Home
Deal of the day

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್‌; ಈ ಫೋನಿಗೆ ಭರ್ಜರಿ ಆಫರ್‌!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿರುವ ಫ್ಲಿಪ್‌ಕಾರ್ಟ್‌ ತಾಣವು ಮೊಬೈಲ್‌ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ನೀಡುತ್ತಾ ಸಾಗಿದ್ದು, ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಸದ್ಯ ಒಪ್ಪೋ ಸಂಸ್ಥೆಯ ಕೆಲವು ಆಯ್ದ ಮೊಬೈಲ್‌ಗಳು ಡಿಸ್ಕೌಂಟ್‌ ಪಡೆದಿವೆ. ಆ ಪೈಕಿ ಒಪ್ಪೋ A18 (OPPO A18) ಮೊಬೈಲ್‌ ಸಖತ್ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿದ್ದು, ಮೊಬೈಲ್‌ ಪ್ರಿಯರ ಚಿತ್ತ ಸೆಳೆದಿದೆ. ಅಂದಹಾಗೆ ಒಪ್ಪೋ A18 ಫೋನ್‌ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಪವರ್‌ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A18 ಸ್ಮಾರ್ಟ್‌ಫೋನ್‌ ಶೇ. 40% ರಷ್ಟು ನೇರ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಅನ್ನು 9,499ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇಷ್ಟಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್ನಷ್ಟು ರಿಯಾಯಿತಿ ಕೂಡಾ ಲಭ್ಯವಾಗಲಿದೆ.

ಒಪ್ಪೋ ಫೋನ್‌ ಖರೀದಿಸುವ ಗ್ರಾಹಕರಿಗೆ ಗುಡ್‌ನ್ಯೂಸ್‌; ಈ ಫೋನಿಗೆ ಭರ್ಜರಿ ಆಫರ್‌!

ಅಂದಹಾಗೆ ಒಪ್ಪೋ A18 ಸ್ಮಾರ್ಟ್‌ಫೋನ್‌ ಗ್ಲೋವಿಂಗ್ ಬ್ಲೂ ಹಾಗೂ ಗ್ಲೋವಿಂಗ್ ಬ್ಲ್ಯಾಕ್‌ ಕಲರ್‌ ಆಯ್ಕೆ ಅನ್ನು ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಸಹ ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ A18 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒಪ್ಪೋ A18 ಫೀಚರ್ಸ್‌ ಹೀಗಿವೆ

ಒಪ್ಪೋ A18 ಸ್ಮಾರ್ಟ್‌ಫೋನ್‌ 6.56 ಇಂಚಿನ ಪೂರ್ಣ IPS LCD ಡಿಸ್‌ಪ್ಲೇ ಅನ್ನು ಹೊಂದಿದ್ದು, ಹಾಗೆಯೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಈ ಫೋನಿನ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲಿ ಇದ್ದು, ಇದು 89.90% ಸ್ಕ್ರೀನ್ ಟು ಬಾಡಿ ಅನುಪಾತ ಹೊಂದಿದೆ ಹಾಗೂ 720 ನಿಟ್ಸ್ ಬ್ರೈಟ್‌ನೆಸ್ ಅನ್ನು ಪಡೆದಿದೆ.

ಒಪ್ಪೋ A18 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಪವರ್‌ ಅನ್ನು ಇದು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಅನ್ನು ಹೊಂದಿದೆ. ಇದರ ಜೊತೆಗೆ ಈ ಫೋನ್ 4GB RAM + 128GB ಆಂತರಿಕ ಸೌಲಭ್ಯವನ್ನು ಈ ಫೋನ್‌ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ನಲ್ಲಿ 4 GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶ ಇದೆ.

ಒಪ್ಪೋ A18 ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದರ ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿ ಇದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 5 ಮೆಗಾ ಪಿಕ್ಸಲ್‌ನ ಕ್ಯಾಮೆರಾ ಅನ್ನು ಒದಗಿಸಲಾಗಿದೆ.

ಒಪ್ಪೋ A18 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕ ಚಾರ್ಜಿಂಗ್ ಅನ್ನು ಸಪೋರ್ಟ್ ಕಾಣಬಹುದಾಗಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಸಿಮ್ ಕಾರ್ಡ್ ಸ್ಲಾಟ್, 4G, Wi-Fi , ಬ್ಲೂಟೂತ್‌ v5.3, 3.5mm ಆಡಿಯೊ ಜಾಕ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ಇದರೊಂದಿಗೆ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಸಪೋರ್ಟ್‌ ಪಡೆದಿದೆ. ಜೊತೆಗೆ ಗ್ಲೋವಿಂಗ್ ಬ್ಲೂ ಹಾಗೂ ಗ್ಲೋವಿಂಗ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Greatest Price Discount on OPPO A18 in India. check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+