Home
Deal of the day

ಕರ್ವ್ಡ್ ಡಿಸ್‌ಪ್ಲೇ ಜೊತೆ 12GB+256GB ಸೌಲಭ್ಯ ಇರುವ ಈ ಫೋನ್ ಬೆಲೆ ಇಳಿಕೆ!

ಕರ್ವ್ಡ್‌ ಡಿಸ್‌ಪ್ಲೇ ಹಾಗೂ ಡಿಸೈನ್‌ ಮೂಲಕ ಮೊಬೈಲ್‌ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿರುವ ಇತ್ತೀಚಿನ ಕೆಲವು ಫೋನ್‌ಗಳ ಪೈಕಿ ಮೊಟೊರೊಲಾ ಎಡ್ಜ್‌ 50 ಪ್ರೊ (Motorola Edge 50 Pro 5G) ಸಹ ಒಂದಾಗಿದೆ. ಇದೀಗ ಈ ಫೋನ್‌ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದಿದ್ದು, ಈ ಮೂಲಕ ಹೊಸ ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ನೀಡಿದೆ. ಅಂದಹಾಗೆ ಈ ಫೋನ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸೌಲಭ್ಯ ಪಡೆದಿದೆ.

ಹೌದು, ಫ್ಲಿಪ್‌ಕಾರ್ಟ್‌ (Flipkart) ಇ ಕಾಮರ್ಸ್‌ ತಾಣದಲ್ಲಿ ಸದ್ಯ ಮೊಟೊರೊಲಾ ಎಡ್ಜ್‌ 50 ಪ್ರೊ (Motorola Edge 50 Pro 5G) ಮೊಬೈಲ್‌ ಶೇ. 28% ರಷ್ಟು ಆಫರ್‌ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಮೊಬೈಲ್‌ನ 12GB RAM + 256GB ವೇರಿಯಂಟ್‌ 29,999 ರೂ. ಗಳ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಮತ್ತಷ್ಟು ಕಡಿಮೆ ದರದಲ್ಲಿ ಫೋನ್‌ ಖರೀದಿಗೆ ಲಭ್ಯ.

ಕರ್ವ್ಡ್ ಡಿಸ್‌ಪ್ಲೇ ಜೊತೆ 12GB+256GB ಸೌಲಭ್ಯ ಇರುವ ಈ ಫೋನ್ ಬೆಲೆ ಇಳಿಕೆ!

ಹಾಗೆಯೇ ಮೊಟೊ ಸಂಸ್ಥೆಯ ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿಯೂ ಖರೀದಿಸಬಹುದು. ಇನ್ನು ಈ ಫೋನ್‌ 4500 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗಾದರೆ ಮೊಟೊರೊಲಾ ಎಡ್ಜ್‌ 50 ಪ್ರೊ ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್‌ 50 ಪ್ರೊ - ಫೀಚರ್ಸ್‌

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇಯು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಇದರೊಂದಿಗೆ ಸ್ಕ್ರೀನ್‌ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್‌ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್‌ ಬ್ರೈಟ್‌ನೆಸ್‌ ಸಪೋರ್ಟ್‌ ಸಹ ಪಡೆದಿದ್ದು, 3D ಕರ್ವ್‌ ಡಿಸ್‌ಪ್ಲೇ ರಚನೆ ಕೂಡಾ ಇದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಪಡೆದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹಾಗೂ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇನ್ನು ಈ ಫೋನ್‌ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ.

ಮೊಟೊರೊಲಾ ಎಡ್ಜ್‌ 50 ಪ್ರೊ ಮೊಬೈಲ್‌ 4500 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಇದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

English summary
Greatest Price Drop on Motorola Edge 50 Pro 5G Phone in Flipkart India. Check offer details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+