Home
Deal of the day

ಯದ್ವಾತದ್ವಾ ಇಳಿಕೆ: 12,000ಕ್ಕಿಂತ ಕಡಿಮೆ! 6000mAh ಬ್ಯಾಟರಿ, 50MP ಕ್ಯಾಮೆರಾ.. ಈ ಆಫರ್‌ ಫೆ.10ಕ್ಕೆ ಲಾಸ್ಟ್

ಅಗ್ಗದ ಬೆಲೆಗೆ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಐಕ್ಯೂ ಒಳ್ಳೆಯ ಸುದ್ದಿ ನೀಡಿದೆ. ನೀವು 12 ಸಾವಿರ ರೂ.ಗಿಂತ ಕಡಿಮೆ ದರದಲ್ಲಿ ಐಕ್ಯೂ 5G ಮೊಬೈಲ್ ಕೊಳ್ಳಬಹುದು! ಹೌದು, ಕಂಪನಿಯು ಐಕ್ಯೂ Z9x 5G (iQOO Z9x 5G) ಫೋನಿನ ಬೆಲೆಯನ್ನು ಕಡಿತ ಮಾಡಿದೆ. ಜೊತೆಗೆ ಬ್ಯಾಂಕ್ ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಆಫರ್‌ ಸಹ ನೀಡಲಾಗುತ್ತಿದೆ. ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ಹೆಚ್ಚು ಹಣ ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

6000mAh ಬ್ಯಾಟರಿ ಹೊದಿರುವ ಐಕ್ಯೂ Z9x 5G ಬಿಡುಗಡೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನ್‌ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.72 ಇಂಚಿನ ಡಿಸ್ಪ್ಲೇ, 44W ಚಾರ್ಜಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

12,000ಕ್ಕಿಂತ ಕಡಿಮೆ! 6000mAh ಬ್ಯಾಟರಿ, 50MP ಕ್ಯಾಮೆರಾ; ಫೆ.10ಕ್ಕೆ ಲಾಸ್ಟ್

ಐಕ್ಯೂ Z9x 5G ಹೊಸ ಬೆಲೆ ಮತ್ತು ಆಫರ್‌ಗಳು

ಐಕ್ಯೂ Z9x 5G ಫೋನಿನ 6GB RAM ರೂಪಾಂತರದ ಬೆಲೆ 13,499 ರೂ. ಆಗಿದೆ. ಪ್ರಸ್ತುತ, ಇದು 12 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಕಂಪನಿಯು ಈ ಮೊಬೈಲ್ ಖರೀದಿ ಮೇಲೆ 1,500 ರೂ. ಆಫರ್ ನೀಡುತ್ತಿದೆ. ಜೊತೆಗೆ 500 ಕೂಪನ್ ರಿಯಾಯಿತಿ ಮತ್ತು 1000 ಬ್ಯಾಂಕ್ ಕಾರ್ಡ್ ರಿಯಾಯಿತಿ ಸಹ ಲಭ್ಯವಿದೆ.

ಈ ರಿಯಾಯಿತಿಯೊಂದಿಗೆ, ನೀವು ಈ ಐಕ್ಯೂ Z9x 5G ಫೋನನ್ನು 11,999 ರೂ.ಗೆ ಖರೀದಿಸಬಹುದು. ಈ ಆಫರ್‌ ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್ (Amazon) ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ shop.iku ನಲ್ಲಿ ಲಭ್ಯವಿದೆ. ಈ ಫೋನ್ ಟೊರ್ನಾಡೋ ಗ್ರೀನ್ ಮತ್ತು ಸ್ಟಾರ್ಮ್ ಗ್ರೇ ಬಣ್ಣಗಳಲ್ಲಿ ಲಭ್ಯವಿದೆ. ಈ ಆಫರ್‌ ಫೆಬ್ರವರಿ 10 ರವರೆಗೆ ಮಾತ್ರ ಲಭ್ಯವಿರುತ್ತದೆ.

ಐಕ್ಯೂ Z9x 5G ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್

ಐಕ್ಯೂ Z9x 5G ಸ್ಮಾರ್ಟ್‌ಫೋನ್ 6.72 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2408 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಈ ಐಕ್ಯೂ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 ಜೆನ್ 1 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಅಡ್ರಿನೊ 710 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ Funtouch OS 14 ನಲ್ಲಿ ಕೆಲಸ ಮಾಡುತ್ತದೆ.

12,000ಕ್ಕಿಂತ ಕಡಿಮೆ! 6000mAh ಬ್ಯಾಟರಿ, 50MP ಕ್ಯಾಮೆರಾ; ಫೆ.10ಕ್ಕೆ ಲಾಸ್ಟ್

ಕ್ಯಾಮೆರಾ ಸೆಟಪ್ ಮತ್ತು ಸ್ಟೋರೇಜ್‌

ಐಕ್ಯೂ Z9x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ಫೋನ್ 8GB ವರೆಗೆ ವಿಸ್ತೃತ RAM ಹೊಂದಿದೆ. ಜೊತೆಗೆ, 1TB ವರೆಗೆ ಸ್ಟೋರೇಜ್‌ ವಿಸ್ತರಿಸಬಹುದು. ಇದು 4GB RAM + 128GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು

ಐಕ್ಯೂ Z9x 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 44W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗೆ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G, 300% ಆಡಿಯೋ ಬೂಸ್ಟರ್ ತಂತ್ರಜ್ಞಾನ, 3.5 ಎಂಎಂ ಹೆಡ್‌ಫೋನ್ ಜ್ಯಾಕ್‌ ಮತ್ತು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
iQOO Z9x 5G with 6GB RAM available for under Rs 12000 in Amazon: check new price, offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+