ಜಸ್ಟ್ 7990 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಯಾವ ಫೋನ್?
ಐಟೆಲ್ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಐಟೆಲ್ P55 (itel P55) ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಹೌದು, ಕಂಪನಿಯು ಶೇ.20 ರಿಯಾಯಿತಿಯೊಂದಿಗೆ ಈ ಮೊಬೈಲ್ ಮಾರಾಟ ಮಾಡುತ್ತಿದೆ. ನೀವು, 8 ಸಾವಿರ ರೂ. ಬಜೆಟ್‌ನಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇದು ನಿಮಗೆ ಉತ್ತಮ ಆಯ್ಕೆಯಾಗಿದೆ. ಕಡಿಮೆ ದರವೆಂಬ ಕಾರಣಕ್ಕೆ ಫೋನಿನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಕಂಪನಿಯು ಯಾವುದೇ ರಾಜಿ ಮಾಡಿಕೊಂಡಿಲ್ಲ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಐಟೆಲ್ P55 4G ಫೋನಿನ ಖರೀದಿ ಮೇಲೆ ರಿಯಾಯಿತಿ ಲಭ್ಯವಿದೆ. ನೀವು, 16GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಯುನಿಸೊಕ್ T606 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.6 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 45W ಸ್ಪೀಡ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಐಟೆಲ್ P55 ಬೆಲೆ ಮತ್ತು ಆಫರ್‌ಗಳು
ಐಟೆಲ್ P55 4G ಫೋನಿನ 256GB ಸ್ಟೋರೇಜ್ ರೂಪಾಂತರವು 7,990 ರೂ.ಗೆ ಮಾರಾಟವಾಗುತ್ತಿದೆ. ಇದನ್ನು 8,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ನೀವು, ರಾಯಲ್ ಗ್ರೀನ್ ಮತ್ತು ವೆಗಾನ್ ಲೆದರ್ ಬಣ್ಣಗಳಲ್ಲಿ ಕೊಳ್ಳಬಹುದು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 1,000 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ಇದಕ್ಕೆ ಯಾವುದೇ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳ ಅಗತ್ಯವಿಲ್ಲ.
ಈ ಸುದ್ದಿ ಓದಿದ್ದೀರಾ?: ಬಂದೇ ಬಿಡ್ತು Apple iOS 18.2 ಅಪ್ಡೇಟ್; ಯಾವೆಲ್ಲಾ ವೈಶಿಷ್ಟ್ಯಗಳಿವೆ? ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ
ಐಟೆಲ್ P55 4G ಫೀಚರ್ಸ್
ಡಿಸ್ಪ್ಲೇ ಹೇಗಿದೆ
ಐಟೆಲ್ P55 4G ಮೊಬೈಲ್ 6.6 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 720 x 1612 ಪಿಕ್ಸೆಲ್ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.
ಪ್ರೊಸೆಸರ್ ಯಾವುದು?
ಐಟೆಲ್ P55 4G ಫೋನನ್ನು ಯುನಿಸೊಕ್ T606 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು 16GB RAM ಹೊಂದಿದೆ. ಇದರಲ್ಲಿ 256GB ಸ್ಟೋರೇಜ್ ಲಭ್ಯವಿದೆ. ಈ ಫೋನ್ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಮಾಲಿ G57 ಜಿಪಿಯು ಹೊಂದಿದೆ.
ಡುಯಲ್ ಕ್ಯಾಮೆರಾ ಸೆಟಪ್
ಈ ಐಟೆಲ್ ಸ್ಮಾರ್ಟ್‌ಫೋನ್ ಡುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನ್ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರಲ್ಲಿ ಎಐ (AI) ಲೆನ್ಸ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಫೋನಿನಲ್ಲಿ ಎಐ (AI) ಕ್ಲಿಯರ್ ಪೋರ್ಟ್ರೇಟ್ ಸಪೋರ್ಟ್ ಲಭ್ಯವಿದೆ. ನೈಟ್ (ರಾತ್ರಿ) ಫೋಟೋಗ್ರಫಿ ಪ್ರಿಯರಿಗೆ ಅದ್ಭುತ ಔಟ್‌ಪುಟ್ ನೀಡುವ ಸೂಪರ್ ನೈಟ್ ಮೋಡ್ ಇದೆ.
ಪವರ್ ಫುಲ್ ಬ್ಯಾಟರಿ
ಐಟೆಲ್ P55 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಐಟೆಲ್ P55 ಫೋನ್ ಡ್ಯುಯಲ್ ಸಿಮ್, 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು 3.4 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಹಲವು ಕನೆಕ್ಟಿವಿಟಿ ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








