ವೇಗದ ಪ್ರೊಸೆಸರ್ ಇರುವ ಈ ಫೋನಿಗೆ ಈಗ ಜಬರ್ದಸ್ತ್ ಬೆಲೆ ಇಳಿಕೆ!
ಇಡೀ ದೇಶವೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದಲ್ಲಿ ಇದ್ದು, ಈ ಸಂದರ್ಭದಲ್ಲಿ ಇದಕ್ಕೆ ಇನ್ನಷ್ಟು ರಂಗು ನೀಡಲು ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್ ಭರ್ಜರಿ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಅದಾಗ್ಯೂ, ವಿಶೇಷವಾಗಿ ಮೊಬೈಲ್‌ಗಳಿಗೆ ಅತ್ಯುತ್ತಮ ಡಿಸ್ಕೌಂಟ್ ಕೊಡುಗೆಗಳನ್ನು ಘೋಷಿಸುತ್ತದೆ. ಇದೀಗ ಅಮೆಜಾನ್ ವೆಬ್‌ಸೈಟ್‌ನಲ್ಲಿ ಪೊಕೊ ಸಂಸ್ಥೆಯ ಬಜೆಟ್ ದರದಲ್ಲಿ ಇರುವ ಪೊಕೊ X6 ನಿಯೋ 5G (POCO X6 Neo 5G) ಮೊಬೈಲ್ ಸಖತ್ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು OMG ಎನ್ನುವಂತೆ ಆಗಿದೆ.
ಹೌದು, ಇ ಕಾಮರ್ಸ್ ಹಿರಿಯಣ್ಣ ಎನಿಸಿರುವ ಅಮೆಜಾನ್ ಪ್ಲಾಟ್‌ಫಾರ್ಮ್ನಲ್ಲಿ ಈಗ ಪೊಕೊ X6 ನಿಯೋ 5G (POCO X6 Neo 5G) ಫೋನ್ ಶೇ. 27% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 8GB RAM + 128GB ವೇರಿಯಂಟ್ 14,599ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರೊಂದಿಗೆ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್ ಆಫರ್ ಕೂಡಾ ಲಭ್ಯ ಇರುತ್ತವೆ.

ಇನ್ನು ಈ ಫೋನ್ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಯಲ್ಲಿ ಈ ಫೋನ್ ಖರೀದಿಗೆ ಲಭ್ಯ ಆಗಲಿದೆ. ಇದರೊಂದಿಗೆ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಪೊಕೊ X6 ನಿಯೋ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಪೊಕೊ X6 ನಿಯೋ ಫೋನ್ ಫೀಚರ್ಸ್
ಪೊಕೊದ ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಸಪೋರ್ಟ್ ಮಾಡುತ್ತದೆ. ಜೊತೆಗೆ ಇದರ ಡಿಸ್‌ಪ್ಲೇಯು 88.9% ಸ್ಕ್ರೀನ್-ಟು-ಬಾಡಿ ಅನುಪಾತದಲ್ಲಿ ಇದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ.
ಹಾಗೆಯೇ ಈ ನೂತನ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಪವರ್ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12GB + 256GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಒಳಗೊಂಡಿದೆ.
ಪೊಕೊ X6 ನಿಯೋ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಪೊಕೊ X6 ನಿಯೋ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ನೀಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ.
ಪೊಕೊ X6 ನಿಯೋ ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಇನ್ನು ಈ ಫೋನ್ ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








