ಮೂರು 50MP ಕ್ಯಾಮೆರಾಗಳು.. 5000mAh ಬ್ಯಾಟರಿ.. iQOO 12 ಬೆಲೆ ಭರ್ಜರಿ ಇಳಿಕೆ!
ಐಕ್ಯೂ ಸಂಸ್ಥೆಯು ತನ್ನ ವಿಭಿನ್ನ ಮಾದರಿಯ ಮೊಬೈಲ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಇತ್ತೀಚೆಗೆ ಬಹುನಿರೀಕ್ಷಿತ ಐಕ್ಯೂ 13 (iQOO 13) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದೀಗ, ಐಕ್ಯೂ 12 (iQOO 12) ಫೋನಿನ ಬೆಲೆಯನ್ನು ದಿಢೀರನೆ ಇಳಿಕೆ ಮಾಡಿದೆ. ಹೌದು, ಅಮೆಜಾನ್‌ನಲ್ಲಿ ಐಕ್ಯೂ 12 ಫೋನಿನ ಖರೀದಿ ಮೇಲೆ ಶೇ.12 ರಷ್ಟು ರಿಯಾಯಿತಿ ನೀಡುತ್ತಿದೆ. ಇದಲ್ಲದೆ ಬ್ಯಾಂಕ್ ಆಫರ್ ಮತ್ತು ಶೇ.10 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ. ಈ ಫೋನಿನ ಹೊಸ ಬೆಲೆ ತಿಳಿಯೋಣ ಬನ್ನಿ.
ಐಕ್ಯೂ 12 ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 512GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಐಕ್ಯೂ 12 ಬೆಲೆ ಮತ್ತು ಲಭ್ಯತೆ
ಐಕ್ಯೂ 12 ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವನ್ನು 52,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. 16GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 57,999 ರೂ. ಆಗಿದೆ. ಅಮೆಜಾನ್‌ನಲ್ಲಿ ಐಸಿಐಸಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ 3,000 ರೂ. ರಿಯಾಯಿತಿ ನೀಡಲಾಗುತ್ತಿದೆ. ನೀವು, ಈ ಫೋನನ್ನು 49,999 ರೂ.ಗೆ ಖರೀದಿಸಬಹುದು. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.
ಐಕ್ಯೂ 12 ಫೀಚರ್ಸ್
6.78 ಇಂಚಿನ ಡಿಸ್ಪ್ಲೇ
ಐಕ್ಯೂ 12 ಮೊಬೈಲ್ 144 Hz ರಿಫ್ರೆಶ್ ದರದೊಂದಿಗೆ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 1200Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ.
ಕ್ವಾಲ್ಕಾಮ್ ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ 12 ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಅಡ್ರಿನೊ 750 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14ನಲ್ಲಿ ರನ್ ಆಗುತ್ತದೆ. ಫೋನಿನಲ್ಲಿ 16GB RAM ಮತ್ತು 512GB ಸ್ಟೋರೇಜ್ ಲಭ್ಯವಿದೆ.
ತ್ರಿವಳಿ ಕ್ಯಾಮೆರಾ ಸೆಟಪ್
ಐಕ್ಯೂ 12 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗೆಯೇ 64 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿಗಳು ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ ಪವರ್
ಐಕ್ಯೂ 12 ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ಚಾರ್ಜಿಂಗ್ ತತ್ರಜ್ಞಾನ ಒದಗಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ವೈ-ಫೈ 7, ಬ್ಲೂಟೂತ್ 5.4, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ 2.0 ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








