ಕೇವಲ 13,749 ಸಿಗುತ್ತೆ! ಅದೂ Moto 5G ಫೋನ್.. 3,500 ಉಳಿತಾಯ.. ಖರೀದಿ ಎಲ್ಲಿ?
ದೀಪಾವಳಿ (Diwali 2024) ಹಬ್ಬದ ಹಿನ್ನೆಲೆ ಪ್ರತಿಷ್ಠಿತ ಮೊಬೈಲ್ ಕಂಪನಿಗಳು ತನ್ನ ಗ್ರಾಹಕರನ್ನು ಆಕರ್ಷಿಸಲು ಭರ್ಜರಿ ಆಫರ್‌ಗಳನ್ನು ನೀಡುತ್ತಿವೆ. ಇದೀಗ, ಈ ಪಟ್ಟಿಗೆ ಟೆಕ್ ದೈತ್ಯ ಮೊಟೊರೊಲಾ ಕೂಡ ಸೇರ್ಪಡೆಯಾಗಿದೆ. ಹೌದು, ಕಂಪನಿಯು ಕಳೆದ ಏಪ್ರಿಲ್‌ನಲ್ಲಿ ಬಿಡುಗಡೆಯಾದ ಮೊಟೊ G64 5G (Moto G64 5G) ಫೋನನ್ನು ಭಾರೀ ಡಿಸ್ಕೌಂಟ್‌ನೊಂದಿಗೆ ಮಾರಾಟ ಮಾಡುತ್ತಿದೆ. 16,999 ರೂ.ಗೆ ಬಿಡುಗಡೆಯಾದ ಈ ಫೋನನ್ನು ನೀವು, ಕೇವಲ 13,749 ರೂ.ಗೆ ಖರೀದಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಂಪನಿಯು ಮೊಟೊ G64 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟ ಮಾಡುತ್ತಿದೆ. ನೀವು ಮಿಂಟ್ ಗ್ರೀನ್, ಪರ್ಲ್ ಬ್ಲೂ ಮತ್ತು ಐಸ್ ಲಿಲಾಕ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಇದರಲ್ಲಿ 6.5 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ, 50 ಮೆಗಾಪಿಕ್ಸೆಲ್ ಕ್ಯಾಮೆರಾ, 6,000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮೊಟೊ G64 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ಮೊಟೊ G64 5G ಫೋನಿನ 12GB RAM + 256GB ಸ್ಟೋರೇಜ್ ಮೇಲೆ ಡಿಸ್ಕೌಂಟ್ ನೀಡುತ್ತಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ 2,000 ರೂ.ಗಳ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನೀವು, 14,999 ರೂ.ಗೆ ಖರೀದಿಸಬಹುದು. ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಫೋನನ್ನು ಖರೀದಿಸಿದರೆ, 1,250 ರೂ.ಗಳ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಸಹ ಪಡೆಯಬಹುದು. ಇದರೊಂದಿಗೆ ಫೋನಿನ ಬೆಲೆ 13,749 ರೂ.ಗೆ ಲಭ್ಯವಿರಲಿದೆ.
ಈ ಆಫರ್ ಕೇವಲ ಒಂದು ವಾರ ಮಾತ್ರ ಇರುತ್ತೆ!
ಇಎಂಐ ಆಯ್ಕೆ ಬೇಡ ಎಂದರೆ, ಎಸ್‌ಬಿಐ ಡೆಬಿಟ್ ಅಥವಾ ಎಟಿಎಂ ಕಾರ್ಡ್ ಪಾವತಿಯ ಮೇಲೆ 1,000 ರೂ. ರಿಯಾಯಿತಿ ಸಿಗುತ್ತದೆ. ಈ ಡಿಸ್ಕೌಂಟ್ ಬಳಿಕ ಫೋನನ್ನು 13,999 ರೂ.ಗೆ ಖರೀದಿಸಬಹುದು. ಪ್ರಸ್ತುತ, ಈ ಆಫರ್‌ಗಳನ್ನು ಅಕ್ಟೋಬರ್ 31 ರವರೆಗೆ ಮಾತ್ರ ನೀಡಲಾಗುತ್ತದೆ. ಎಸ್‌ಬಿಐ ಕಾರ್ಡ್ ಆಫರ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ವೆಬ್‌ಸೈಟ್ ಎರಡರಲ್ಲೂ ಲಭ್ಯವಿರುತ್ತದೆ. ಮೊಟೊರೊಲಾ ಸೈಟ್‌ನಲ್ಲಿ ಆಕ್ಸಿಸ್ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಂಐನಲ್ಲಿ 1,250 ರೂ. ಆಫರ್ ನೀಡಲಾಗುತ್ತದೆ.
ಮೊಟೊ G64 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊ G64 5G ಮೊಬೈಲ್ 6.5 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಡಿಸ್ಪ್ಲೇಯಾಗಿದ್ದು, ಐಪಿಎಸ್ ಎಲ್‌ಸಿಡಿ ಪ್ಯಾನೆಲ್‌ನಲ್ಲಿ ನಿರ್ಮಿಸಲಾಗಿದೆ. ಡಿಸ್ಪ್ಲೇಯು 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊ G64 5G ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದನ್ನು 6NF ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಇಮ್ಯಾಜಿನೇಶನ್ ಗ್ರಾಫಿಕ್ಸ್ ಕಾರ್ಡ್ ಅಳವಡಿಸಲಾಗಿದೆ.
ಸ್ಟೋರೇಜ್ ಆಯ್ಕೆ
ಈ ಮೊಟೊರೊಲಾ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಎರಡೂ ರೂಪಾಂತರಗಳು 1 TB ವರೆಗಿನ ಮೈಕ್ರೋ SD ಕಾರ್ಡ್ ಹೊಂದಿವೆ.

ಕ್ಯಾಮೆರಾ ಸೆಟಪ್
ಮೊಟೊ G64 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊ G64 5G ಫೋನ್ 6,000mAh ಸಾಮರ್ಥ್ಯ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಫೋನ್ 33W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಈ ಮೊಟೊ ಸ್ಮಾರ್ಟ್‌ಫೋನ್ 14 5G ಬ್ಯಾಂಡ್‌ಗಳನ್ನು ಬೆಂಬಲಿಸುತ್ತದೆ. ಇದು, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸಹ ಹೊಂದಿದೆ. ಕನೆಕಕ್ಟಿವಿಟಿ ಆಯ್ಕೆಗಳಲ್ಲಿ ಎನ್‌ಎಫ್‌ಸಿ ಮತ್ತು ಬ್ಲೂಟೂತ್ 5.3 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








