12GB RAM ಮತ್ತು 256GB ಸ್ಟೋರೇಜ್ ಮೊಬೈಲ್ ಈಗ ಕಡಿಮೆ ಬೆಲೆಗೆ ಲಭ್ಯ!
ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊಬೈಲ್‌ಗಳಿಗೆ ಏನಾದರೊಂದು ಆಫರ್ ಲಭ್ಯ ಇರುತ್ತದೆ. ಸ್ಟೈಲಿಶ್ ಲುಕ್‌ನಲ್ಲಿ ಇರುವ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್‌ನಲ್ಲಿ ಅತ್ಯುತ್ತಮ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿದ್ದು, ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ದಿಗ್ಗಜ ಇ ಕಾಮರ್ಸ್ ಅಮೆಜಾನ್ ತಾಣದಲ್ಲಿ ಮೊಟೊರೊಲಾ ಎಡ್ಜ್ 50 ಪ್ರೊ (Motorola Edge 50 Pro 5G) ಫೋನ್ ಶೇ. 23% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 33,159ರೂ. ಗಳ ಆಫರ್ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಅಂದಹಾಗೆ ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್ ಹೊಂದಿದೆ. ಅಮೆಜಾನ್‌ನಲ್ಲಿ Motorola Edge 50 Pro 5G ಅನ್ನು ಆಫರ್‌ನಲ್ಲಿ ಖರೀದಿಸಬಹುದು. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊ ಎಡ್ಜ್ 50 ಪ್ರೊ - ಫೀಚರ್ಸ್ ಹೀಗಿವೆ
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಪಡೆದಿದ್ದು, ಈ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇ 2000 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಸಹ ಪಡೆದಿದ್ದು, 3D ಕರ್ವ್ ಡಿಸ್‌ಪ್ಲೇ ರಚನೆ ಹೊಂದಿದೆ.
ಮೊಟೊ ಎಡ್ಜ್ 50 ಪ್ರೊ ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಸಾಮರ್ಥ್ಯದ ಬಲವನ್ನು ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 14 ಓಎಸ್ ಸೌಲಭ್ಯ ಸಹ ಇದೆ. ಹಾಗೆಯೇ ಇದು 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಮೊಟೊ ಎಡ್ಜ್ 50 ಪ್ರೊ ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಹೊಂದಿದೆ. ದ್ವಿತೀಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇದು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಹೊಂದಿರುವುದು ಪ್ಲಸ್ ಪಾಯಿಂಟ್ ಆಗಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್ ಆಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯದ ಆಯ್ಕೆ ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








