Amazon Great Summer Sale: ಸಾಲು ಸಾಲು ಆಫರ್! ಈ iQOO ಫೋನ್‌ಗಳಿಗೆ ಭಾರೀ ರಿಯಾಯಿತಿ.. ಈ ಚಾನ್ಸ್ ಬಿಡಬೇಡಿ.. ಇಲ್ಲಿದೆ ಪಟ್ಟಿ
ಮೊಬೈಲ್ ಪ್ರಿಯರಿಗೆ ಹಬ್ಬವೇ ಸರಿ! ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ ಬಂದಿದೆ.. ಸಾಲು ಸಾಲು ಆಫರ್ ತಂದಿದೆ. ಅದರಲ್ಲೂ ಐಕ್ಯೂ ಮೊಬೈಲ್ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ಇದೆ. ಹೌದು, ಐಕ್ಯೂ (iQOO) ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್‌ಗಾಗಿ (Amazon Great Summer Sale 2025) ಅತ್ಯಾಕರ್ಷಕ ಕೊಡುಗೆಗಳನ್ನು ಘೋಷಿಸಿದೆ. ಕಂಪನಿಯು ತನ್ನ ಕೆಲವು ಜನಪ್ರಿಯ ಮೊಬೈಲ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ಈ ವಿಶೇಷ ಮಾರಾಟದಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ರಿಯಾಯಿತಿ ಲಭ್ಯವಿದೆ ಎನ್ನುವುದನ್ನು ತಿಳಿಯೋಣ ಬನ್ನಿ.
ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ ಭಾಗವಾಗಿ ರಿಯಾಯಿತಿ ದರದಲ್ಲಿ ಲಭ್ಯವಿರುವ ಎಲ್ಲಾ ಐಕ್ಯೂ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಇವುಗಳಲ್ಲಿ ಐಕ್ಯೂ 13, ಐಕ್ಯೂ ನಿಯೋ 10R, ಐಕ್ಯೂ Z9 ಲೈಟ್, ಐಕ್ಯೂ Z9x, ಐಕ್ಯೂ Z9s ಮತ್ತು ಇನ್ನೂ ಹೆಚ್ಚಿನ ಮೊಬೈಲ್‌ಗಳು ಸೇರಿವೆ. ಈ ಫೋನ್‌ಗಳ ಹೊಸ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಅಮೆಜಾನ್ ಸೇಲ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಡೀಲ್‌ಗಳಿವು!
ಐಕ್ಯೂ 13 5G
ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಐಕ್ಯೂ 13 (iQOO 13) ಮೊಬೈಲ್ ಪ್ರಸ್ತುತ, ಕೇವಲ 51,999 ರೂ.ಗಳಿಗೆ ಲಭ್ಯವಿದೆ. ಈ ಐಕ್ಯೂ ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ವಿಶೇಷತೆಗಳೆಂದರೆ, ಈ ಮೊಬೈಲ್ 213 ಗ್ರಾಂ ತೂಕ ಮತ್ತು 8 ಎಂಎಂ ದಪ್ಪ ಹೊಂದಿದೆ. ಈ ಫೋನಿನಲ್ಲಿ 50MP + 50MP + 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.82 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ 12 5G
ಐಕ್ಯೂ 12 (iQOO 12) ಫೋನಿನ 12GB + 512GB ಸ್ಟೋರೇಜ್ ರೂಪಾಂತರವು 42,999 ರೂ.ಗಳಿಗೆ ಲಭ್ಯವಿದೆ. ಇದರೊಂದಿಗೆ ಉಚಿತ ಇಯರ್‌ಬಡ್‌ಗಳು ಸೇರಿವೆ. ಈ ಐಕ್ಯೂ ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50MP + 50MP + 64MP ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 512GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ ನಿಯೋ 10R
ಐಕ್ಯೂ ನಿಯೋ 10R (iQOO Neo 10R) ಸ್ಮಾರ್ಟ್‌ಫೋನ್ ಪ್ರಸ್ತುತ 24,999 ರೂ.ಗೆ ಲಭ್ಯವಿದೆ. ನೀವು ಮೊಬೈಲ್‌ನಲ್ಲಿ ಗೇಮಿಂಗ್ ಆಡಲು ಅಥವಾ ಬೃಹತ್ ಸ್ಟೋರೇಜ್ ಬಯಸಿದರೆ, ಐಕ್ಯೂ ನಿಯೋ 10R ಸ್ಮಾರ್ಟ್‌ಫೋನ್ ಉತ್ತಮ ಆಯ್ಕೆಯಾಗಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50MP ಮುಖ್ಯ ಮತ್ತು 32MP ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್, 6400mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ Z10 5G
