ಜಸ್ಟ್ 9,999 ರೂ.! 50MP ಕ್ಯಾಮೆರಾ.. 128GB ಸ್ಟೋರೇಜ್.. ಈ Moto ಫೋನಿಗೆ ಬೊಂಬಾಟ್ ಆಫರ್
ಫ್ಲಿಪ್‌ಕಾರ್ಟ್ ಮೊಟೊ ಮೊಬೈಲ್ ಪ್ರಿಯರಿಗೆ ಒಳ್ಳೆಯ ಆಫರ್ ನೀಡುತ್ತಿದೆ. ಶೇ.20 ರಷ್ಟು ರಿಯಾಯಿತಿಯೊಂದಿಗೆ ಮೊಟೊ 5G ಫೋನನ್ನು ಮಾರಾಟ ಮಾಡುತ್ತಿದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ರಿಪಬ್ಲಿಕ್ ಡೇ ಬೊನಾಂಜಾ ಸೇಲ್ (Republic Day Bonanza Sale) ನಡೆಯುತ್ತಿದೆ. ಈ ವಿಶೇಷ ಮಾರಾಟದಲ್ಲಿ ಹಲವು ಪ್ರಸಿದ್ಧ ಕಂಪನಿಗಳ ಸ್ಮಾರ್ಟ್‌ಫೋನ್‌ಗಳನ್ನು ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು. ಈ ವಿಶೇಷ ಮಾರಾಟವು ಜನವರಿ 26 ರವರೆಗೆ ಮಾತ್ರ ಇರುತ್ತದೆ. ಈ ಸೇಲ್‌ನಲ್ಲಿ ಮೊಟೊ G35 5G (Moto G35 5G) ರಿಯಾಯಿತಿ ದರದಲ್ಲಿ ಲಭ್ಯವಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊಟೊ G45 5G ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.5 ಇಂಚಿನ ಡಿಸ್ಲ್ಪೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊ G45 5G ಫೋನನ್ನು ಬಿಡುಗಡೆ ಬೆಲೆಗಿಂತ ಕಡಿಮೆಗೆ ಖರೀದಿಸಬಹುದು. ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ಗಳನ್ನು ತಿಳಿಯಲು ಮುಂದೆ ಓದಿ.

ಮೊಟೊ G45 5G ಬೆಲೆ ಮತ್ತು ರಿಯಾಯಿತಿ
ಮೊಟೊ G45 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 12,999 ರೂ. ಆಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿಯೊಂದಿಗೆ 11,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ನೀವು ಇಎಂಐ ಪಾವತಿ ಮಾಡಿದರೆ 1000 ರೂ. ಡಿಸ್ಕೌಂಟ್ ಸಹ ಸಿಗುತ್ತದೆ. ಜೊತೆಗೆ ಬ್ಯಾಂಕ್ ಆಫರ್ ಭಾಗವಾಗಿ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ. ಬಳಿಕ ನೀವು ಈ ಫೋನನ್ನು ಕೇವಲ 10,999 ರೂ. ಬೆಲೆಯಲ್ಲಿ ಖರೀದಿಸಬಹುದು.
ಮೊಟೊ G45 5G ಫೋನಿನ 4GB RAM + 128 GB ಸ್ಟೋರೇಜ್ ರೂಪಾಂತರದ ಖರೀದಿ ಮೇಲೆಯೂ ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ನೀವು ಡಿಸ್ಕೌಂಟ್‌ನೊಂದಿಗೆ ಕೇವಲ 9,999 ರೂ.ಗೆ ಈ ಫೋನನ್ನು ಖರೀದಿಸಬಹುದು. ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಈ ಮೊಬೈಲ್ ವಿವಾ ಮೆಜೆಂಟಾ, ಬ್ರಿಲಿಯಂಟ್ ಬ್ಲೂ ಮತ್ತು ಬ್ರಿಲಿಯಂಟ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಮೊಟೊ G45 5G ವೈಶಿಷ್ಟ್ಯಗಳು
ಡಿಸ್‌ಪ್ಲೇ ಮತ್ತು ಪ್ರೊಸೆಸರ್ ವಿವರ
ಮೊಟೊ G45 5G ಸ್ಮಾರ್ಟ್‌ಫೋನ್ 6.5 ಇಂಚಿನ ಎಚ್‌ಡಿ ಪ್ಲಸ್ ಡಿಸ್ಲ್ಪೇ ಹೊಂದಿದೆ. ಇದು 1600 x 720 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 6s ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಮೊಟೊ ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.
ಕ್ಯಾಮೆರಾ ಮತ್ತು ಸ್ಟೋರೇಜ್
ಮೊಟೊ G45 5G ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 4GB, 8GB RAM ಮತ್ತು 128GB ಸ್ಟೋರೇಜ್ ಹೊಂದಿದೆ. ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು
ಮೊಟೊ G45 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಟೊ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, ಬ್ಲೂಟೂತ್ 5.2, ವೈ ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








