ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!.5200mAh ಬ್ಯಾಟರಿ..50MP ಕ್ಯಾಮೆರಾ!
ಇ ಕಾಮರ್ಸ್ ದಿಗ್ಗಜ ಅಮೆಜಾನ್ ವೆಬ್‌ಸೈಟ್ ಮೊಬೈಲ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್ ನೀಡುತ್ತಲೇ ಸಾಗಿದ್ದು, ಖರೀದಿದಾರರನ್ನು ಆಕರ್ಷಿಸಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಸದ್ಯ ಹಾನರ್ ಮೊಬೈಲ್ ಸಂಸ್ಥೆಯು ಹಾನರ್ 200 5G ಮೊಬೈಲ್ ಈಗಾಗಲೇ ಕ್ಯಾಮೆರಾ ಹಾಗೂ ಡಿಸೈನ್‌ನಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇದೀಗ ಈ ಫೋನ್ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.
ಹೌದು, ಅಮೆಜಾನ್ ವೆಬ್‌ಸೈಟ್‌ನಲ್ಲಿ ಹಾನರ್ 200 5G (Honor 200 5G) ಮೊಬೈಲ್ ಶೇ. 33% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 8GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 26,998ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್ ಪಡೆದರೆ, ಇನ್ನಷ್ಟು ರಿಯಾಯಿತಿ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ.

ಈ ಮೊಬೈಲ್ 5200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಮೂನ್‌ಲೈಟ್ ವೈಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಮೆಜಾನ್‌ನಲ್ಲಿ ಹಾನರ್ 200 5G ಫೋನ್ ಡಿಸ್ಕೌಂಟ್‌ನಲ್ಲಿ ಲಭ್ಯ. ಇನ್ನುಳಿದಂತೆ ಹಾನರ್ 200 5G (Honor 200 5G) ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಹಾನರ್ 200 5G - ಫೀಚರ್ಸ್
ಹಾನರ್ 200 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು ಕ್ವಾಡ್ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡಲಿದೆ.
ಹಾನರ್ 200 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಫೋನ್ MagicOS 8 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಇದು ಪಡೆದಿದೆ.
ಹಾನರ್ 200 5G ಮೊಬೈಲ್ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಹಾನರ್ 200 5G ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಗೈರೊಸ್ಕೋಪ್, ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸರ್ ಆಯ್ಕೆಗಳು ಇವೆ.
ಅಂದಾಹಗೆ ಹಾನರ್ 200 5G ಫೋನ್ 8GB RAM + 256GB ವೇರಿಯಂಟ್ ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ ಇದೆ. ಹಾಗೆಯೇ ಈ ಮೊಬೈಲ್ ಬ್ಲ್ಯಾಕ್ ಹಾಗೂ ಮೂನ್‌ಲೈಟ್ ವೈಟ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ.


Click it and Unblock the Notifications








