12GB RAM ಇರುವ ಈ ಮೊಬೈಲ್‌ಗೆ ಈಗ ಬಂಪರ್ ಡಿಸ್ಕೌಂಟ್!..ಗ್ರಾಹಕರು ಫುಲ್ ಖುಷ್!
ಜನಪ್ರಿಯ ಇ ಕಾಮರ್ಸ್ ಆಗಿರುವ ಫ್ಲಿಪ್‌ಕಾರ್ಟ್ ದೀಪಾವಳಿ ಹಬ್ಬದ ಅಂಗವಾಗಿ ಆಯ್ದ ಮೊಬೈಲ್‌ಗಳಿಗೆ ಸ್ಪೆಷಲ್ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಇನ್ಫಿನಿಕ್ಸ್ ಸಂಸ್ಥೆಯು ಇನ್ಫಿನಿಕ್ಸ್ ಜಿರೋ 40 5G (Infinix Zero 40 5G) ಫೋನ್ ಸಖತ್ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM + 256GB ಹಾಗೂ 12GB RAM + 512GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಆಯೋಜಿಸಿರುವ ದೀಪಾವಳಿ ಸೇಲ್‌ನಲ್ಲಿ ಇನ್ಫಿನಿಕ್ಸ್ ಜಿರೋ 40 5G (Infinix Zero 40 5G) ಫೋನ್ ಶೇ. 26% ರಷ್ಟು ನೇರ ಡಿಸ್ಕೌಂಟ್ ದರಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 12 GB RAM + 256 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 27,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಅಂದಹಾಗೆ ಇನ್ಫಿನಿಕ್ಸ್ ಜಿರೋ 40 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಡೈಮೆನ್ಸಿಟಿ 8200 ಅಲ್ಟಿಮೇಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಇನ್ಫಿನಿಕ್ಸ್ ಜಿರೋ 40 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಇನ್ಫಿನಿಕ್ಸ್ ಜಿರೋ 40 5G - ಫೀಚರ್ಸ್
ಇನ್ಫಿನಿಕ್ಸ್ ಜಿರೋ 40 5G ಫೋನ್ 6.74 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಜೊತೆಗೆ 144Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 1,300 nits ಗರಿಷ್ಠ ಬ್ರೈಟ್ನೆಸ್ ಸೌಲಭ್ಯ ಸಹ ಪಡೆದಿದೆ.
ಇನ್ಫಿನಿಕ್ಸ್ ಜಿರೋ 40 5G ಫೋನ್ ಡೈಮೆನ್ಸಿಟಿ 8200 ಅಲ್ಟಿಮೇಟ್ ಪ್ರೊಸೆಸರ್ (Dimensity 8200 Ultimate) ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇದೆ. ಅಲ್ಲದೇ ಇದು 8GB RAM (16GB ವಿಸ್ತೃತ RAM) ಮತ್ತು 512GB ವರೆಗೆ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ಜಿರೋ 40 5G ಫೋನ್ ಮೂರು ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಇನ್ನೆರಡು ಕ್ಯಾಮೆರಾಗಳು ಕ್ರಮವಾಗಿ 50 ಮೆಗಾ ಪಿಕ್ಸಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸಲ್ ಡೆಪ್ತ್ ಸೆನ್ಸಾರ್ ಸೌಲಭ್ಯ ಒಳಗೊಂಡಿವೆ. ಅಲ್ಲದೇ ಮುಂಭಾಗದಲ್ಲಿ 50 ಮೆಗಾ ಪಿಕ್ಸಲ್ ಅಲ್ಟ್ರಾ-ವೈಡ್ ಕ್ಯಾಮೆರಾ ನೀಡಲಾಗಿದೆ.
ಇನ್ಫಿನಿಕ್ಸ್ ಜಿರೋ 40 5G ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಇದೆ. ಹಾಗೆಯೇ 20W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಕೂಡಾ ಹೊಂದಿದೆ. ಇನ್ನು ಈ ಫೋನ್ ಆಂಡ್ರಾಯ್ಡ್ 14 ಆಧಾರಿತ XOS 14.5, ಎರಡು ವರ್ಷಗಳ OS ಅಪ್‌ಗ್ರೇಡ್‌ಗಳು, ಮೂರು ವರ್ಷಗಳ ಭದ್ರತಾ ನವೀಕರಣಗಳ ಆಯ್ಕೆ ಪಡೆದಿದೆ. AI ಆಯ್ಕೆಗಳು ಇವೆ.


Click it and Unblock the Notifications








