iQOO: ಈ 5G ಫೋನ್ ಅಗ್ಗವಾಗಿ ಸೇಲ್! ಜೊತೆಗೆ ಸಖತ್ ಆಫರ್.. ಫೀಚರ್ ಹೇಗಿವೆ?
ಐಕ್ಯೂ (iQOO) ಮೇ ತಿಂಗಳಲ್ಲಿ ಬಹುನಿರೀಕ್ಷಿತ ಐಕ್ಯೂ Z9x 5G (iQOO Z9x 5G) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಪ್ರಸ್ತುತ, ಕಂಪನಿಯು ಈ ಫೋನಿನ ಬೆಲೆ ಇಳಿಕೆ ಮಾಡಿದೆ. ಹೌದು, ಅಮೆಜಾನ್ ಮತ್ತು ಕಂಪನಿ ವೆಬ್‌ಸೈಟ್‌ನಲ್ಲಿ ಈ ಮೊಬೈಲ್ ಅನ್ನು ರಿಯಾಯಿತಿ ದರದೊಂದಿಗೆ ಮಾರಾಟ ಮಾಡಲಾಗುತ್ತಿದೆ. ಈ ಫೋನ್ ಖರೀದಿ ಮೇಲೆ 500 ರೂ. ಫ್ಲಾಟ್ ರಿಯಾಯಿತಿ ಮತ್ತು ಕೂಪನ್ ಡಿಸ್ಕೌಂಟ್ ಸಹ ಲಭ್ಯವಿದೆ. ಜೊತೆಗೆ, ಬ್ಯಾಂಕ್ ಆಫರ್‌ಗಳು ಮತ್ತು ಎಕ್ಸ್‌ಚೇಂಜ್ ಆಫರ್‌ಗಳನ್ನು ನೀಡಲಾಗುತ್ತಿದೆ.
ಐಕ್ಯೂ Z9x 5G ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಇದು 12 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಈ ಫೋನ್ 6.72 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. 6,000mAh ಬ್ಯಾಟರಿ, 44W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಐಕ್ಯೂ Z9x 5G ಹೊಸ ಬೆಲೆ ಮತ್ತು ಆಫರ್‌ಗಳು
ಕಂಪನಿಯು ಐಕ್ಯೂ Z9x 5G ಫೋನಿನ ಮೂರು ರೂಪಾಂತರಗಳ ಮೇಲೆ 500 ರೂ. ಫ್ಲಾಟ್ ಮತ್ತು ಕೂಪನ್ ರಿಯಾಯಿತಿಯನ್ನು ನೀಡುತ್ತಿದೆ. ಅಂದರೆ, ಒಟ್ಟು 1,000 ರೂ. ಡಿಸ್ಕೌಂಟ್ ಸಿಗುತ್ತದೆ. ಫೋನಿನ ಮೂಲ ರೂಪಾಂತರವು 4GB RAM+128GB ಸ್ಟೋರೇಜ್ ಹೊಂದಿದೆ. ಪ್ರಸ್ತುತ, ಇದನ್ನು 11,999 ರೂ.ಗೆ ಕೊಳ್ಳಬಹುದು. ಇದನ್ನು 12,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. 6GB+128GB ರೂಪಾಂತರವನ್ನು 14,499 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ನೀವು 13,499 ರೂ.ಗೆ ಖರೀದಿಸಬಹುದು.
ಫೋನಿನ ಟಾಪ್ ವೇರಿಯಂಟ್ 8GB RAM+128GB ರೂಪಾಂತರವನ್ನು 15,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ, ರಿಯಾಯಿತಿಯೊಂದಿಗೆ 14,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಖರೀದಿಸಬಹುದು. ಮೂರು ಸ್ಟೋರೇಜ್ ರೂಪಾಂತರಗಳಲ್ಲಿ 1,250 ರೂ. ವರೆಗೆ ಬ್ಯಾಂಕ್ ರಿಯಾಯಿತಿಯನ್ನು ಪಡೆಯಬಹುದು. ಇದು ಎಸ್‌ಬಿಐ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಸಾಮಾನ್ಯ ಮತ್ತು ಇಎಂಐ ವಹಿವಾಟುಗಳಲ್ಲಿ ಲಭ್ಯವಿರುತ್ತದೆ.
ಐಕ್ಯೂ Z9x 5G ಖರೀದಿ ಎಲ್ಲಿ?
ಕಂಪನಿಯು ಐಕ್ಯೂ Z9x 5G ಖರೀದಿ ಮೇಲೆ 3 ರಿಂದ 6 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಸಹ ನೀಡುತ್ತದೆ. ಇದಲ್ಲದೆ, 14,450 ರೂ.ಗಳ ವರೆಗೆ ಎಕ್ಸ್‌ಚೇಂಜ್ ಆಫರ್ ಸಹ ಪಡೆಯಬಹುದು. ನೀವು, ಈ ಫೋನನ್ನು ಟೊರ್ನಾಡೋ ಗ್ರೀನ್ ಮತ್ತು ಸ್ಟಾರ್ಮ್ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಇದು ಕಂಪನಿಯ ವೆಬ್‌ಸೈಟ್ ಮತ್ತು ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಅಮೆಜಾನ್‌ನಲ್ಲಿ ಈ ಆಫರ್ ಪಡೆಯಿರಿ.
ಐಕ್ಯೂ Z9x 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಕ್ಯೂ Z9x 5G ಫೋನ್ 6.72 ಇಂಚಿನ ಎಫ್‌ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 2,408 × 1,080 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ Z9x 5G ಮೊಬೈಲ್ ಆಂಡ್ರಾಯ್ಡ್ 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್ ಅನ್ನು ಹೊಂದಿದೆ. ಇದರಲ್ಲಿ 8GB ವರೆಗೆ ವಿಸ್ತೃತ RAM ಬೆಂಬಲವೂ ಲಭ್ಯವಿದೆ. ಜೊತೆಗೆ, 1TB ವರೆಗೆ ಮೆಮೊರಿಯನ್ನು ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ಐಕ್ಯೂ Z9x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಆಳ ಸಂವೇದಕವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಸಾಮರ್ಥ್ಯ
ಕಂಪನಿಯು ಈ ಫೋನನ್ನು 6,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಪರಿಚಯಿಸಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 44W ಚಾರ್ಜಿಂಗ್ ಬೆಂಬಲವನ್ನು ನೀಡಲಾಗಿದೆ. ಈ ಫೋನ್ ನೀರು ಮತ್ತು ಧೂಳು ನಿರೋಧಕ IP64 ರೇಟಿಂಗ್, 5G, 4G, 300% ಆಡಿಯೋ ಬೂಸ್ಟರ್ ತಂತ್ರಜ್ಞಾನ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications







