Motorola ಸಂಸ್ಥೆಯ ಈ ಸ್ಟೈಲಿಶ್ ಫ್ಲಿಪ್ ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಿದ್ದು, ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಖರೀದಿ ಜೋರಾಗಿರುತ್ತದೆ. ಈ ನಿಟ್ಟಿನಲ್ಲಿ ಶಾಪಿಂಗ್ ಪ್ಲಾಟ್‌ಫಾರ್ಮ್ ಗಳು ಎಲ್ಲ ಬಗೆಯ ವಸ್ತುಗಳಿಗೆ ಭರ್ಜರಿ ರಿಯಾಯಿತಿ ನೀಡುತ್ತವೆ. ಹಾಗೆಯೇ ಅಮೆಜಾನ್ ತಾಣವು ಸಹ ಆಯ್ದ ಮೊಬೈಲ್‌ಗಳಿಗೆ ಬಿಗ್ ಡಿಸ್ಕೌಂಟ್ ಘೋಷಿಸಿದ್ದು, ನೂತನ ಮೊಬೈಲ್ ಖರೀದಿಸುವ ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಆ ಪೈಕಿ ಮೊಟೊರೊಲಾ ರೇಜರ್ 50 (Motorola razr 50) ಫೋನ್ ಸೂಪರ್ ಆಫರ್ ಪಡೆದಿದೆ.
ಹೌದು, ದಿಗ್ಗಜ ಇ ಕಾಮರ್ಸ್ ವೆಬ್‌ಸೈಟ್ ಅಮೆಜಾನ್‌ನಲ್ಲಿ ಮೊಟೊರೊಲಾ ರೇಜರ್ 50 (Motorola razr 50) ಫೋನ್ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB + 256 GB ವೇರಿಯಂಟ್ 64,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಖರೀದಿದಾರರು ಇನ್ನಷ್ಟು ರಿಯಾಯಿತಿ ಪಡೆಯಲು ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಳ್ಳಬಹುದು.

ಮೊಟೊರೊಲಾದ ಈ ಫೋನ್ 4,200 mAh ಡ್ಯುಯಲ್ ಸೆಲ್ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಪಡೆದಿದೆ. ಅಲ್ಲದೇ ಈ ಹೊಸ ಫೋನ್ ಕೋಲಾ ಗ್ರೇ, ಬೀಚ್ ಸ್ಯಾಂಡ್ ಮತ್ತು ಸ್ಪ್ರಿಟ್ಜ್ ಆರೆಂಜ್ ಕಲರ್ ಆಯ್ಕೆಗಳನ್ನು ಪಡೆದಿದೆ. ಅಮೆಜಾನ್‌ನಲ್ಲಿ Motorola razr 50 ಫೋನ್ ಅನ್ನು ಕೊಡುಗೆಯಲ್ಲಿ ಖರೀದಿಸಿ. ಹಾಗಾದರೇ ಮೊಟೊರೊಲಾ ರೇಜರ್ 50 ಮೊಬೈಲ್‌ನ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.
ಮೊಟೊರೊಲಾ ರೇಜರ್ 50 - ಫೀಚರ್ಸ್
ಮೊಟೊರೊಲಾ ರೇಜರ್ 50 (Motorola razr 50) ಮೊಬೈಲ್ 6.9 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಪಡೆದಿದ್ದು, pOLED ಮಾದರಿಯಲ್ಲಿ ಇದೆ. ಇನ್ನು ಇದರ ಡಿಸ್‌ಪ್ಲೇಯು 1,080 x 2,640 ಪಿಕ್ಸೆಲ್ ರೆಸಲ್ಯೂಶನ್ ಸೌಲಭ್ಯದಲ್ಲಿ ಇದೆ. ಅಲ್ಲದೇ ಇದರ ಕವರ್ ಡಿಸ್‌ಪ್ಲೇಯು 3.6 ಇಂಚಿನ ಪೂರ್ಣ HD+ pOLED ಮಾದರಿಯಲ್ಲಿ ಇದ್ದು, ಇದರ ಡಿಸ್‌ಪ್ಲೇಯು 1,080 x 2,640 ಪಿಕ್ಸೆಲ್ ರೆಸಲ್ಯೂಶನ್ ಸೌಲಭ್ಯದಲ್ಲಿ ಹೊಂದಿದೆ.
ಮೊಟೊರೊಲಾ ರೇಜರ್ 50 ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300X ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು 8GB RAM + 256GB ಸ್ಟೋರೇಜ್ ಸಿಂಗಲ್ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿದೆ.
ಮೊಟೊರೊಲಾ ರೇಜರ್ 50 ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇದೆ. ಹಾಗೆಯೇ ಇದರ ಎರಡನೇ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಇದರ ಮುಂಭಾಗದಲ್ಲಿ 32 ಮೆಗಾಪಿಕ್ಸಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ರಚನೆ ಕೂಡಾ ಇದೆ.
ಮೊಟೊರೊಲಾ ರೇಜರ್ 50 ಫೋನ್ 4,200 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ 33W ವೈರ್ಡ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇದರೊಂದಿಗೆ IPX8 ನೀರು ಮತ್ತು ಧೂಳಿನ ಪ್ರತಿರೋಧ, ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಬ್ಲೂಟೂತ್ 5.4, ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.


Click it and Unblock the Notifications








