Lava: ಈ ಲಾವಾದ ಆಕರ್ಷಕ ಫೋನ್ ಆಫರ್ ಬೆಲೆಗೆ ಲಭ್ಯ! 50MP ಕ್ಯಾಮೆರಾ.. 1 TB ವರೆಗೆ ಸ್ಟೋರೇಜ್ ಆಯ್ಕೆ
ಸ್ಮಾರ್ಟ್‌ಫೋನ್‌ಗಳನ್ನು (Smartphone) ಖರೀದಿ ಮಾಡುವುದು ಇಂದಿನ ದಿನಗಳಲ್ಲಿ ತ್ರಾಸದಾಯಕ ಕೆಲಸವೇ ಅಲ್ಲ. ಒಂದು ಕಡೆ ನೋ ಕಾಸ್ಟ್ ಇಎಮ್‌ಐ ಆಯ್ಕೆ ಇದ್ದರೆ ಇನ್ನೂ ಕೆಲವು ಕಡೆ ಭಾರೀ ಆಫರ್ ಸಹ ನೀಡಲಾಗುತ್ತದೆ. ಅದರಂತೆ ಈಗ ಇ-ಕಾಮರ್ಸ್ ಸೈಟ್‌ನಲ್ಲಿ ಲಾವಾದ ಫೋನ್‌ಗೆ ಬಂಫರ್ ಆಫರ್ ನೀಡಲಾಗಿದೆ.
ಹೌದು, ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ (Lava Blaze 2 5G smartphone) ಇದೀಗ ಆಫರ್ ಬೆಲೆಯಲ್ಲಿ ಲಭ್ಯ ಇದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಹಾಗೂ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಈ ಬೆಲೆಗೆ ಉತ್ತಮ ಫೋನ್ ಎನಿಸಿಕೊಂಡಿದೆ. ಹಾಗಿದ್ರೆ, ಈ ಫೋನ್ ಆಫರ್ ಬೆಲೆ ವಿವರ ಮತ್ತು ಇದರ ಪ್ರಮುಖ ಫೀಚರ್ಸ್ ವಿವರವನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್: ಈ ಸ್ಮಾರ್ಟ್‌ಫೋನ್ 11,499 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 10,219 ರೂ.ಗಳ ಬೆಕೆಗೆ ಖರೀದಿ ಮಾಡಬಹುದು. ಇದು ಕಡಿಮೆ ಆಫರ್ ಆದರೂ ಸಹ ಬ್ಯಾಂಕ್ ಆಫರ್ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್ ಖರೀದಿ ಮಾಡಬಹುದಾಗಿದೆ. ಈ ವಿಶೇಷ ಆಫರ್ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ ಇದೆ.
ಹೆಚ್‌ಎಸ್‌ಬಿಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಇಎಮ್‌ಐ ವ್ಯವಹಾರದ ಮೇಲೆ 2,500 ರಿಯಾಯಿತಿ, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಆಯ್ಕೆ ಮೂಲಕ ಖರೀದಿ ಮಾಡಿದ್ರೆ 10,000ರೂ. ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್ ಪ್ರಯೋಜನ, ಐಡಿಎಫ್‌ಸಿ ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ ಆಫರ್ 10% ರಿಯಾಯಿತಿ, ಕೋಟಾಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ ಸೇರಿದಂತೆ ಸಾಕಷ್ಟು ಬ್ಯಾಂಕ್ ಕೊಡುಗೆ ಪ್ರಯೋಜನ ಪಡೆಯಬಹುದಾಗಿದೆ.

ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.56 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, 267 ppi ಸಾಂದ್ರತೆ ಹಾಗೂ 83.3% ಸ್ಕ್ರೀನ್-ಟು-ಬಾಡಿ ಅನುಪಾತದೊಂದಿಗೆ ಈ ಫೋನ್ ಕಾಣಿಸಿಕೊಂಡಿದೆ.
ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 13 ಓಎಸ್‌ನಲ್ಲಿ ರನ್ ಆಗಲಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6020 (7 nm) ಪ್ರೊಸೆಸರ್ ಬಲ ಪಡೆದಿದ್ದು, ಮಾಲಿ-G57 MC2 ಜಿಪಿಯು ಬಲದೊಂದಿಗೆ ಕೆಲಸ ಮಾಡಲಿದೆ. ಇದರೊಂದಿಗೆ 4GB RAM ಹಾಗೂ 64GB ಇಂಟರ್ ಸ್ಟೋರೇಜ್‌ನಲ್ಲಿ ಲಭ್ಯ ಇದೆ. ಹಾಗೆಯೇ ಮೈಕ್ರೋ ಎಸ್‌ಡಿಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.
ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದೆ. ಅಂದರೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದಿದ್ದು, ಇದರೊಂದಿಗೆ 0.08 ಮೆಗಾಪಿಕ್ಸೆಲ್ ಆಕ್ಸಿಲಿಯರಿ ಲೆನ್ಸ್ ಹೊಂದಿದೆ. ಇದರ ಜೊತೆಗೆ ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಪಡೆದಿದೆ. ಹಾಗೂ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, ವೈ-ಫೈ 802.11 b/g/n/ac, ಬ್ಲೂಟೂತ್ ಆವೃತ್ತಿ 5.0, A2DP, LE, ಎಫ್‌ಎಮ್ ರೇಡಿಯೋ, ಯುಎಸ್‌ಬಿ ಟೈಪ್-ಸಿ 2.0, ಓಟಿಜಿ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯ ಹೊಂದಿದೆ.


Click it and Unblock the Notifications