Home
Deal of the day

ಕೇವಲ 14,485 ರೂ.! 108MP ಕ್ಯಾಮೆರಾ.. 256GB ಸ್ಟೋರೇಜ್.. 5,514 ರೂ. ಉಳಿತಾಯ; ಯಾವ ಫೋನ್?

ಒನ್‌ಪ್ಲಸ್ ಪ್ರಿಯರು ಸಂತೋಷ ಪಡಲು ಇಷ್ಟು ಸಾಕು! ಒಂದು ಕಡೆ ಇಂದು ಒನ್‌ಪ್ಲಸ್ 13 (OnePlus 13) ಬಿಡುಗಡೆಯಾಗಲಿದೆ. ಇತ್ತ, ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G (OnePlus Nord CE 3 Lite 5G) ಫೋನಿನ ಬೆಲೆ ದಿಢೀರ್ ಕುಸಿದಿದೆ. ಜೊತೆಗೆ ಬ್ಯಾಂಕ್ ಆಫರ್‌, ಇಎಂಐ ಸೌಲಭ್ಯ ಮತ್ತು ಎಕ್ಸ್‌ಚೇಂಜ್ ಆಫರ್‌ ಲಭ್ಯವಿದೆ. ನೀವು, ಕೇವಲ 15,000 ರೂ. ಒಳಗಡೆ ಈ ಮೊಬೈಲ್ ಖರೀದಿಸಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G ಫೋನ್ 108 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 6.72 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಆಫರ್‌ ತಿಳಿಯಲು ಮುಂದೆ ಓದಿ.

5,514 ಉಳಿತಾಯ! 108MP ಕ್ಯಾಮೆರಾ, 256GB ಸ್ಟೋರೇಜ್.. ಯಾವ ಫೋನ್?

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G ಫೀಚರ್ಸ್‌

ಡಿಸ್ಪ್ಲೇ ಹೇಗಿದೆ

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2400 x 1080 ಪಿಕ್ಸೆಲ್‌ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್‌ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 619 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 13 ಆಧಾರಿತ ಒನ್‌ಪ್ಲಸ್‌ನ Oxygen ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ ಫೋನ್ 8GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್‌ ಹೆಚ್ಚಿಸಬಹುದು.

108 ಮೆಗಾಪಿಕ್ಸೆಲ್ ಕ್ಯಾಮೆರಾ

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಪಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ.

ಒನ್‌ಪ್ಲಸ್ ನಾರ್ಡ್‌ CE 3 ಲೈಟ್‌ 5G ಬೆಲೆ

ಒನ್‌ಪ್ಲಸ್ ನಾರ್ಡ್‌ CE 4 ಲೈಟ್‌ 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 19,999 ರೂ. ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಶೇ.26 ರಷ್ಟು ಡಿಸ್ಕೌಂಟ್ ಲಭ್ಯವಿದೆ. ಯಾವುದೇ ಬ್ಯಾಂಕ್ ಕಾರ್ಡ್‌ಗಳಿಲ್ಲದೆ, ಕೇವಲ 14,485 ರೂ.ಗೆ ಈ ಫೋನ್ ಖರೀದಿಸಬಹುದು. ಈ ಮೂಲಕ 5,514 ರೂ. ಉಳಿತಾಯ ಮಾಡಬಹುದು. ಈ ಮೊಬೈಲ್ ಲೈಮ್ ಮತ್ತು ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

Best Mobiles in India

English summary
Huge Discount on Oneplus Nord CE 3 Lite 5G in flipkart: Check New Price and Offer Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+