ಡಬಲ್ ಖುಷಿ..! ಏ.2ಕ್ಕೆ ಹೊಸ ಮೊಬೈಲ್ ಲಾಂಚ್; ಹಳೆಯ ಫೋನಿಗೆ 6000 ರಿಯಾಯಿತಿ.. ಯಾವ ಫೋನ್?
ಮೊಟೊರೊಲಾ ತನ್ನ ಅಭಿಮಾನಿಗಳಿಗೆ ಎರಡು ಗುಡ್ ನ್ಯೂಸ್ ಕೊಟ್ಟಿದೆ. ಕಂಪನಿಯು ನಾಳೆ (ಏಪ್ರಿಲ್ 2, 2025) ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲಿದೆ. ಇದುವೇ ಮೊಟೊರೊಲಾ ಎಡ್ಜ್ 60 ಫ್ಯೂಷನ್ (Motorola Edge 60 Fusion) ಫೋನ್ ಆಗಿದೆ. ಈ ಮಧ್ಯೆ, ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನಿನ ಮೂಲ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಶೇ.23 ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿದೆ 12GB RAM, 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ನೀವು ಬಿಡುಗಡೆ ಬೆಲೆಗಿಂತ ಕಡಿಮೆಗೆ ಈ ಫೋನ್ ಖರೀದಿಸಬಹುದು.

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆ ಮತ್ತು ಆಫರ್‌ಗಳು
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯು 25,999 ರೂ.ಗೆ ಬಿಡುಗಡೆಯಾಗಿತ್ತು. ಇದು ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 19,999 ರೂ.ಗೆ ಮಾರಾಟವಾಗುತ್ತಿದೆ. ನೀವು ಶೇ.23 ರಷ್ಟು ನೇರ ರಿಯಾಯಿತಿಯ ಲಾಭ ಪಡೆಯಬಹುದು. ಹೆಚ್ಚುವರಿಯಾಗಿ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಲ್ಲಿ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಲಭ್ಯವಿದೆ. ಈ ಮೊಟೊರೊಲಾ ಮೊಬೈಲ್ ಫಾರೆಸ್ಟ್ ಬ್ಲೂ, ಮಾರ್ಷ್‌ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳೊಂದಿಗೆ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಅನ್ನು ಖರೀದಿಸಬಹುದು.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ವೈಶಿಷ್ಟ್ಯಗಳು
ಡಿಸ್ಪ್ಲೇ ಮಾಹಿತಿ
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 3D ಕರ್ವ್ಡ್ ಪೋಲೆಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 144Hz ರಿಫ್ರೆಶ್ ದರ, 1600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನಿನ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಬರುತ್ತದೆ.
ಶಕ್ತಿಶಾಲಿ ಪ್ರೊಸೆಸರ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ ಶಕ್ತಿಯುತ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಮೊಟೊ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಹೆಲೋ ಯುಐ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಇದರೊಂದಿಗೆ, 3 ವರ್ಷಗಳ ಓಎಸ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳು ಲಭ್ಯವಿದೆ. ಈ ಫೋನಿನಲ್ಲಿ 12GB RAM ಮತ್ತು 256GB ಆಂತರಿಕ ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಹೇಗಿದೆ ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ ಎರಡನೇ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಇದೆ.
ಬ್ಯಾಟರಿ ಬ್ಯಾಕಪ್ ಸೂಪರ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಈ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬಿಡುಗಡೆ ವಿವರಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G (Motorola Edge 60 Fusion 5G) ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 2 ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ನಾಳೆ ಈ ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ಬಹಿರಂಗಪಡಿಸಲಿದೆ. ಈಗಾಗಲೇ ಕಂಪನಿಯ ವೆಬ್‌ಸೈಟ್‌ನಲ್ಲಿ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ ಫೋನಿನ ಮೈಕ್ರೋ ಸೈಟ್ ಲೈವ್ ಆಗಿದೆ. ಇಲ್ಲಿ ಬಿಡುಗಡೆ ಸಮಾರಂಭವನ್ನು ನೇರ ಪ್ರಸಾರ ಮಾಡಲಾಗುವುದು. ಇದಲ್ಲದೆ, ಮೊಟೊರೊಲಾ ಇಂಡಿಯಾದ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿಯೂ ಲಾಂಚ್ ಈವೆಂಟ್ ವೀಕ್ಷಿಸಬಹುದು.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಫೋನ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ. ಇದು 1.5K ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ ಸಂಪೂರ್ಣ ಬಾಗಿದ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ. ಈ ಮೊಟೊರೊಲಾ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿರುತ್ತದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಫೋನ್ ಇದಾಗಿದೆ ಎಂದು ಕಂಪನಿ ಹೇಳಿದೆ. ಈ ಮೊಬೈಲ್ 3 ವರ್ಷಗಳ ಆಂಡ್ರಾಯ್ಡ್ ಓಎಸ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳೊಂದಿಗೆ ಬರುತ್ತದೆ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ LED ಫ್ಲ್ಯಾಷ್ ಲೈಟ್ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು ಮ್ಯಾಕ್ರೋ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ. ಈ ಫೋನ್ 8GB RAM ಮತ್ತು 12GB RAM ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನಲ್ಲಿ 256GB ಸ್ಟೋರೇಜ್ ಲಭ್ಯವಿರಬಹುದು. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಸ್ಮಾರ್ಟ್‌ಫೋನ್ 5,500mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಮೊಬೈಲ್ ಮೋಟೋ ಗೆಸ್ಚರ್‌ಗಳು ಮತ್ತು ಎಐ (AI) ಫೀಚರ್ ಹೊಂದಿರುತ್ತದೆ. ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಇದು ವಾಟರ್ ಟಚ್ 3.0 ವೈಶಿಷ್ಟ್ಯ ಹೊಂದಿದ್ದು, ಒದ್ದೆಯಾದ ಕೈಗಳಿಂದಲೂ ನೀವು ಫೋನ್ ಬಳಸಬಹುದು.


Click it and Unblock the Notifications








