ಖುಷಿ ಸುದ್ದಿ! 32MP ಸೆಲ್ಫಿ ಕ್ಯಾಮೆರಾ.. 5000mAh ಬ್ಯಾಟರಿ.. ಕಡಿಮೆ ಬೆಲೆಗೆ Motorola ಫೋನ್ ಸೇಲ್
ಮೊಟೊ ತನ್ನ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡಿದೆ. ಗಣರಾಜ್ಯೋತ್ಸವದ ಪ್ರಯುಕ್ತ ತನ್ನ 5G ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಹೌದು, ಮೊಟೊರೊಲಾ ಎಡ್ಜ್ 50 ಫ್ಯೂಷನ್ (Motorola Edge 50 Fusion) ಮೊಬೈಲ್ ಖರೀದಿ ಮೇಲೆ 2000 ರೂ. ರಿಯಾಯಿತಿ ಘೋಷಿಸಲಾಗಿದೆ. ನೀವು, ಬಿಡುಗಡೆ ಬೆಲೆಗಿಂತ ಕಡಿಮೆಗೆ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.7 ಇಂಚಿನ ಡಿಸ್‌ಪ್ಲೇ ಲಭ್ಯವಿದೆ. ಜೊತೆಗೆ 12GB RAM ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ನೀವು ಹೆಚ್ಚು ಹಣ ಉಳಿತಾಯ ಮಾಡಬಹುದು.

ಮೊಟೊರೊಲಾ ಎಡ್ಜ್ 50 ಫ್ಯೂಷನ್ ಬೆಲೆ ಮತ್ತು ಆಫರ್‌ಗಳು
8GB RAM + 128GB ಸ್ಟೋರೇಜ್ ಬೆಲೆ = 22,999 ರೂ.
ಆಫರ್ ಬೆಲೆ = 20,999 ರೂ.
12GB RAM + 256GB ಸ್ಟೋರೇಜ್ ಬೆಲೆ = 24,999 ರೂ.
ಆಫರ್ ಬೆಲೆ = 22,000 ರೂ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಎರಡೂ ರೂಪಾಂತರಗಳ ಮೇಲೆ 2,000 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ನೀವು, ರಿಯಾಯಿತಿಯೊಂದಿಗೆ ಫೋನಿನ 128GB ಸ್ಟೋರೇಜ್ ರೂಪಾಂತರವನ್ನು 20,999 ರೂ. ಮತ್ತು 256GB ಸ್ಟೋರೇಜ್ ಆಯ್ಕೆಯನ್ನು 22,999 ರೂ.ಗೆ ಖರೀದಿಸಬಹುದು. ಜೊತೆಗೆ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಈ ಮೊಬೈಲ್ ಫಾರೆಸ್ಟ್ ಬ್ಲೂ, ಮಾರ್ಷ್‌ಮ್ಯಾಲೋ ಬ್ಲೂ ಮತ್ತು ಹಾಟ್ ಪಿಂಕ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.
ಮೊಟೊರೊಲಾ ಎಡ್ಜ್ 50 ಫ್ಯೂಷನ್ ವೈಶಿಷ್ಟ್ಯಗಳು
ಡಿಸ್ಪ್ಲೇ ಮತ್ತು ಪ್ರೊಸೆಸರ್ ವಿವರ
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ 6.7 ಇಂಚಿನ 3D ಬಾಗಿದ ಪೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ದರ, 1600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 7S ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೆಲೋ ಯುಐ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಇದರೊಂದಿಗೆ, 3 ವರ್ಷಗಳ ಓಎಸ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳು ಲಭ್ಯವಿದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಸಹ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಸ್ಟೋರೇಜ್
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ 12GB RAM ಮತ್ತು 8GB RAM ಹೊಂದಿದೆ. ಜೊತೆಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಇತರೆ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 50 ಫ್ಯೂಷನ್ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








