Home
Deal of the day

ಭಾರೀ ಡಿಸ್ಕೌಂಟ್‌ನಲ್ಲಿ ಹೈ ಎಂಡ್‌ ಫೋನ್‌ ಖರೀದಿಸಬೇಕೆ? ಈ ಆಫರ್‌ ಬಿಡಬೇಡಿ!

ವಿವೋ ಸಂಸ್ಥೆಯ ಸಬ್‌ ಬ್ರ್ಯಾಂಡ್‌ ಆಗಿರುವ ಐಕ್ಯೂ ಮೊಬೈಲ್‌ ಕಂಪನಿಯು ಕೆಲವು ಫ್ಲ್ಯಾಗ್‌ಶಿಪ್‌ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯ ಹೈ ಎಂಡ್‌ ಫೋನ್‌ಗಳ ಪೈಕಿ ಐಕ್ಯೂ 12 5G (iQOO 12 5G) ಮೊಬೈಲ್‌ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ಹೌದು, ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಐಕ್ಯೂ 12 5G (iQOO 12 5G) ಮೊಬೈಲ್‌ ಶೇ. 12% ರಷ್ಟು ನೇರ ಡಿಸ್ಕೌಂಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 52,998ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ಗಳು ಕೂಡಾ ಖರೀದಿದಾರರಿಗೆ ಸಿಗಲಿವೆ.

ಭಾರೀ ಡಿಸ್ಕೌಂಟ್‌ನಲ್ಲಿ ಹೈ ಎಂಡ್‌ ಫೋನ್‌ ಖರೀದಿಸಬೇಕೆ? ಈ ಆಫರ್‌ ಬಿಡಬೇಡಿ!

ಐಕ್ಯೂ 12 5G ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಸಹ ಹೊಂದಿದ್ದು, ಇದು 16GB RAM ಮತ್ತು 512GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಅಮೆಜಾನ್‌ ತಾಣದಲ್ಲಿ iQOO 12 5G ಫೋನ್‌ ರಿಯಾಯಿತಿ ದರದಲ್ಲಿ ಖರೀದಿಸಬಹುದು. ಹಾಗಾದರೇ ಐಕ್ಯೂ 12 5G ಫೋನ್‌ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ 12 5G - ಫೀಚರ್ಸ್‌

ಐಕ್ಯೂ 12 5G ಸ್ಮಾರ್ಟ್‌ಫೋನ್‌ 6.78 ಇಂಚಿನ 1.5K LTPO OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, 2160Hz PWM ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದ್ದು, ಕಣ್ಣಿಗೆ ಸುರಕ್ಷತೆಯನ್ನು ಒದಗಿಸಲಿದೆ.

ಐಕ್ಯೂ 12 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 ನಲ್ಲಿ ರನ್‌ ಆಗಲಿದೆ. ಇನ್ನು ಗೇಮಿಂಗ್ ಅನುಭವಗಳನ್ನು ಹೆಚ್ಚಿಸಲು ಮತ್ತು ಫ್ರೇಮ್ ದರಗಳನ್ನು ಆಪ್ಟಿಮೈಜ್ ಮಾಡಲು, ಮೀಸಲಾದ Q1 ಚಿಪ್‌ಸೆಟ್ ಅನ್ನು ಡಿವೈಸ್‌ನ ಆರ್ಕಿಟೆಕ್ಚರ್‌ಗೆ ಸಂಯೋಜಿಸಲಾಗಿದೆ. ಹಾಗೆಯೇ 16GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ಐಕ್ಯೂ 12 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದ್ದು, ತೃತೀಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಐಕ್ಯೂ 12 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಇದ್ದು, 120W ವರೆಗಿನ ಫಾಸ್ಟ್‌ ಚಾರ್ಜಿಂಗ್ ಸಾಮರ್ಥ್ಯ ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊಗೆ ಸಪೋರ್ಟ್‌ ಪಡೆದಿದೆ.

Best Mobiles in India

English summary
iQOO 12 5G receive fabulous price drop on amazon. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+