Home
Deal of the day

ದೊಡ್ಡ ಡಿಸ್ಕೌಂಟ್! Moto G85 5G ಬೆಲೆ ಮತ್ತೆ ಇಳಿಕೆ.. 3000 ಉಳಿತಾಯ.. ಆಫರ್ ಬೆಲೆ ನೋಡಿ

ಮೊಟೊರೊಲಾ ತನ್ನ ಗ್ರಾಹಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಹೊಸ ವರ್ಷದ ಪ್ರಯುಕ್ತ ಈ 5G ಫೋನಿನ ಬೆಲೆಯನ್ನು ಮತ್ತೊಮ್ಮೆ ಕಡಿಮೆ ಮಾಡಿದೆ. ನಿವು, ಹೊಸ ಮೊಬೈಲ್ ಖರೀದಿಸಲು ಬಯಸಿದರೆ, ಅದರಲ್ಲೂ ಮೊಟೊರೊಲಾ ಫೋನ್ ಹುಡುಕುತ್ತಿದ್ದರೆ ಇದು ನಿಮಗೆ ಉತ್ತಮ ಆಯ್ಕೆಯಾಗಿದೆ. ಹೌದು, ಕಂಪನಿಯು ಮೊಟೊ G85 5G (Moto G85 5G) ಫೋನಿನ ಖರೀದಿ ಮೇಲೆ ಶೇ.13 ರಷ್ಟು ಡಿಸ್ಕೌಂಟ್ ನೀಡುತ್ತಿದೆ. ಜೊತೆಗೆ, ಬ್ಯಾಂಕ್ ಆಫರ್, ಕ್ಯಾಶ್‌ಬ್ಯಾಕ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಬನ್ನಿ, ಈ ಫೊನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊ G85 5G ಸ್ಮಾರ್ಟ್‌ಫೋನ್ 6.67 ಇಂಚಿನ 3D ಬಾಗಿದ ಡಿಸ್ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಜೊತೆಗೆ, 256GB, ಸ್ಟೋರೇಜ್‌ 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, ಇದನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಸಬಹುದು. ಕಂಪನಿಯು ಎರಡು ರೂಪಾಂತರಗಳಲ್ಲೂ ಡಿಸ್ಕೌಂಟ್ ನೀಡುತ್ತಿದೆ. ನೀವು 3000 ರೂ. ಉಳಿತಾಯ ಮಾಡಬಹುದು. ಈ ಫೋನಿನಲ್ಲಿ ಯಾವೆಲ್ಲಾ ಆಫರ್‌ ಲಭ್ಯವಿದೆ ಅನ್ನೋದನ್ನು ತಿಳಿಯಲು ಮುಂದೆ ಓದಿ.

ದೊಡ್ಡ ಡಿಸ್ಕೌಂಟ್! Moto G85 5G ಬೆಲೆ ಇಳಿಕೆ.. 3000 ಉಳಿತಾಯ.. ಬೆಲೆ ನೋಡಿ

ಮೊಟೊ G85 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಮೊಟೊ G85 5G ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ಪೋಲ್ಡ್ 3D ಬಾಗಿದ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2400 x 1080 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ, 1600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಸಹ ಹೊಂದಿದೆ.

ಶಕ್ತಿಶಾಲಿ ಪ್ರೊಸೆಸರ್

ಮೊಟೊ G85 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6s ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ ಅಡ್ರಿನೊ 619 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ

ಮೊಟೊ G85 5G ಫೋನ್ 8GB + 128GB ಮತ್ತು 12GB RAM + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ನೀವು RAM ಅನ್ನು 24GB ವರೆಗೆ ವಿಸ್ತರಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್

ಮೊಟೊ G85 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಸಿಂಗಲ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಅದ್ಭುತ ಬ್ಯಾಟರಿ ಬ್ಯಾಕಪ್

ಮೊಟೊ G85 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಮೊಟೊ G85 5G ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ಬ್ಲೂಟೂತ್ 5.1, 5GHZ ವೈ-ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಮೊಟೊ G85 5G ಬೆಲೆ ಮತ್ತು ಆಫರ್‌

ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಹೊಸ ವರ್ಷದ ಪ್ರಯುಕ್ತ ಮೊಟೊ G85 5G ಫೋನಿನ ಖರೀದಿ ಮೇಲೆ ಡಿಸ್ಕೌಂಟ್ ನೀಡುತ್ತಿದೆ. ಫೋನಿನ 12GB RAM + 256GB ಸ್ಟೋರೇಜ್‌ ರೂಪಾಂತರದ ಬೆಲೆ 19,999 ರೂ. ಆಗಿದೆ. ಪ್ರಸ್ತುತ, 1500 ರೂ. ಬ್ಯಾಂಕ್ ಆಫರ್‌ ಲಭ್ಯವಿದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಪಡೆಯಬಹುದು.

ನೀವು ಇಎಂಐ ಆಯ್ಕೆಯೊಂದಿಗೆ ಕೇವಲ 705 ರೂ.ಗೆ ಮೊಟೊ G85 5G ಅನ್ನು ಖರೀದಿಸಬಹುದು. ಹಾಗೆಯೇ 19,400 ರೂ. ಎಕ್ಸ್‌ಚೇಂಜ್ ಆಫರ್‌ ಸಹ ಲಭ್ಯವಿದೆ. ನೀವು ಕೋಬಾಲ್ಟ್ ಬ್ಲೂ, ಆಲಿವ್ ಗ್ರೀನ್, ಅರ್ಬನ್ ಗ್ರೇ ಮತ್ತು ವಿವಾ ಮೆಜೆಂಟಾ ಬಣ್ಣಗಳ ಆಯ್ಕೆಗಳಲ್ಲಿ ಈ ಫೋನನ್ನು ಕೊಳ್ಳಬಹುದು. ಫ್ಲಿಪ್‌ಕಾರ್ಟ್‌ನಲ್ಲಿ ಈ ಆಫರ್‌ಗಳ ಲಾಭ ಪಡೆಯಬಹುದು.

Best Mobiles in India

English summary
Moto G85 5G Available With huge Discount on Flipkart Sale: know new price, offers, availability specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+