Home
Deal of the day

ಈ ಅಗ್ಗದ ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ; ಆಫರ್‌ ತಿಳಿದ್ರೆ ವಾವ್‌ ಅಂತೀರಾ!

ಫ್ಲಿಪ್‌ಕಾರ್ಟ್‌ (Flipkart) ಬಹುತೇಕ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿದೆ. ಈ ತಾಣವು ಮೊಬೈಲ್‌ಗಳಿಗೆ ಏನಾದರೊಂದು ಡಿಸ್ಕೌಂಟ್‌ ನೀಡುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದೆ. ಇದೀಗ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಪೊಕೊ ಮೊಬೈಲ್‌ ಸಂಸ್ಥೆಯ ಪೊಕೊ C65 ಸ್ಮಾರ್ಟ್‌ಫೋನ್‌ ಬಲು ಆಕರ್ಷಕ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಈ ಮೂಲಕ ಖರೀದಿದಾರರು ವಾವ್‌ ಎನ್ನುವಂತೆ ಮಾಡಿದೆ. ಅಂದಹಾಗೆ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ C65 ಸ್ಮಾರ್ಟ್‌ಫೋನ್‌ ಶೇ. 38% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಕೊಡುಗೆಯಲ್ಲಿ 6,799ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಲಭ್ಯವಿರುವ ಇತರೆ ಬ್ಯಾಂಕ್‌ ರಿಯಾಯಿತಿ ಸಹ ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಫೋನ್‌ ಖರೀದಿ ಮಾಡಲು ಅವಕಾಶ ಇದೆ.

ಈ ಅಗ್ಗದ ಫೋನ್‌ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ; ಆಫರ್‌ ತಿಳಿದ್ರೆ ವಾವ್‌ ಅಂತೀರಾ!

ಈ ಎಂಟ್ರಿ ಲೆವೆಲ್‌ ಮೊಬೈಲ್‌ ಮೀಡಿಯಾಟೆಕ್‌ ಹಿಲಿಯೋ G85 ಪ್ರೊಸೆಸರ್‌ ಸೌಲಭ್ಯವನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಪೊಕೊ C65 ಸ್ಮಾರ್ಟ್‌ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಪೊಕೊ C65 ಫೋನ್‌ - ಫೀಚರ್ಸ್‌

ಪೊಕೊ C65 ಸ್ಮಾರ್ಟ್‌ಫೋನ್‌ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 1650 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 90 Hz ರಿಫ್ರೆಶ್ ರೇಟ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸೇರಿದಂತೆ ಡಿಸ್‌ಪ್ಲೇ ಸಂಬಂಧ ವಿವಿಧ ಅಪ್‌ಡೇಟ್‌ ಫೀಚರ್ಸ್‌ ಅನ್ನು ಈ ಫೋನ್‌ ಹೊಂದಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 ಪ್ರೊಸೆಸರ್‌ ಅನ್ನು ಹೊಂದಿದ್ದು, ಇದರೊಂದಿಗೆ ಮಾಲಿ G52 MC2 GPU ಗ್ರಾಫಿಕ್ಸ್ ಕಾರ್ಡ್ ಆಯ್ಕೆ ಪಡೆದಿದೆ. ಅಲ್ಲದೇ ಈ ಫೋನ್ MIUI 14 ಆಧಾರಿತ ಆಂಡ್ರಾಯ್ಡ್‌ 13 ಆಪರೇಟಿಂಗ್ ಸಿಸ್ಟಮ್ ಅನ್ನು ಹೊಂದಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ 4GB RAM + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಹಾಗೂ 6GB RAM + 128GB ಆಂತರೀಕ ಸ್ಟೋರೇಜ್ ಆಯ್ಕೆ ಮೆಮೊರಿ ಹಾಗೂ 8GB RAM + 256GB ಆಂತರೀಕ ಸ್ಟೋರೇಜ್ ಆಯ್ಕೆಯ ಮೂರು ವೇರಿಯಂಟ್‌ ಆಯ್ಕೆ ಹೊಂದಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ಮುಖ್ಯ ಸೆನ್ಸರ್‌ ಸಾಮರ್ಥ್ಯದಲ್ಲಿ ಇದ್ದು, ಉಳಿದಂತೆ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ + ಎಐ ಲೆನ್ಸ್‌ನೊಂದಿಗೆ ಆಯ್ಕೆ ಪಡೆದಿದೆ. ಇನ್ನು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ.

ಪೊಕೊ C65 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4G LTE, ಡ್ಯುಯಲ್-ಬ್ಯಾಂಡ್ ವೈ ಫೈ, ಬ್ಲೂಟೂತ್, ಜಿಪಿಎಸ್‌, ಯುಎಸ್‌ಬಿ ಟೈಪ್- ಸಿ ಪೋರ್ಟ್ ಸೇರಿದಂತೆ ವಿವಿಧ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲ್ಯಾಕ್‌ ಮತ್ತು ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇವೆ.

Best Mobiles in India

English summary
Massive Price Cut Announced For POCO C65 on Flipkart website. check other details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+