿಐ ಸಾಂದ್ರತೆಯನ್ನು ಇದರಲ್ಲಿ ಕಾಣಬಹುದಾಗಿದೆ.
ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಇನ್ನು ಈ ಫೋನ್ ಆಂಡ್ರಾಯ್ಡ್ 14, ರಿಯಲ್‌ಮಿ ಯುಐ 5.0 ಓಎಸ್ ಅನ್ನು ರನ್ ಮಾಡಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 7050 (6 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G68 MC4 ಜಿಒಪಿಯು ಬಲದೊಂದಿಗೆ ಉತ್ತಮವಾಗಿ ಕೆಲಸ ಮಾಡಲಿದೆ. ಅಲ್ಲದೆ ವಿವಿಧ ಸ್ಟೋರೇಜ್ ಆಯ್ಕೆಯಲ್ಲಿ ಈ ಫೋನ್ ಲಭ್ಯ ಇದ್ದು, ಈ ಆಫರ್ ನಲ್ಲಿ ಲಭ್ಯ ಇರುವ ಫೋನ್ 128 GB +6 GB RAM ಸ್ಟೋರೇಜ್ ಆಯ್ಕೆ ಪಡೆದಿದೆ.
ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಒಂದು 50 ಮೆಗಾಪಿಕ್ಸೆಲ್ ಸೆನ್ಸರ್ ಆಯ್ಕೆ ಪಡೆದಿದ್ದರೆ ಇನ್ನೊಂದು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಪಡೆದಿದೆ. ಹಾಗೆಯೇ ಈ ಸೆನ್ಸರ್‌ಗು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಬೆಂಬಲಿಸಲಿವೆ. ಇದರ ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ರಿಯಲ್‌ಮಿ P1 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 45W ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಅಂದರೆ 27 ನಿಮಿಷಗಳಲ್ಲಿ 50% ಚಾರ್ಜ್ ಆಗಲಿದೆ ಎನ್ನಲಾಗಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, 24-ಬಿಟ್/192kHz ಹೈ-ರೆಸ್ ಆಡಿಯೋ, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.2, A2DP, LE, ಜಿಪಿಎಸ್, ಗೆಲಿಲಿಯೋ ಸೇರಿದಂತೆ ಅನೇಕ ಫೀಚರ್ಸ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.


Click it and Unblock the Notifications








