Home
Deal of the day

ಎರಡು ಡಿಸ್‌ಪ್ಲೇ ಇರುವ ಈ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್‌ ಉಳಿತಾಯ!

ದೀಪಾವಳಿ (Deepavali) ಹಬ್ಬದ ಅಂಗವಾಗಿ ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಬಹುತೇಕ ಎಲ್ಲ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. ಇನ್ನು ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ಈ ಆಫರ್‌ಗಳ ಸುರಿಮಳೆಯು ಹಬ್ಬದ ಸಂಭ್ರಮ ಹೆಚ್ಚಿಸಿದೆ. ಅಮೆಜಾನ್‌ನಲ್ಲಿ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಲಾವಾ ಸಂಸ್ಥೆಯು ಲಾವಾ ಅಗ್ನಿ 3 5G (Lava Agni 3 5G) ಮೊಬೈಲ್‌ ಗಮನಾರ್ಹ ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಅಗ್ನಿ 3 5G (Lava Agni 3 5G) ಸ್ಮಾರ್ಟ್‌ಫೋನ್‌ ಶೇ. 12% ನೇರ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 8GB + 128GB ವೇರಿಯಂಟ್‌ 22,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಲಭ್ಯ ಇರುವ ಬ್ಯಾಂಕ್‌ ಆಫರ್‌ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಫೋನ್‌ ಅನ್ನು ಇನ್ನಷ್ಟು ಡಿಸ್ಕೌಂಟ್‌ ದರದಲ್ಲಿ ಖರೀದಿ ಮಾಡಬಹುದು.

ಎರಡು ಡಿಸ್‌ಪ್ಲೇ ಇರುವ ಈ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್‌ ಉಳಿತಾಯ!

ಸ್ವದೇಶಿ ಲಾವಾ ಸಂಸ್ಥೆಯ ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದಿದೆ. ಹಾಗೆಯೇ ಡ್ಯುಯಲ್‌ ಡಿಸ್‌ಪ್ಲೇ ರಚನೆ ಈ ಫೋನಿನ ಪ್ರಮುಖ ಹೈಲೈಟ್‌ ಅಂಶಗಳಲ್ಲಿ ಒಂದಾಗಿದೆ. ಅಮೆಜಾನ್‌ ತಾಣದಲ್ಲಿಲಾವಾ ಲಾವಾ ಅಗ್ನಿ 3 5G (Lava Agni 3 5G) ಅನ್ನು ಭಾರೀ ಆಫರ್‌ನಲ್ಲಿ ಖರೀದಿಸಬಹುದು. ಹಾಗಾದರೇ ಲಾವಾ ಅಗ್ನಿ 3 5G ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಲಾವಾ ಅಗ್ನಿ 3 5G - ಫೀಚರ್ಸ್‌ ಮಾಹಿತಿ ಹೀಗಿವೆ

ಲಾವಾ ಅಗ್ನಿ 3 5G (Lava Agni 3 5G) ಫೋನ್‌ ಡ್ಯುಯಲ್‌ ಡಿಸ್‌ಪ್ಲೇ ರಚನೆ ಪಡೆದಿದೆ. ಇದರ ಪ್ರಾಥಮಿಕ ಡಿಸ್‌ಪ್ಲೇಯು 1.5K ರೆಸಲ್ಯೂಶನ್ ಕರ್ವ್ಡ್ AMOLED ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಹಾಗೆಯೇ ಇದರ ಸೆಕೆಂಡರಿ ಡಿಸ್‌ಪ್ಲೇಯು 1.74 ಇಂಚಿನ AMOLED ಸ್ಕ್ರೀನ್ ಆಗಿದ್ದು ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ ಕ್ಯಾಮೆರಾ ಮಾಡ್ಯೂಲ್ ಜೊತೆಗೆ ಇದೆ.

ಹಾಗೆಯೇ ಲಾವಾ ಅಗ್ನಿ 3 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300X ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್ ಸಹ ಇದೆ. ಹಾಗೆಯೇ ಈ ಫೋನ್‌ 8 GB + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. ಅಲ್ಲದೇ ಲಾವಾ ಅಗ್ನಿ 3 ಫೋನ್ ಕಸ್ಟಮೈಸ್ ಮಾಡಬಹುದಾದ ಆಕ್ಷನ್ ಬಟನ್ (ಇತ್ತೀಚಿನ ಆಪಲ್‌ ಐಫೋನ್‌ನಲ್ಲಿ ಇರುವಂತೆ) ಅನ್ನು ಕೂಡಾ ಪಡೆದಿದೆ.

ಹಾಗೆಯೇ ಲಾವಾ ಅಗ್ನಿ 3 5G (Lava Agni 3 5G) ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಹಾಗೆಯೇ ಇದು OIS ಸೌಲಭ್ಯ ಕೂಡಾ ಹೊಂದಿದೆ. ಇನ್ನು ಈ ಫೋನ್‌ 4700 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 66W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ.

Best Mobiles in India

English summary
Huge Price Drop on Lava Agni 3 5G on Amazon Sale. check out offer price, discount, camera and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+