Home
Deal of the day

Infinix: ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್! 108 MP ಕ್ಯಾಮೆರಾ..

ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್‌ಗಳು (Infinix Smartphones) ಅಗ್ಗದ ದರದಲ್ಲಿ ಅತ್ಯುತ್ತಮ ಫೀಚರ್ಸ್‌ ಆಯ್ಕೆ ಪಡೆದುಕೊಂಡಿವೆ. ಅದರಂತೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಪಡೆದುಕೊಂಡಿರುವ ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್‌ವೊಂದಕ್ಕೆ ಇದೀಗ ದೊಡ್ಡ ಮಟ್ಟದ ಆಫರ್ ನೀಡಲಾಗಿದೆ.

ಹೌದು, ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ಗೆ (Infinix Note 30 5G smartphone) ಇದೀಗ ಬಂಫರ್ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್‌ನ ಮುಖ್ಯ ಕ್ಯಾಮೆರಾ ಆಯ್ಕೆ ಪಡೆದಿದ್ದು, ಡೈಮೆನ್ಸಿಟಿ 6080 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಇದರ ಆಫರ್ ಬೆಲೆ ವಿವರ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್! 108 MP ಕ್ಯಾಮೆರಾ

ಇನ್ಫಿನಿಕ್ಸ್ ನೋಟ್‌ 30 5G ಆಫರ್ ಮಾಹಿತಿ: ಈ ಫೋನ್ 19,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 15,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಪ್ರಮುಖ ಇ-ಕಾಮರ್ಸ್‌ ಸೈಟ್‌ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್‌ಗೆ 22% ರಿಯಾಯಿತಿ ನೀಡಲಾಗಿದೆ. ಇದರೊಂದಿಗೆ ಬ್ಯಾಂಕ್‌ ಆಫರ್ ಇದ್ದು, ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಅನ್ನು ನಿಮ್ಮದಾಗಿಸಿಕೊಳ್ಳಬಹುದು.

ಈ ಫೋನ್ ಖರೀದಿ ಮಾಡುವಾಗ ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್‌ ಕಾರ್ಡ್‌ ಬಳಕೆ ಮಾಡಿದ್ರೆ 5% ಕ್ಯಾಶ್‌ಬ್ಯಾಕ್, ಫ್ಲಿಪ್‌ಕಾರ್ಟ್‌ ಯುಪಿಐ ಪಾವತಿ ಮೇಲೆ ಆಫರ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವ್ಯವಹಾರದ ಮೇಲೆ 1500ರೂ.ಗಳ ರಿಯಾಯಿತಿ, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್‌ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 20,000ರೂ.ಗಳ ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ರೆ, ಈ ಫೋನ್ ಈ ಬೆಲೆಗೆ ಸೂಕ್ತವೇ ಅನ್ನೋದನ್ನು ನೋಡೋಣ ಬನ್ನಿ.

ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್! 108 MP ಕ್ಯಾಮೆರಾ

ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.78 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಆಯ್ಕೆ ಹಾಗೂ 580 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದೆ. ಇದರ ಜೊತೆಗೆ 84.7% ಸ್ಕ್ರೀನ್-ಟು-ಬಾಡಿ ಅನುಪಾತ, 396 ಪಿಪಿಐ ಸಾಂದ್ರತೆ ಮೂಲಕ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.

ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ವಿವರ: ಈ ಫೋನ್ ಆಂಡ್ರಾಯ್ಡ್ 13 ಓಎಸ್‌ ಅನ್ನು ರನ್‌ ಮಾಡಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6080 (6 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G57 MC2 ಜಿಪಿಯು ಬಲ ಪಡೆದುಕೊಂಡಿದೆ. ಹಾಗೆಯೇ ಆಫರ್ ಬೆಲೆಗೆ ಲಭ್ಯ ಇರುವ ಫೋನ್ 8GB RAM ಹಾಗೂ 256GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್‌ ಆಯ್ಕೆ ಸಹ ನೀಡಲಾಗಿದೆ.

ಇನ್ಫಿನಿಕ್ಸ್ ನೋಟ್‌ 30 5G ಕ್ಯಾಮೆರಾ ರಚನೆ: ಈ ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದೆ. ಅಂದರೆ 108 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸರ್ ಹೊಂದಿದ್ದು, ಇದರ ಜೊತೆಗೆ ಕ್ಯೂವಿಜಿಎ, ಕ್ವಾಡ್-ಎಲ್ಇಡಿ ಫ್ಲ್ಯಾಶ್‌, ಹೆಚ್‌ಡಿಆರ್‌, ಪನೋರಮಾ ಫೀಚರ್ಸ್‌ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿದೆ.

ಇನ್ಫಿನಿಕ್ಸ್ ನೋಟ್‌ 30 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಆಫರ್! 108 MP ಕ್ಯಾಮೆರಾ

ಇನ್ಫಿನಿಕ್ಸ್ ನೋಟ್‌ 30 5G ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 45W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರ ಜೊತೆಗೆ ಡ್ಯುಯಲ್ ಸ್ಪೀಕರ್‌ಗಳೊಂದಿಗೆ 3.5 ಎಂಎಂ ಜ್ಯಾಕ್, 24-ಬಿಟ್/192kHz ಹೈ-ರೆಸ್ ಆಡಿಯೋ ಹಾಗೂ ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಯುಎಸ್‌ಬಿ ಟೈಪ್-ಸಿ 2.0 ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.

Best Mobiles in India

English summary
Infinix Note 30 5G got best offer in flipkart. This phone has a regular price of Rs 19,999 and you can now buy it at an offer price of Rs 15,499.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+