ಇತ್ತೀಚೆಗೆ ಬಿಡುಗಡೆಯಾದ ಐಕ್ಯೂ Z10 (iQOO Z10) ಸಹ 19,999 ರೂ.ಗೆ ಮಾರಾಟವಾಗುತ್ತಿದೆ. ಈ ಐಕ್ಯೂ ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ.ಈ ಫೋನ್ 7,300mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 90W ಫ್ಲ್ಯಾಶ್ ಚಾರ್ಜ್ ತಂತ್ರಜ್ಞಾನವನ್ನು ಒದಗಿಸಲಾಗಿದೆ. ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಹಾಗೆಯೇ 12GB RAM + 256GB ಸ್ಟೋರೇಜ್, ಮಿಲಿಟರಿ ದರ್ಜೆಯ ಬಾಳಿಕೆ, IP65 ರೇಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ Z10x 5G
ಐಕ್ಯೂ Z10x 5G (iQOO Z10x 5G) ಅನ್ನು 13,249 ರೂ.ಗೆ ಖರೀದಿಸಬಹುದು. ಇದು ಬಜೆಟ್ ಸ್ನೇಹಿ ಮತ್ತು ಶಕ್ತಿಶಾಲಿ ಸ್ಮಾರ್ಟ್‌ಫೋನ್ ಆಗಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.72 ಇಂಚಿನ ಎಲ್‌ಸಿಡಿ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 6500mAh ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ Z9s
ಐಕ್ಯೂ Z9s (iQOO Z9s) ಈ ಮಾರಾಟದಲ್ಲಿ 16,999 ರೂ.ಗೆ ಲಭ್ಯವಿದೆ. ಈ ಮೊಬೈಲ್ 50MP ಸೋನಿ ಮುಖ್ಯ ಕ್ಯಾಮೆರಾ ಮತ್ತು 16MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಒಳಗೊಂಡಿದೆ. ಈ ಮೊಬೈಲ್ 6.77 ಇಂಚಿನ 3D ಕರ್ವ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 12GB RAM ಮತ್ತು 12GB ವಿಸ್ತೃತ RAM ಹೊಂದಿದೆ. ಇದರಲ್ಲಿ 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಹಾಗೆಯೇ 5500mAh ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಐಕ್ಯೂ Z9 ಲೈಟ್
ಐಕ್ಯೂ Z9 ಲೈಟ್ (iQOO Z9 Lite) ಸ್ಮಾರ್ಟ್‌ಫೋನ್ 9,499 ರೂ.ಗಳಿಗೆ ಮಾರಾಟವಾಗುತ್ತಿದೆ. ಈ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಇದು ಆಕ್ವಾ ಫ್ಲೋ ಮತ್ತು ಮೋಚಾ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ AI ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.56 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿಗೆ 6GB RAM + 128GB, 5000mAh ಬ್ಯಾಟರಿ ಸೇರಿದಂತೆ ಮುಂತಾದ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಐಕ್ಯೂ Z9x 5G
ಅಮೆಜಾನ್ ವಿಶೇಷ ಮಾರಾಟದಲ್ಲಿ ಐಕ್ಯೂ Z9x 5G (iQOO Z9x) ಬೆಲೆ ಕೇವಲ 9,999 ರೂ. ಆಗಿದೆ. ಈ ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನ್ 6.72 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. 6,000mAh ಬ್ಯಾಟರಿ, 44W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ವಿಶೇಷವೆಂದರೆ, ಎಲ್ಲಾ ಫೋನಿನ ಬೆಲೆಗಳು ಬ್ಯಾಂಕ್ ಆಫರ್ ಒಳಗೊಂಡಿವೆ. ಐಕ್ಯೂ 13, ಐಕ್ಯೂ 12, ಐಕ್ಯೂ ನಿಯೋ 10R, ಐಕ್ಯೂ Z10 ಮತ್ತು ಐಕ್ಯೂ Z9 ಫೋನ್‌ಗಳ ಆಯ್ದ ಮಾದರಿಗಳಲ್ಲಿ 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಸೌಲಭ್ಯವನ್ನು ನೀಡಲಾಗುತ್ತಿದೆ.


Click it and Unblock the Notifications








