iQOO Neo 9 Pro 5G ಬೆಲೆ ಇಳಿಕೆ; 3000 ಡಿಸ್ಕೌಂಟ್.. ಖರೀದಿ ಎಲ್ಲಿ?
ಐಕ್ಯೂ (iQOO) ತನ್ನ ಅಭಿಮಾನಿಗಳಿಗೆ ಎರಡು ಖುಷಿ ಸುದ್ದಿ ನೀಡಿದೆ. ಒಂದು, ಶೀಘ್ರದಲ್ಲೇ ಐಕ್ಯೂ ನಿಯೋ 10 ಪ್ರೊ (iQOO Neo 10 Pro) ಮೊಬೈಲ್ ಬಿಡುಗಡೆಯಾಗಲಿದೆ. ಮತ್ತೊಂದು, ಹೊಸ ಫೋನ್ ಬಿಡುಗಡೆಗೂ ಮೊದಲೇ, ಐಕ್ಯೂ ನಿಯೋ9 ಪ್ರೊ 5G ಬೆಲೆಯನ್ನು ಇಳಿಕೆ ಮಾಡಿದೆ. ಕಂಪನಿಯು ಈ ಫೋನಿನ ಖರೀದಿ ಮೇಲೆ 3,000 ರೂ.ಗಳ ರಿಯಾಯಿತಿಯನ್ನು ಘೋಷಿಸಿದೆ. ನೀವು, ಹೊಸ 5G ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕಂಪನಿಯು 2024ರ ಪ್ರಾರಂಭದಲ್ಲಿ ಐಕ್ಯೂ ನಿಯೋ9 ಪ್ರೊ 5G ಫೋನನ್ನು ಬಿಡುಗಡೆ ಮಾಡಿತ್ತು. ಇದನ್ನು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ, 1,000 ರೂ. ಫ್ಲಾಟ್ ಡಿಸ್ಕೌಂಟ್ ಮತ್ತು 2,000 ರೂ. ಬ್ಯಾಂಕ್ ರಿಯಾಯಿತಿಯನ್ನು ನೀಡಲಾಗುತ್ತಿದೆ. ನೀವು, ಈ ಮೊಬೈಲ್ ಕೊಂಡರೆ, ಒಟ್ಟಾರೆ 3,000 ರೂ. ಉಳಿತಾಯ ಮಾಡಬಹುದು. ಜೊತೆಗೆ, ನೋ ಕಾಸ್ಟ್ ಇಎಂಐ ಆಯ್ಕೆ ಮತ್ತು ಎಕ್ಸ್‌ಚೇಂಜ್ ಆಫರ್ ಕೂಡ ಲಭ್ಯವಿದೆ. ಫೋನಿನ ಹೊಸ ಬೆಲೆ ತಿಳಿಯಲು ಮುಂದೆ ಓದಿ.

ಐಕ್ಯೂ ನಿಯೋ9 ಪ್ರೊ 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ಐಕ್ಯೂ ನಿಯೋ9 ಪ್ರೊ 5G ಫೋನಿನ 8GB + 128GB ಸ್ಟೋರೇಜ್ ರೂಪಾಂತರವನ್ನು 35,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, 32,999 ರೂ.ಗಳಿಗೆ ಮಾರಾಟ ಮಾಡುತ್ತಿದೆ. 8GB + 256GB ಸ್ಟೋರೇಜ್ ಅನ್ನು 37,999 ರೂ.ಗೆ ಪರಿಚಯಿಸಲಾಗಿತ್ತು. ಇದು ಡಿಸ್ಕೌಂಟ್‌ನೊಂದಿಗೆ 34,999 ರೂ.ಗೆ ಲಭ್ಯವಿದೆ. ಇನ್ನೂ 12GB + 256GB ಸ್ಟೋರೇಜ್ ವೇರಿಯಂಟ್ ಅನ್ನು 39,999 ರೂ.ಗೆ ಪ್ರಾರಂಭಿಸಲಾಗಿತ್ತು. ಪ್ರಸ್ತುತ ನೀವು, 36,999 ರೂ.ಗೆ ಖರೀದಿಸಬಹುದು.
ಕಂಪನಿಯು ನೋ ಕಾಸ್ಟ್ ಇಎಂಐ ಆಯ್ಕೆಯನ್ನು ನೀಡುತ್ತಿದೆ. ನೀವು, 3 ರಿಂದ 6 ತಿಂಗಳ ಸುಲಭ ಕಂತುಗಳಲ್ಲಿ ಈ ಫೋನನ್ನು ಕೊಳ್ಳಬಹುದು. ಜೊತೆಗೆ ಎಕ್ಸ್‌ಚೇಂಜ್ ಆಫರ್ ಕೂಡ ಸಿಗುತ್ತದೆ. ನಿಮ್ಮ ಹಳೆಯ ಮೊಬೈಲ್ ಮಾರಾಟ ಮಾಡಿದರೆ, 29,700 ರೂ. ವರೆಗೆ ಡಿಸ್ಕೌಂಟ್ ಪಡೆಯಬಹುದು. ಇದು ಕೆಂಪು ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯವಿದೆ. ನೀವು, ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳನ್ನು ಪಡೆಯಬಹುದು.
ಐಕ್ಯೂ ನಿಯೋ9 ಪ್ರೊ 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಕ್ಯೂ ನಿಯೋ9 ಪ್ರೊ 5G ಮೊಬೈಲ್ 6.78 ಇಂಚಿನ 1.5K ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ದರ ಮತ್ತು 3000 ನಿಟ್ಸ್‌ಗಳ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಐಕ್ಯೂ ನಿಯೋ9 ಪ್ರೊ 5G ಅನ್ನು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಗ್ರಾಫಿಕ್ಸ್‌ಗಾಗಿ ಅಡ್ರಿನೊ 740 ಜಿಪಿಯು ಸಹ ಒಳಗೊಂಡಿಡೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch OS 14 ನಲ್ಲಿ (ಆಪರೇಟಿಂಗ್ ಸಿಸ್ಟಮ್) ಕೆಲಸ ನಿರ್ವಹಿಸುತ್ತದೆ.
ಸ್ಟೋರೇಜ್ ಆಯ್ಕೆ
ಐಕ್ಯೂ ನಿಯೋ9 ಪ್ರೊ 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಇದು 8GB + 128GB, 8GB + 256GB, 12GB + 256GB ಇಂಟರ್ನಲ್ ಸ್ಟೋರೇಜ್ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ಕಂಪನಿಯು ಐಕ್ಯೂ ನಿಯೋ9 ಪ್ರೊ 5G ಫೋನಿನಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅಳವಡಿಸಿದೆ. ಇದು OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ IMX920 ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿಗೆ. ಜೊತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಐಕ್ಯೂ ನಿಯೋ9 ಪ್ರೊ 5G ಮೊಬೈಲ್ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು 120W ವೇಗದ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ ಐಕ್ಯೂ ನಿಯೋ9 ಪ್ರೊ 5G ಫೋನ್ IP54 ರೇಟಿಂಗ್ ಪಡೆದಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್ ಸಿ ಪೋರ್ಟ್, ವೈ-ಫೈ 7 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








