Home
Deal of the day

ಸಿಹಿಸುದ್ದಿ.. 12000 ಸಾಕು! Infinix Note 40X 5G ಬೆಲೆ ಇಳಿಕೆ; ಜೊತೆಗೆ 5000 ಡಿಸ್ಕೌಂಟ್

ಇನ್ಫಿನಿಕ್ಸ್‌ (Infinix) ಸಂಸ್ಥೆಯು ಬಜೆಟ್‌ ಬೆಲೆಗೆ ಉತ್ತಮ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ, ಈಗಾಗಲೇ ಪರಿಚಯಿಸಿರುವ ಮೊಬೈಲ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಸಹ ನೀಡುತ್ತಿದೆ. ಈ ಮೂಲಕ ತನ್ನ ಗ್ರಾಹಕರನ್ನು ಸೆಳೆಯುವಲ್ಲಿ ಸೈ ಎನಿಸಿಕೊಂಡಿದೆ. ಅದರಂತೆ, ಇನ್ಫಿನಿಕ್ಸ್‌ ನೋಟ್‌ 40X 5G (Infinix Note 40X 5G) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ನಿಮಗೆ, 4000 ರೂ.ಗಿಂತ ಹೆಚ್ಚು ರಿಯಾಯಿತಿ ಸಿಗುತ್ತದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ.

ಕಂಪನಿಯು ಇನ್ಫಿನಿಕ್ಸ್‌ ನೋಟ್‌ 40X 5G (Infinix Note 40X 5G) ಫೋನನ್ನು 12,000 ರೂ. ಬಜೆಟ್‌ನಲ್ಲಿ ಖರೀದಿಸುವ ಅವಕಾಶ ಕಲ್ಪಿಸಿದೆ. ಈ ಮೊಬೈಲ್‌ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಆಕ್ಟಾಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಫೋನಿನಲ್ಲಿ 6.78-ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ 12GB RAM + 256GB,ಸ್ಟೋರೇಜ್‌, 5000mAh ಬ್ಯಾಟರಿ ಮತ್ತು 8W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

12000 ಸಾಕು! Infinix Note 40X 5G ಬೆಲೆ ಇಳಿಕೆ; 5000 ಡಿಸ್ಕೌಂಟ್ ಸಿಗುತ್ತೆ

ಇನ್ಫಿನಿಕ್ಸ್‌ ನೋಟ್‌ 40X 5G ಬೆಲೆ ಮತ್ತು ಆಫರ್‌ಗಳು

ಕಂಪನಿಯು ಇನ್ಫಿನಿಕ್ಸ್‌ ನೋಟ್‌ 40X 5G ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟ ಮಾಡುತ್ತಿದೆ. ಫೋನಿನ 12GB + 256GB ಸ್ಟೋರೇಜ್‌ ಅನ್ನು 15,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 14,499 ರೂ.ಗೆ ಲಭ್ಯವಿದೆ. ಕಂಪನಿಯು 2,000 ತ್ವರಿತ ರಿಯಾಯಿತಿ ನೀಡುತ್ತಿದೆ. ನೀವು, ಡಿಸ್ಕೌಂಟ್‌ನೊಂದಿಗೆ ಕೇವಲ 12,499 ರೂ.ಗೆ ಫೋನ್ ಕೊಳ್ಳಬಹುದು.

ಐಸಿಐಸಿಐ ಡೆಬಿಟ್ ಕಾರ್ಡ್ ಮೇಲೆ 2,000 ರೂ. ಡಿಸ್ಕೌಂಟ್ ಲಭ್ಯವಿದೆ. ಎಸ್‌ಬಿಐ ಮತ್ತು ಆಕ್ಸಿಸ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ 1,000 ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ 10,300 ರೂ. ಎಕ್ಸ್‌ಚೇಂಜ್‌ ಆಫರ್‌ ಸಹ ಲಭ್ಯವಿದೆ. ಒಟ್ಟಾರೆಯಾಗಿ, ನೀವು 12,000 ರೂ.ಗೆ ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್ ಕೊಳ್ಳಬಹುದು. ಈ ಫೋನ್‌ ಕಪ್ಪು, ಲೈಮ್ ಗ್ರೀನ್, ಪಾಮ್ ಬ್ಲೂ ಮತ್ತು ಸ್ಟಾರ್ ಲೈಟ್ ಬ್ಲಾಕ್‌ ಬಣ್ಣಗಳಲ್ಲಿ ಲಭ್ಯವಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.

ಇನ್ಫಿನಿಕ್ಸ್‌ ನೋಟ್‌ 40X 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಇನ್ಫಿನಿಕ್ಸ್‌ ನೋಟ್‌ 40X 5G ಸ್ಮಾರ್ಟ್‌ಫೋನ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2460 ಪಿಕ್ಸೆಲ್ ರೆಸಲ್ಯೂಶನ್‌, 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ XOS 14 ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ.

ಸ್ಟೋರೇಜ್ ಆಯ್ಕೆ

ಇನ್ಫಿನಿಕ್ಸ್‌ ನೋಟ್‌ 40X 5G ಫೋನ್ 12GB RAM + 8GB RAM, 256GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಮೈಕ್ರೊ ಎಸ್‌ಡಿ ಜೊತೆಗೆ 1TB ವರೆಗೆ ವಿಸ್ತರಿಸಬಹುದಾದ ಮೆಮೊರಿ ಸಹ ಲಭ್ಯವಿದೆ. ಈ ಫೋನ್ ವರ್ಚುವಲ್ RAM ತಂತ್ರಜ್ಞಾನ ಸಹ ಹೊಂದಿದೆ.

ಕ್ಯಾಮೆರಾ ಸೆಟಪ್

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಎಐ (AI) ತಂತ್ರಜ್ಞಾನದೊಂದಿಗೆ ಕ್ವಾಡ್ ಎಲ್‌ಇಡಿ ಫ್ಲ್ಯಾಷ್ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ಇನ್ಫಿನಿಕ್ಸ್‌ ನೋಟ್‌ 40X 5G ಫೋನಿನಲ್ಲಿ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
Infinix Note 40X 5G Available With 34 percent discount on flipkart sale: know price, offers, availability specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+