Wow: 108MP ಕ್ಯಾಮೆರಾ.. 5000mAh ಬ್ಯಾಟರಿ.. ಅತ್ಯಂತ ಕಡಿಮೆ ಬೆಲೆಗೆ ಸೇಲ್.. ಯಾವ ಫೋನ್?
ನಿಮಗೆ 15,000 ರೂ.ಗಿಂತ ಕಡಿಮೆ ಬೆಲೆಗೆ ಅತ್ಯುತ್ತಮ ಮುಖ್ಯ ಮತ್ತು ಸೆಲ್ಫಿ ಕ್ಯಾಮೆರಾ ಹೊಂದಿರುವ 5G ಫೋನ್ ಬೇಕೇ? ಅದರಲ್ಲೂ ಇನ್ಫಿನಿಕ್ಸ್ ಫೋನ್ ಹುಡುಕುತ್ತಿದ್ದರೆ, ಇಲ್ಲಿದೆ ಒಳ್ಳೆಯ ಅವಕಾಶ. ಹೌದು, ಇನ್ಫಿನಿಕ್ಸ್ ನೋಟ್ 40X 5G (Infinix Note 40X 5G) ಮೊಬೈಲ್ ನಿಮಗೆ ಅತ್ಯುತ್ತಮ ಆಯ್ಕೆಯಾಗಿದೆ. ಪ್ರಸ್ತುತ, ಈ ಇನ್ಫಿನಿಕ್ಸ್ 5G ಫೋನನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನೀವು 1000 ಸಾವಿರ ರಿಯಾಯಿತಿಯೊಂದಿಗೆ ಖರೀದಿಸಬಹುದು. ಬ್ಯಾಂಕ್ ಕಾರ್ಡ್ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗನ್ನು ನೋಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಇದೆ. ಹಾಗೆಯೇ 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, ಈ ಫೋನನ್ನು ಖರೀದಿಸಿದರೆ 9,900 ರೂ. ಎಕ್ಸ್‌ಚೇಂಜ್ ಆಫರ್ ಸಹ ಪಡೆಯಬಹುದು.

ಇನ್ಫಿನಿಕ್ಸ್ ನೋಟ್ 40X 5G ಬೆಲೆ ಮತ್ತು ಆಫರ್
ಇನ್ಫಿನಿಕ್ಸ್ ನೋಟ್ 40X 5G ಫೋನನ್ನು 19,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಇದು 8GB RAM + 256GB ಸ್ಟೋರೇಜ್ ರೂಪಾಂತರದ ದರವಾಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿಯೊಂದಿಗೆ 15,999 ರೂ.ಗೆ ಮಾರಾಟವಾಗುತ್ತಿದೆ. ಜೊತೆಗೆ 1000 ರೂ. ಬ್ಯಾಂಕ್ ಡಿಸ್ಕೌಂಟ್ ಸಿಗುತ್ತದೆ. ನೀವು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಇನ್ಫಿನಿಕ್ಸ್ ಫೋನ್ 9,900 ರೂ.ಗಳವರೆಗೆ ಎಕ್ಸ್‌ಚೇಂಜ್ ಆಫರ್ ಪಡೆದಿದೆ. ಈ ಮೊಬೈಲ್ ಕಪ್ಪು, ಲೈಮ್ ಗ್ರೀನ್, ಪಾಮ್ ಬ್ಲೂ ಮತ್ತು ಸ್ಟಾರ್ ಲೈಟ್ ಬ್ಲಾಕ್ ಬಣ್ಣಗಳಲ್ಲಿ ಮಾರಾಟವಾಗುತ್ತಿದೆ.
ಇನ್ಫಿನಿಕ್ಸ್ ನೋಟ್ 40X 5G ವೈಶಿಷ್ಟ್ಯಗಳು
ಇನ್ಫಿನಿಕ್ಸ್ ನೋಟ್ 40X 5G ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು ಫುಲ್ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 1,080 x 2,460 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುತ್ತದೆ. ಈ ಇನ್ಫಿನಿಕ್ಸ್ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ XOS 14 ನಲ್ಲಿ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ.
ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಎಐ (AI) ತಂತ್ರಜ್ಞಾನದೊಂದಿಗೆ ಕ್ವಾಡ್ ಎಲ್‌ಇಡಿ ಫ್ಲ್ಯಾಷ್ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಇನ್ಫಿನಿಕ್ಸ್ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಇನ್ಫಿನಿಕ್ಸ್ ನೋಟ್ 40X 5G ಸ್ಮಾರ್ಟ್‌ಫೋನ್ 12GB RAM, 8GB RAM ಮತ್ತು 256GB ಸ್ಟೋರೇಜ್ ಹೊಂದಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು. ಈ ಫೋನ್ ವರ್ಚುವಲ್ RAM ತಂತ್ರಜ್ಞಾನ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








