ಸಂಕ್ರಾಂತಿ ಧಮಾಕಾ! ಈ ಗೇಮಿಂಗ್ ಫೋನಿನ ಬೆಲೆ ಭಾರೀ ಕುಸಿತ.. ತುಂಬಾ ಕಡಿಮೆಗೆ ಸಿಗುತ್ತೆ?
ಗೇಮಿಂಗ್ ಪ್ರಿಯರಿಗೆ ಐಕ್ಯೂ ಸಿಹಿಸುದ್ದಿ ನೀಡಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಐಕ್ಯೂ Z9S ಪ್ರೊ 5G (iQOO Z9s Pro 5G) ಬೆಲೆಯನ್ನು ಕಡಿತ ಮಾಡಿದೆ. ಹೌದು, ಐಕ್ಯೂ ಕಳೆದ ಐದು ತಿಂಗಳ ಹಿಂದೆ ತನ್ನ 'Z9' ಸರಣಿಯಲ್ಲಿ ಈ ಮೊಬೈಲ್ ಅನ್ನು ಬಿಡುಗಡೆ ಮಾಡಿತ್ತು. ಕಂಪನಿಯು ಈ ಮಧ್ಯಮ ಬಜೆಟ್ ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ನೀವು, ಇಂದಿನಿಂದಲೇ ಅಗ್ಗದ ದರದಲ್ಲಿ ಫೋನನ್ನು ಖರೀದಿಸಬಹುದು. ಬನ್ನಿ, ಐಕ್ಯೂ ಯಾವೆಲ್ಲಾ ಆಫರ್‌ಗಳನ್ನು ನೀಡುತ್ತಿದೆ ತಿಳಿಯೋಣ.
ಐಕ್ಯೂ Z9S ಪ್ರೊ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.77 ಇಂಚಿನ 3D ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್, 80W ವೇಗದ ಚಾರ್ಜಿಂಗ್ ಮತ್ತು 5500mAh ಬ್ಯಾಟರಿ ಸಹ ಒಗೊಂಡಿದೆ. ಈ ಫೋನಿನ ಹೊಸ ಬೆಲೆ ತಿಳಿಯಲು ಮುಂದೆ ಓದಿ.

ಐಕ್ಯೂ Z9S ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಐಕ್ಯೂ Z9S ಪ್ರೊ 5G ಫೋನ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ 3D ಬಾಗಿದ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2392 x 1080 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಹೊಂದಿದೆ.
ಪ್ರೊಸೆಸರ್ ಯಾವುದು?
ಐಕ್ಯೂ Z9S ಪ್ರೊ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಆಕ್ಟಾಕೋರ್ ಪ್ರೊಸೆಸರ್ ಅನ್ನು 4ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 720 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ ಆಧಾರಿತ FunTouch ಓಎಸ್ 14 ಜೊತೆಗೆ ಕೆಲಸ ನಿರ್ವಹಿಸುತ್ತದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ಐಕ್ಯೂ Z9s ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಸೋನಿ OIS ಮುಖ್ಯ ಕ್ಯಾಮೆರಾ ಲಭ್ಯಬವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

ಪವರ್ ಫುಲ್ ಬ್ಯಾಟರಿ
ಐಕ್ಯೂ Z9S ಪ್ರೊ 5G ಫೋನ್ 5,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ 7.5W ರಿವರ್ಸ್ ಚಾರ್ಜಿಂಗ್ ಸಹ ಲಭ್ಯವಿದೆ.
ಐಕ್ಯೂ Z9S ಪ್ರೊ 5G ಬೆಲೆ
ಐಕ್ಯೂ Z9S ಪ್ರೊ 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಎಲ್ಲಾ ರೂಪಾಂತರಗಳ ಬೆಲೆಯನ್ನು 2,000 ರೂ. ಇಳಿಕೆ ಮಾಡಿದೆ. ಬೆಲರ ಕಡಿತದ ನಂತರ, ಈ ಫೋನಿನ 8 GB 8GB RAM + 128GB ಸ್ಟೋರೇಜ್ ರೂಪಾಂತರವು 22,999 ರೂ.ಗೆ ಮಾರಾಟವಾಗುತ್ತಿದೆ. ಇದರ ಬಿಡುಗಡೆ ಬೆಲೆ 24,999 ರೂ. ಆಗಿದೆ.
8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 26,999 ರೂ. ಆಗಿದೆ. ಪ್ರಸ್ತುತ 24,999 ರೂ.ಗೆ ಖರೀದಿಸಬಹುದು. ಮತ್ತು 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 28,999 ರೂ.ನಿಂದ 26,999 ರೂ.ಗೆ ಇಳಿದಿದೆ. ಈ ಐಕ್ಯೂ Z9S ಪ್ರೊ 5G ಫೋನನ್ನು ಇಂದಿನಿಂದಲೇ ಹೊಸ ಬೆಲೆಯಲ್ಲಿ ಖರೀದಿಸಬಹುದು. ಇದು ಫ್ಲಾಂಬೊಯಂಟ್ ಆರೆಂಜ್ ಮತ್ತು ಲಕ್ಸ್ ಮಾರ್ಬಲ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.


Click it and Unblock the Notifications








