Home
Deal of the day

50 ಮೆಗಾಪಿಕ್ಸಲ್‌ Sony AI ಕ್ಯಾಮೆರಾ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆ ಇಳಿಕೆ!

ಸದ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 (Amazon Great Indian Festival 2024) ಮಾರಾಟ ಚಾಲ್ತಿ ಇದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಆಕರ್ಷಕ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ರಿಯಾಯಿತಿ ದರದಲ್ಲಿ ಫೋನ್‌ ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿದೆ. ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಐಕ್ಯೂ ಸಂಸ್ಥೆಯ ಐಕ್ಯೂ Z9s ಪ್ರೊ 5G (iQOO Z9S Pro 5G) ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಬ್ಯ ಇದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಐಕ್ಯೂ Z9s ಪ್ರೊ 5G (iQOO Z9S Pro 5G) ಸ್ಮಾರ್ಟ್‌ಫೋನ್‌ ಶೇ. 17% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8GB + 128 GB ಸ್ಟೋರೇಜ್‌ ವೇರಿಯಂಟ್‌ 24,998ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ ಕಾರ್ಡ್‌ ಮೂಲಕ ಖರೀದಿ ಮಾಡಿದರೆ, 21,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ.

50 ಮೆಗಾಪಿಕ್ಸಲ್‌ Sony AI ಕ್ಯಾಮೆರಾ ಇರುವ ಈ ಸ್ಟೈಲಿಶ್‌ ಫೋನ್‌ ಬೆಲೆ ಇಳಿಕೆ!

ಅಂದಹಾಗೆ ಐಕ್ಯೂ Z9s ಪ್ರೊ 5G (iQOO Z9S Pro 5G) ಫೋನ್‌ 8GB RAM + 128 GB, 8GB + 256 GB ಹಾಗೂ 12GB + 256 GB ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಫೋನ್‌ 5,500 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ಐಕ್ಯೂ Z9s ಪ್ರೊ 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ Z9s ಪ್ರೊ 5G - ಫೀಚರ್ಸ್‌ ಹೀಗಿವೆ

ಐಕ್ಯೂ Z9s ಪ್ರೊ 5G (iQOO Z9S Pro 5G) ಫೋನ್‌ ಫೀಚರ್ಸ್‌ ಐಕ್ಯೂ Z9s ಪ್ರೊ ಫೋನ್‌ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, 2392×1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್‌ ರೇಟ್‌ ಸಪೋರ್ಟ್‌ ಪಡೆದಿದೆ.

ಐಕ್ಯೂ Z9s ಪ್ರೊ 5G ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 7 ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 8GB RAM + 128 GB, 8GB + 256 GB ಹಾಗೂ 12GB + 256 GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ಅದೇ ರೀತಿ ಐಕ್ಯೂ Z9s ಪ್ರೊ 5G (iQOO Z9S Pro 5G) ಮೊಬೈಲ್‌ ಸಹ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಇದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಆಗಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಫೋನ್‌ 5,500 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 80W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.

ಇನ್ನು ಸಂಸ್ಥೆಯ ಐಕ್ಯೂ Z9s ಮೊಬೈಲ್‌ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಸೌಲಭ್ಯ ಇದೆ. ಹಾಗೆಯೇ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, 5,500mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 44W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ.

Best Mobiles in India

English summary
Don't Miss Offer! iQOO Z9S Pro 5G available at Huge Discount on Amazon Sale. check other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+