Home
Deal of the day

Realme GT 6T 5G ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್‌; ಗ್ರಾಹಕರಿಗೆ ಫುಲ್ ಖುಷಿ!

ಸದ್ಯ ಅಮೆಜಾನ್ ತಾಣದಲ್ಲಿ ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 (Amazon Great Indian Festival 2024) ಮಾರಾಟ ಜೋರಾಗಿ ನಡೆಯುತ್ತಿದೆ. ಈ ಮಾರಾಟದಲ್ಲಿ ಜನಪ್ರಿಯ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಡಿಸ್ಕೌಂಟ್‌ ದರದಲ್ಲಿ ಫೋನ್‌ ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿದೆ. ಅಮೆಜಾನ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ GT 6T (realme GT 6T 5G) ಭರ್ಜರಿ ಆಫರ್‌ ಪಡೆದಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ರಿಯಲ್‌ಮಿ GT 6T (realme GT 6T 5G) ಸ್ಮಾರ್ಟ್‌ಫೋನ್‌ ಶೇ. 12% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB + 128 GB ಸ್ಟೋರೇಜ್‌ ವೇರಿಯಂಟ್‌ 29,998ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ ಕಾರ್ಡ್‌ ಮೂಲಕ ಖರೀದಿ ಮಾಡಿದರೆ, 24999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಸಬಹುದು.

Realme GT 6T 5G ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್‌; ಗ್ರಾಹಕರಿಗೆ ಫುಲ್ ಖುಷಿ!

ಇನ್ನು ರಿಯಲ್‌ಮಿ ಸಂಸ್ಥೆಯ ಈ ಫೋನ್ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಜೊತೆಗೆ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ರಿಯಲ್‌ಮಿ GT 6T ಮೊಬೈಲ್‌ನ ಇತರೆ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ GT 6T 5G - ಫೀಚರ್ಸ್ ಮಾಹಿತಿ

ರಿಯಲ್‌ಮಿ GT 6T 5G ಸ್ಮಾರ್ಟ್‌ಫೋನ್‌ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನಿನ 6000 nits ಪೀಕ್ ಬ್ರೈಟ್ನೆಸ್‌, 120Hz ರಿಫ್ರೆಶ್‌ ರೇಟ್‌ ಸೌಲಭ್ಯ ಜೊತೆಗೆ ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಸೌಲಭ್ಯ ಸಹ ಕಾಣಬಹುದಾಗಿದೆ

ರಿಯಲ್‌ಮಿ GT 6T 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್ 7+ ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ. ಅಲ್ಲದೇ ಈ ಫೋನ್‌ 8GB + 128GB, 8GB + 256GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಜೊತೆಗೆ Adreno 732 GPU ಬೆಂಬಲ ಸಹ ಇದೆ.

ರಿಯಲ್‌ಮಿ GT 6T 5G ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸೌಲಭ್ಯ ಒಳಗೊಂಡಿದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ.

ರಿಯಲ್‌ಮಿ GT 6T 5G ಸ್ಮಾರ್ಟ್‌ಫೋನ್‌ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಲಭ್ಯ. ಇನ್ನು ಈ ಫೋನ್‌ ರೇಜರ್‌ ಗ್ರೀನ್‌ ಹಾಗೂ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Huge Price Cut on Realme GT 6T 5G on Amazon Great Indian Festival Sale 2024. check other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+