108MP ಕ್ಯಾಮೆರಾ ಜೊತೆಗೆ 16GB RAM ಇರುವ ಈ ಫೋನ್ 10000ರೂ. ಒಳಗೆ ಲಭ್ಯ!
ಮೊಬೈಲ್ ಮಾರುಕ್ಟೆಯಲ್ಲಿ ಅಗ್ಗದ ದರದಲ್ಲಿ ಸ್ಮಾರ್ಟ್‌ಫೋನ್ ಪರಿಚಯಿಸಿ ಗುರುತಿಸಿಕೊಂಡಿರುವ ಐಟೆಲ್ (Itel) ಕಂಪನಿಯ ಕೆಲವು ಮೊಬೈಲ್‌ಗಳು ಗ್ರಾಹಕರ ಗಮನ ಸೆಳೆಯುವಲ್ಲಿ ಯಶಸ್ವಿ ಆಗಿವೆ. ಆ ಪೈಕಿ ಸಂಸ್ಥೆಯ ಐಟೆಲ್ S24 ( itel S24 ) ಮೊಬೈಲ್ ಪ್ರೈಸ್‌ಟ್ಯಾಗ್, ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಇದೀಗ ಭಾರೀ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ತಂದಿದೆ.
ಹೌದು, ಅಮೆಜಾನ್ ಇ ಕಾಮರ್ಸ್‌ನಲ್ಲಿ ಐಟೆಲ್ S24 (itel S24) ಮೊಬೈಲ್ ಫೋನ್ ಶೇ. 35% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB + 128GB ವೇರಿಯಂಟ್ 8,499ರೂ. ಗಳ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಗ್ರಾಹಕರು ಅಮೆಜಾನ್ ತಾಣದಲ್ಲಿ ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ನೋ ಕಾಸ್ಟ್ ಇಎಮ್‌ಐ ಸೌಲಭ್ಯ ಸಹ ಪಡೆಯಬಹುದು.

ಅಂದಹಾಗೆ ಈ ಮೊಬೈಲ್ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೋ G91 ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ತಾಣದಲ್ಲಿ ಐಟೆಲ್ S24 ಫೋನ್ ಅನ್ನು ಆಕರ್ಷಕ ಬೆಲೆಗೆ ಖರೀದಿಸಬಹುದು. ಇನ್ನುಳಿದಂತೆ ಐಟೆಲ್ S24 ಮೊಬೈಲ್ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ
ಐಟೆಲ್ S24 ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಇದು ಪಂಚ್-ಹೋಲ್ ಶೈಲಿ ಪಡೆದಿದೆ. ಇದರ ಜೊತೆಗೆ ಈ ಸ್ಮಾರ್ಟ್‌ಫೋನ್‌ನಲ್ಲಿ 'ಡೈನಾಮಿಕ್ ಬಾರ್' ಫೀಚರ್ಸ್ ಇದೆ. ಇದರಲ್ಲಿ ಮತ್ತು ಬ್ಯಾಟರಿ ಚಾರ್ಜಿಂಗ್ ವಿವರಗಳು, ಒಳಬರುವ ಕರೆ ನೋಟಿಫಿಕೇಶನ್ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಕಾಣಿಸುತ್ತದೆ.
ಪ್ರೊಸೆಸರ್ ಪವರ್
ಐಟೆಲ್ S24 ಫೋನ್ ಮೀಡಿಯಾ ಟೆಕ್ ಹಿಲಿಯೋ G91 ಆಕ್ಟಾ-ಕೋರ್ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, 16GB RAM (ವರ್ಚುವಲ್ RAM ವಿಸ್ತರಣೆಯ ಮೂಲಕ) ಮತ್ತು 128GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಇದರಲ್ಲಿ ಕಾಣಬಹುದಾಗಿದೆ. ಇದರ ಜೊತೆಗೆ ಈ ಮೊಬೈಲ್ ಮಾಲಿ G52 ಜಿಪಿಯು ಬಲ ಪಡೆದಿದೆ.
ಕ್ಯಾಮೆರಾ ಸೆನ್ಸಾರ್
ಐಟೆಲ್ S24 ಫೋನ್ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL HM6 ಪ್ರಾಥಮಿಕ ಕ್ಯಾಮೆರಾ ಸೆನ್ಸರ್ ಸೌಲಭ್ಯ ಪಡೆದಿದ್ದು, ಇದು 3x ಜೂಮ್ ಮತ್ತು f/1.6 ಅಪರ್ಚರ್ ಒಳಗೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಪಿ ಹಾಗೂ ವಿಡಿಯೋ ಕರೆಗಳಿಗಾಗಿ ಇದರಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್
ಐಟೆಲ್ S24 ಫೋನ್ 18W ವೇಗದ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಎಐ ಸ್ಮಾರ್ಟ್ ಚಾರ್ಜ್ ಆಯ್ಕೆ ಪಡೆದಿದೆ. ಹಾಗೆಯೇ ಬ್ಯಾಟರಿ ಬಾಳಿಕೆಯನ್ನು ಜಾಸ್ತಿ ಮಾಡಲು ಮತ್ತು ಸುರಕ್ಷಿತ ಚಾರ್ಜಿಂಗ್ ಅನ್ನು ಖಚಿತಪಡಿಸಿಕೊಳ್ಳಲು ಚಾರ್ಜಿಂಗ್ ವೇಗವನ್ನು ಇದು ಸರಿಹೊಂದಿಸುವ ಕೆಲಸ ಮಾಡುತ್ತದೆ.
ಹಾಗೆಯೇ ಈ ಮೊಬೈಲ್ ಫೇಸ್ ಅನ್‌ಲಾಕ್ ಅನ್ನು ಸಪೋರ್ಟ್ ಮಾಡುತ್ತದೆ ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್-ಸಿಮ್, 4G, ವೈ-ಫೈ, ಜಿಪಿಎಸ್, ಬ್ಲೂಟೂತ್ ಆವೃತ್ತಿ 5.0, ಯುಎಸ್‌ಬಿ ಟೈಪ್-ಸಿ 2.0 ಪೋರ್ಟ್ ಸೇರಿದಂತೆ ಅನೇಕ ಕನೆಕ್ಟಿವಿಟಿ ಫೀಚರ್ಸ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.


Click it and Unblock the Notifications








