Home
Deal of the day

Motorola: 3000 ಬೆಲೆ ಇಳಿಕೆ; 50MP + 50MP + 32MP ಕ್ಯಾಮೆರಾಗಳು.. 20000ಕ್ಕಿಂತ ಅಗ್ಗ! ಯಾವ ಫೋನ್?

ಮೊಟೊರೊಲಾ ತನ್ನ ಗ್ರಾಹಕರಿಗೆ ಎರಡು ಸಿಹಿಸುದ್ದಿ ತಂದಿದೆ. ಮೊದಲನೆಯದು, ಕಂಪನಿಯು ಇಂದು ಬಹುನಿರೀಕ್ಷಿತ ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಎರಡನೆಯದು, ಈ ಹೊಸ ಫೋನ್‌ ಬಿಡುಗಡೆಗೂ ಮೊದಲೇ.. ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಬಜೆಟ್‌ ಬೆಲೆಯಲ್ಲಿ ಪ್ರೀಮಿಯಂ ವಿನ್ಯಾಸ ಮತ್ತು ಕಾರ್ಯಕ್ಷಮತೆಯನ್ನು ಬಯಸುವ ಗ್ರಾಹಕರಿಗೆ ಇದು ಉತ್ತಮ ಅವಕಾಶವಾಗಿದೆ. ಈ ಫೋನಿನ ಮೂಲ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳ ಬಗ್ಗೆ ಹೆಚ್ಚಿನ ಮಾಹಿತಿ ಮುಂದೆ ಇದೆ.

ವಿಶೇಷವೆಂದರೆ, ಇತ್ತೀಚೆಗೆ ಭಾರತದಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬಿಡುಗಡೆಯಾಗಿದೆ. ಇದೀಗ, ಕಂಪನಿಯು ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆಯನ್ನು ದಿಢೀರನೆ ಇಳಿಕೆ ಮಾಡಿದೆ. ನೀವು ಬಿಡುಗಡೆ ಬೆಲೆಗಿಂತ 3,000 ರೂ. ಕಡಿಮೆಗೆ ಈ ಫೋನನ್ನು ಖರೀದಿಸಬಹುದು. ಇದು 8GB RAM + 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಈ ಮೊಬೈಲ್ ಲ್ಯಾವೆಂಡರ್ ಬ್ಲಶ್, ಫಾರೆಸ್ಟ್ ಬ್ಲೂ ಮತ್ತು ಮೂನ್‌ಲೈಟ್ ಪರ್ಲ್‌ ಬಣ್ಣಗಳಲ್ಲಿ ಲಭ್ಯವಿದೆ. ಈ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನಿನ ಬೆಲೆಯನ್ನು 20 ಸಾವಿರಕ್ಕಿಂತ ಕಡಿಮೆಗೆ ಇಳಿಸಲಾಗಿದೆ.

Motorola: 50MP + 50MP + 32MP ಕ್ಯಾಮೆರಾಗಳು.. 3000 ಬೆಲೆ ಇಳಿಕೆ! ಯಾವ ಫೋನ್?

ಮೊಟೊರೊಲಾ ಎಡ್ಜ್ 50 ಫ್ಯೂಷನ್ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ದರ, 1600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೆಲೋ ಯುಐ ಓಎಸ್‌ ಜೊತೆಗೆ ಕೆಲಸ ಮಾಡುತ್ತದೆ. ಇದು 3 ವರ್ಷಗಳ ಓಎಸ್‌ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳೊಂದಿಗೆ ಬರುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 710 ಜಿಪಿಯು ಸಹ ಹೊಂದಿದೆ.

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಸಹ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಲಭ್ಯವಿದೆ.ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ.

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 12GB RAM ಮತ್ತು 8GB RAM ಹೊಂದಿದೆ. ಇದಕ್ಕೆ ಪೂರಕವಾಗಿ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ. ಈ ಫೋನ್ ಇನ್‌ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಇದು ಸೊಗಸಾದ ಮತ್ತು ಕಾರ್ಯಕ್ಷಮತೆ ಆಧಾರಿತ ಫೋನ್‌ ಆಗಿದ್ದು, ಪ್ರಸ್ತುತ ಇನ್ನೂ ಅಗ್ಗದ ಬೆಲೆಯಲ್ಲಿ ಲಭ್ಯವಿದೆ.

Motorola: 50MP + 50MP + 32MP ಕ್ಯಾಮೆರಾಗಳು.. 3000 ಬೆಲೆ ಇಳಿಕೆ! ಯಾವ ಫೋನ್?

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆ ಮತ್ತು ಆಫರ್

ಬಿಡುಗಡೆ ಬೆಲೆ = 22,999 ರೂ.
ಹೊಸ ಬೆಲೆ = 19,999 ರೂ.

ಮೊಟೊರೊಲಾ ಎಡ್ಜ್ 50 ಫ್ಯೂಷನ್‌ ಫೋನನ್ನು ಮೊಟೊರೊಲಾ ಇಂಡಿಯಾದ ಅಧಿಕೃತ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಹೊಸ ಬೆಲೆಯೊಂದಿಗೆ ಖರೀದಿಸಬಹುದು. ಅಲ್ಲದೆ, ಆಫ್‌ಲೈನ್ ಮಾರುಕಟ್ಟೆಯಲ್ಲಿ, 1000 ರೂ. ರಿಯಾಯಿತಿ ಲಭ್ಯವಿದೆ. ಈ ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನಿನ ಆರಂಭದಲ್ಲಿ 8GB RAM + 128GB ಸ್ಟೋರೇಜ್ ರೂಪಾಂತರವನ್ನು 22,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಕಂಪನಿಯು ಈ ಹಿಂದೆ ಇದರ ಬೆಲೆಯನ್ನು 2,000 ರೂ. ಕಡಿಮೆ ಮಾಡಿತ್ತು. ಈಗ 1,000 ರೂ. ಹೆಚ್ಚುವರಿ ರಿಯಾಯಿತಿ ಘೋಷಿಸಿದೆ. ನೀವು ಕೇವಲ 19,999 ರೂ.ಗೆ ಬುಕ್ ಮಾಡಬಹುದು.

Best Mobiles in India

English summary
Motorola Edge 50 Fusion Price Drop in India ahead of Motorola Edge 60 Pro launch: check new price, offers, specs and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+