Home
Deal of the day

ಅತ್ಯುತ್ತಮ ಕ್ಯಾಮೆರಾ ಇರುವ ಈ ದೈತ್ಯ ಫೋನ್‌ ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌!

ಅಮೆಜಾನ್‌ ವೆಬ್‌ಸೈಟ್‌ ಎಲ್ಲ ಮಾದರಿಯ ಫೋನ್‌ಗಳಿಗೂ ಒಂದಿಲ್ಲೊಂದು ರಿಯಾಯಿತಿ ಕೊಡುಗೆ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಇದೀಗ ಅಮೆಜಾನ್‌ ಪ್ಲಾಟ್‌ಫಾರ್ಮ್ ಆಯ್ದ ಕೆಲವು ಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಘೋಷಿಸಿದ್ದು, ಆ ಲಿಸ್ಟ್‌ನಲ್ಲಿ ಐಕ್ಯೂ ಕಂಪನಿಯ ಪ್ರೀಮಿಯಂ ಫೋನ್‌ಗಳಲ್ಲಿ ಒಂದಾದ ಐಕ್ಯೂ 12 5G (iQOO 12 5G) ಮೊಬೈಲ್‌ ವಾವ್‌ ಎನಿಸುವ ದರದಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸಯಟ್‌ನಲ್ಲಿ ಐಕ್ಯೂ 12 5G (iQOO 12 5G) ಮೊಬೈಲ್‌ ಶೇ. 12% ರಷ್ಟು ನೇರ ರಿಯಾಯಿತಿ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ 52,999ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ಗಳು ಕೂಡಾ ಖರೀದಿದಾರರಿಗೆ ಲಭ್ಯ ಸಿಗಲಿವೆ.

ಅತ್ಯುತ್ತಮ ಕ್ಯಾಮೆರಾ ಇರುವ ಈ ದೈತ್ಯ ಫೋನ್‌ ಬೆಲೆಯಲ್ಲಿ ಭಾರೀ ಡಿಸ್ಕೌಂಟ್‌!

ಅಂದಹಾಗೆ ಈ ಮೊಬೈಲ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಸಹ ಹೊಂದಿದೆ. ಹಾಗೆಯೇ ಈ ಫೋನ್‌ 16 GB RAM ಮತ್ತು 512 GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಐಕ್ಯೂ 12 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ 12 5G ಫೀಚರ್ಸ್‌
ಐಕ್ಯೂ 12 5G ಫೋನ್‌ 6.78 ಇಂಚಿನ 1.5K LTPO OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 2160Hz PWM ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದೆ.

ಐಕ್ಯೂ 12 5G ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು 16 GB RAM ಮತ್ತು 512 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಐಕ್ಯೂ 12 5G ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಐಕ್ಯೂ 12 5G ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 120W ವರೆಗಿನ ಫಾಸ್ಟ್‌ ಚಾರ್ಜಿಂಗ್ ಸಾಮರ್ಥ್ಯ ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, ತಲ್ಲೀನಗೊಳಿಸುವ ಆಡಿಯೊ ಅನುಭವಕ್ಕಾಗಿ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊಗೆ ಸಪೋರ್ಟ್‌ ಒದಗಿಸುತ್ತದೆ.

Best Mobiles in India

English summary
Huge Price Drop on iQOO 12 5G Phone in Amazon India. check out all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+