Home
Deal of the day

7,500 ರಿಯಾಯಿತಿ! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ ಫೋನಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಆಫರ್

ನೀವು ಪ್ರೀಮಿಯಂ ವಿನ್ಯಾಸ ಹೊಂದಿರುವ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ ಹುಡುಕುತ್ತಿದ್ದರೆ, ಇಲ್ಲಿದೆ ಒಳ್ಳೆಯ ಸುದ್ದಿ. ದೇಶೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಧ್ಯಮ ಶ್ರೇಣಿಯ ಫೋನ್‌ಗಳಿಗೆ ಯಾವಾಗಲೂ ಹೆಚ್ಚಿನ ಬೇಡಿಕೆ ಇರುತ್ತದೆ. ಕಡಿಮೆ ಬೆಲೆಯಲ್ಲಿ ಹೆಚ್ಚಿನ ವೈಶಿಷ್ಟ್ಯಗಳನ್ನು ಬಯಸುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು, ಜನಪ್ರಿಯ ಕಂಪನಿಗಳು ಪ್ರೀಮಿಯಂ ವಿನ್ಯಾಸ, ಸೊಗಸಾದ ಕ್ಯಾಮೆರಾಗಳು, ಶಕ್ತಿಶಾಲಿ ಪ್ರೊಸೆಸರ್‌ ಮತ್ತು ಬಿಗ್ ಬ್ಯಾಟರಿಗಳೊಂದಿಗೆ ಪೈಪೋಟಿ ನಡೆಸುತ್ತಿವೆ. ಈ ಸ್ಪರ್ಧೆಯಲ್ಲಿ ಮೊಟೊರೊಲಾ ಎಡ್ಜ್ 50 (Motorola Edge 50) ಸ್ಮಾರ್ಟ್‌ಫೋನ್ ಎದ್ದು ಕಾಣುತ್ತದೆ. ಪ್ರಸ್ತುತ, ಈ ಫೋನಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಬೊಂಬಾಟ್ ಆಫರ್ ನೀಡಲಾಗಿದೆ.

ಹೌದು, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್‌ 50 ಮೊಬೈಲ್ ಬೆಲೆ ಭಾರೀ ಇಳಿಕೆಯಾಗಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಮತ್ತು 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್‌ 1 ಪ್ರೊಸೆಸರ್‌ ಹೊಂದಿದೆ. ಈ ಫೋನಿನಲ್ಲಿ 6.7 ಇಂಚಿನ ಡಿಸ್ಪ್ಲೇ, 5000mAh ಸಾಮರ್ಥ್ಯದ ಬ್ಯಾಟರಿ ಲಭ್ಯವಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್‌ 50 ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

7,500 ರಿಯಾಯಿತಿ! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ ಫೋನಿಗೆ ಬಿಗ್ ಆಫರ್

ಮೊಟೊರೊಲಾ ಎಡ್ಜ್‌ 50 ಹೊಸ ಬೆಲೆ ಮತ್ತು ಆಫರ್

8GB RAM + 256GB ಸ್ಟೋರೇಜ್ ರೂಪಾಂತರದ ಮೊಟೊರೊಲಾ ಎಡ್ಜ್ 50 ಫೋನಿನ ಬೆಲೆ 27,999 ರೂ. ಆಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ 21,999 ರೂ.ಗಳಿಗೆ ಮಾರಾಟವಾಗುತ್ತಿದೆ. ಅಂದರೆ, ನೇರವಾಗಿ ನೀವು 6,000 ರೂ. ರಿಯಾಯಿತಿಯ ಲಾಭ ಪಡೆಯಬಹುದು. ಇದಲ್ಲದೆ, ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟುಗಳ ಮೇಲೆ 1,500 ರೂ.ಗಳ ಹೆಚ್ಚುವರಿ ತ್ವರಿತ ರಿಯಾಯಿತಿ ಲಭ್ಯವಿದೆ. ಈ ರಿಯಾಯಿತಿಯೊಂದಿಗೆ, ಈ ಫೋನನ್ನು ಮತ್ತಷ್ಟು ಕಡಿಮೆ ಬೆಲೆಗೆ ನಿಮ್ಮದಾಗಿಸಿಕೊಳ್ಳಬಹುದು. ಈ ಸ್ಮಾರ್ಟ್‌ಫೋನ್ ಜಂಗಲ್ ಗ್ರೀನ್, ಪ್ಯಾಂಟೋನ್ ಪೀಚ್ ಫಜ್ ಮತ್ತು ಕೋಲಾ ಗ್ರೇ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಮೊಟೊರೊಲಾ ಎಡ್ಜ್‌ 50 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಮೊಟೊರೊಲಾ ಎಡ್ಜ್‌ 50 ಫೋನ್‌ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಬಾಗಿದ ಡಿಸ್ಪ್ಲೇ ಹೊಂದಿದೆ. ಇದು 1,200 x 2,780 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 144 ಟ್ರೂ ಕಲರ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 2500 ನಿಟ್ಸ್‌ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಸಹ ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್

ಮೊಟೊರೊಲಾ ಎಡ್ಜ್‌ 50 ಮೊಬೈಲ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 7 ಜೆನ್‌ 1 ಪ್ರೊಸೆಸರ್‌ ಹೊಂದಿದೆ. ಈ ಮೊಟೊರೊಲಾ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ. ಇದು 8GB RAM + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್‌

ಮೊಟೊರೊಲಾ ಎಡ್ಜ್‌ 50 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 13 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್‌ ತೃತೀಯ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೊನ್‌ನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್‌ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬೊಂಬಾಟ್ ಬ್ಯಾಟರಿ

ಮೊಟೊರೊಲಾ ಎಡ್ಜ್‌ 50 ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ ಸೌಲಭ್ಯ ಸಹ ನೀಡಲಾಗಿದೆ.

Best Mobiles in India

English summary
Motorola Edge 50 Available With Rs 6000 discount on flipkart sale: check new price, offers, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+