Home
Deal of the day

Moto: 50MP ಕ್ಯಾಮೆರಾ, 5000mAh ಬ್ಯಾಟರಿ.. ಕೇವಲ 11,999ಕ್ಕೆ 5G ಫೋನ್ ಸೇಲ್

ಮೊಟೊರೊಲಾ ಕಂಪನಿಯು ವಿಭಿನ್ನ ಶ್ರೇಣಿಯ ಮೊಬೈಲ್‌ಗಳ ಮೂಲಕ ಸದ್ದು ಮಾಡುತ್ತಿದೆ. ಈ ಪೈಕಿ ಮೊಟೊ G45 5G (Moto G45 5G) ಸಹ ಒಂದಾಗಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅನ್ನು ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊ G45 5G ಖರೀದಿ ಮೇಲೆ ಶೇ.20 ರಷ್ಟು ನೇರ ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್‌ ಮತ್ತು ಇಎಂಐ ಆಯ್ಕೆ ಲಭ್ಯವಿದೆ. ಈ ಫೋನಿನ ಮೂಲ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಮೊಟೊರೊಲಾ ಕಳೆದ ವರ್ಷ ಆಗಸ್ಟ್‌ನಲ್ಲಿ ಮೊಟೊ G45 5G ಫೋನನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು ಈ ಫೋನನ್ನು ಮೂರು ಬಣ್ಣ ಆಯ್ಕೆಗಳಲ್ಲಿ ಕೊಳ್ಳಬಹುದು. ಇದು ವಿವಾ ಮೆಜೆಂಟಾ, ಬ್ರಿಲಿಯಂಟ್ ಬ್ಲೂ ಮತ್ತು ಬ್ರಿಲಿಯಂಟ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್‌ ಕ್ಯಾಮೆರಾ ಲಭ್ಯವಿದೆ. ಇದು 6.5 ಇಂಚಿನ ಡಿಸ್ಲ್ಪೇ, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Moto: 50MP ಕ್ಯಾಮೆರಾ, 5000mAh ಬ್ಯಾಟರಿ.. ಕೇವಲ 11,999ಕ್ಕೆ 5G ಫೋನ್ ಸೇಲ್

ಮೊಟೊ G45 5G ಫೋನಿನ ಸಂಪೂರ್ಣ ವೈಶಿಷ್ಟ್ಯಗಳು

ಮೊಟೊ G45 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್ಲ್ಪೇ ಹೊಂದಿದೆ. ಇದು 1,600 x 720 ಪಿಕ್ಸೆಲ್‌ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಲ್ಪೇಯು 120Hz ರಿಫ್ರೆಶ್ ದರ, 500 ನಿಟ್ಸ್ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 6s ಜೆನ್ 3 ಆಕ್ಟಾ-ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 4GB, 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದಲ್ಲದೆ, ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

Take a Poll

ಮೊಟೊ G45 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಮೊಟೊ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Moto: 50MP ಕ್ಯಾಮೆರಾ, 5000mAh ಬ್ಯಾಟರಿ.. ಕೇವಲ 11,999ಕ್ಕೆ 5G ಫೋನ್ ಸೇಲ್

ಮೊಟೊ G45 5G ಫೋನ್‌ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ ಸಿಮ್ 5G, ಬ್ಲೂಟೂತ್ 5.2, ವೈ ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಮೊಟೊ G45 5G ಫೋನಿನ ಬೆಲೆ ಮತ್ತು ಆಫರ್‌ಗಳು

ಮೊಟೊ G45 5G ಫೋನಿನ 4GB + 128GB ಸ್ಟೋರೇಜ್‌ ಬೆಲೆ 10,999 ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 12,999 ರೂ. ಇದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 8GB RAM ರೂಪಾಂತರದ ಮೇಲೆ ನೀವು 1,000 ರೂ.ಗಳ ರಿಯಾಯಿತಿ ಪಡೆಯಬಹುದು. ನೀವು ಕೇವಲ 11,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ.

Best Mobiles in India

English summary
Moto G45 5G with 8GB RAM Variant gets Rs 1000 discount on flipkart sale: Know offers, price, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+