Motorola: ಮೊಟೊರೊಲಾದ ಈ ಅಗ್ಗದ ಫೋನ್ ಇನ್ನೂ ಕಡಿಮೆ ಬೆಲೆಗೆ ಲಭ್ಯ! 40% ರಿಯಾಯಿತಿ
ಮೊಟೊರೊಲಾ (Motorola) ಫೋನ್‌ಗಳು ವಿಶೇಷ ಫೀಚರ್ಸ್ ಆಯ್ಕೆ ಮೂಲಕ ಭಾರತದಲ್ಲಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಈ ಫೋನ್‌ಗಳು ಅಗ್ಗದ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್ ಆಯ್ಕೆ ಪಡೆದಿದ್ದು, ಈ ನಡುವೆ ಬಜೆಟ್ ಬೆಲೆಯ ಫೋನ್‌ವೊಂದನ್ನು ಪ್ರಮುಖ ಇ ಕಾಮರ್ಸ್ ಸೈಟ್‌ನಲ್ಲಿ ಭರ್ಜರಿ ಆಫರ್ ಘೋಷಣೆ ಮಾಡಲಾಗಿದೆ.
ಹೌದು, ಬಜೆಟ್ ಬೆಲೆಯಲ್ಲಿ ಉತ್ತಮ ಫೋನ್ ಖರೀದಿ ಮಾಡಲು ಇಚ್ಚಿಸಿದರೆ ನೀವು ಮೊಟೊರೊಲಾ e13 ಸ್ಮಾರ್ಟ್‌ಫೋನ್ (Motorola e13 smartphone) ಖರೀದಿ ಮಾಡಬಹುದು. ಈ ಸ್ಮಾರ್ಟ್‌ಫೋನ್‌ಗೆ 40% ರಿಯಾಯಿತಿ ನೀಡಲಾಗಿದೆ. ಹಾಗೆಯೇ ಈ ಫೋನ್ 1 TB ವರೆಗೆ ವಿಸ್ತರಣೆ ಮಾಡಬಹುದಾದ ಇಂಟರ್ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಹಾಗಿದ್ರೆ, ಬನ್ನಿ ಈ ಫೋನ್‌ನ ಆಫರ್ ಮಾಹಿತಿ ಹಾಗೂ ಫೀಚರ್ಸ್ ಏನು ಅನ್ನೋದನ್ನು ತಿಳಿಯೋಣ.

ಮೊಟೊರೊಲಾ e13 ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ ಅನ್ನು ಕಳೆದ ವರ್ಷದ ಆರಂಭದಲ್ಲಿ ಅನಾವರಣ ಮಾಡಲಾಗಿದ್ದು, 10,999ರೂ.ಗಳ ಸಾಮಾನ್ಯ ಬೆಲೆ ಹೊಂದಿತ್ತು. ಆದರೆ, ಈಗ ಪ್ರಮುಖ ಇ-ಕಾಮರ್ಸ್ ಸೈಟ್ ಆಗಿರುವ ಫ್ಲಿಪ್‌ಕಾರ್ಟ್ (Flipkart) ಈ ಫೋನ್‌ಗೆ 40% ರಿಯಾಯಿತಿ ಘೋಷಣೆ ಮಾಡಿದೆ. ಇದರಿಂದಾಗಿ ನೀವು ಈ ಫೋನ್ ಅನ್ನು ಕೇವಲ 6,499 ರೂ.ಗಳಿಗೆ ಕೊಂಡುಕೊಳ್ಳಬಹುದಾಗಿದೆ.
ಈ ಫೋನ್ ಖರೀದಿ ವೇಳೆ ಬ್ಯಾಂಕ್ ಆಫರ್ ಸಹ ನೀಡಲಾಗಿದ್ದು, ಇನ್ನೂ ಕಡಿಮೆ ದರದಲ್ಲಿ ಈ ಫೋನ್ ನಿಮ್ಮದಾಗಿಸಿಕೊಳ್ಳಬಹುದು. ಅಂದರೆ ಫ್ಲಿಪ್‌ಕಾರ್ಟ್ ಯುಪಿಐ (Flipkart UPI) ಬಳಸಿಕೊಂಡು ಖರೀದಿ ಮಾಡಿದ್ರೆ 25ರೂ.ಗಳ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೇಲೆ 5% ಕ್ಯಾಶ್‌ಬ್ಯಾಕ್, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್ ಪೇ ಲೇಟರ್ ಮೂಲಕ ಖರೀದಿ ಮಾಡಿದ್ರೆ 10,000 ರೂ.ಗಳ ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಬೆನಿಫಿಟ್‌ಗಳನ್ನು ಪಡೆಯಬಹುದಾಗಿದೆ. ಹಾಗಿದ್ರೆ, ಈ ಫೋನ್ ಫೀಚರ್ಸ್ ಕಡೆಗೂ ಕಣ್ಣಾಯಿಸೋಣ ಬನ್ನಿ.

ಮೊಟೊರೊಲಾ e13 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 20:9 ಅನುಪಾತ, 82.8% ಸ್ಕ್ರೀನ್-ಟು-ಬಾಡಿ ಅನುಪಾತ ಪಡೆದಿದೆ.
ಮೊಟೊರೊಲಾ e13 ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 (ಗೋ ಆವೃತ್ತಿ) ಓಎಸ್ ಅನ್ನು ರನ್ ಮಾಡಲಿದ್ದು, ಯುನಿಸಾಕ್ T606 (12 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಮಾಲಿ-G57 MP1 ಜಿಪಿಯು ಬಲ ಪಡೆದಿದ್ದು, ಆಫರ್ ಬೆಲೆಗೆ ಲಭ್ಯ ಇರುವ ಫೋನ್ 64GB ಇಂಟರ್ ಸ್ಟೋರೇಜ್ ಹಾಗೂ 4GB RAM ಆಯ್ಕೆ ಪಡೆದಿದೆ. ಅದಾಗ್ಯೂ ನೀವು ಮೈಕ್ರೋ ಎಸ್‌ಡಿ ಕಾರ್ಡ್ ಬಳಕೆ ಮಾಡಿಕೊಂಡು 1 TB ವರೆಗೆ ಸ್ಟೋರೇಜ್ ವಿಸ್ತರಣೆ ಮಾಡಿಕೊಳ್ಳಬಹುದಾಗಿದೆ.

ಮೊಟೊರೊಲಾ e13 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಸಿಂಗಲ್ ರಿಯರ್ ಹಾಗೂ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ. ಅಂದರೆ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹಾಗೂ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್‌ಅನ್ನು ಬೆಂಬಲಿಸಲಿವೆ. ಹಾಗೆಯೇ 1080p@30fps ಸಾಮರ್ಥ್ಯದ ವಿಡಿಯೋಗಳನ್ನು ಈ ಫೋನ್‌ನಲ್ಲಿ ಸೆರೆಹಿಡಿಯಬಹುದಾಗಿದೆ.
ಮೊಟೊರೊಲಾ e13 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 10W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ. ಉಳಿದಂತೆ ಈ ಫೋನ್ 3.5 ಎಂಎಂ ಜ್ಯಾಕ್, ವೈ ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯ ಪಡೆದುಕೊಂಡಿದೆ.


Click it and Unblock the Notifications








