Motorola: 5G ಫೋನ್.. 50MP ಸೆಲ್ಫಿ ಕ್ಯಾಮೆರಾ.. 5000 ಡಿಸ್ಕೌಂಟ್! ಯಾವ ಫೋನ್?
ಸಾಲು ಸಾಲು ಹಬ್ಬಗಳು ಬಂದಿವೆ.. ಆಫರ್‌ಗಳ ಸುರಿಮಳೆ ತಂದಿವೆ. ದೀಪಾವಳಿ ಹಬ್ಬದ ಪ್ರಯುಕ್ತ ಮೊಟೊರೊಲಾ (Motorola) ಸಹ ತನ್ನ ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡುತ್ತಿದೆ. ಹೌದು, ನೀವು ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G (Motorola Edge 50 Ultra 5G) ಸ್ಮಾರ್ಟ್‌ಫೋನ್ ಖರೀದಿಸಿದರೆ, ದೊಡ್ಡ ರಿಯಾಯಿತಿ ಸಿಗುತ್ತದೆ. ಕಂಪನಿಯು, ಈ ಫೋನಿನ ಮೇಲೆ 5,000 ರೂ.ಗಳ ಡಿಸ್ಕೌಂಟ್ ಘೋಷಿಸಿದೆ. ಇದಲ್ಲದೆ ಬ್ಯಾಂಕ್ ಆಫರ್, ಇಎಂಐ ಸೌಲಭ್ಯ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಂಪನಿಯು ಈ ವರ್ಷ ಜೂನ್‌ನಲ್ಲಿ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಅನ್ನು ಬಿಡುಗಡೆ ಮಾಡಿತ್ತು. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 12GB RAM ಮತ್ತು 512GB ಸ್ಟೋರೇಜ್ ಲಭ್ಯವಿದೆ. ಇದು 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಇದೆ. ಜೊತೆಗೆ, 4500mAh ಬ್ಯಾಟರಿ ಮತ್ತು 125W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಹೊಸ ಬೆಲೆ ಮತ್ತು ಆಫರ್‌ಗಳು
ಕಂಪನಿಯು ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೋನನ್ನು ಕೇವಲ 12GB RAM + 512GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆ ಮಾಡಿದೆ. ಇದರ ಬಿಡುಗಡೆ ಬೆಲೆ 54,999 ರೂ. ಆಗಿದೆ. ಪ್ರಸ್ತುತ ಫೋನಿನ ಮೇಲೆ 5,000 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ಫ್ಲಾಟ್ ಡಿಸ್ಕೌಂಟ್ 1,000 ರೂ. ಮತ್ತು 4,000 ರೂ. ಬ್ಯಾಂಕ್ ಡಿಸ್ಕೌಂಟ್ ಸೇರಿದೆ. ನೀವು, ಆಕ್ಸಿಸ್ ಮತ್ತು ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಈ ಆಫರ್ ಪಡೆಯಬಹುದು.
ಎರಡೂ ರಿಯಾಯಿತಿಯೊಂದಿಗೆ ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಅನ್ನು 49,999 ರೂ.ಗೆ ಖರೀದಿಸಬಹುದು. ನೀವು, ನೋ ಕಾಸ್ಟ್ ಇಎಂಐ ಆಯ್ಕೆಯೊಂದಿಗೆ ಫೋನನ್ನು ಕೊಳ್ಳಬಹುದು. ಕಂಪನಿಯು 6 ತಿಂಗಳವರೆಗೆ ಇಎಂಐ ಆಯ್ಕೆಯನ್ನು ನೀಡುತ್ತಿದೆ. ಈ ಫೋನ್ ಫಾರೆಸ್ಟ್ ಗ್ರೇ, ನಾರ್ಡಿಕ್ ವುಡ್ ಮತ್ತು ಪೀಚ್ ಫಡ್ಜ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಲ್ಲಾ ಆಫರ್‌ಗಳನ್ನು ಪಡೆಯಬಹುದು.
ಈ ಸುದ್ದಿ ಓದಿದ್ದೀರಾ?: ಸಸ್ತಾ ಬೆಲೆಗೆ Realme 5G ಫೋನ್! ಬರೋಬ್ಬರಿ 10,200 ಅಗ್ಗ.. ಯಾವ ಫೋನ್?
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ 6.7 ಇಂಚಿನ ಪೋಲೆಡ್ 3D ಕರ್ವ್ ಡಿಸ್ಪ್ಲೇಯನ್ನು ಹೊಂದಿದೆ. ಇದು 2,712 x 1,220 ಪಿಕ್ಸೆಲ್ ರೆಸಲ್ಯೂಶನ್, 144Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ, 2800 ನಿಟ್ಸ್ ಬ್ರೈಟ್‌ನೆಸ್ ಬೆಂಬಲವನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಹೊಂದಿದೆ. ಇದು, 12GB LPDDR5X RAM ಮತ್ತು 512GB UFS 4.0 ಆಂತರಿಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.
ಕ್ಯಾಮೆರಾ ಸೆಟಪ್
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಸ್ಮಾರ್ಟ್‌ಫೋನ್ ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 64 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಕ್ಯಾಮೆರಾದೊಂದಿಗೆ 100x AI ಜೂಮ್ ಮಾಡಬಹುದು. ಸೆಲ್ಫಿ ಪ್ರಿಯರಿಗಾಗಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಮೊಬೈಲ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 125W ವೇಗದ ಚಾರ್ಜಿಂಗ್, 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲ ಒದಗಿಸಲಾಗಿದೆ. ಜೊತೆಗೆ, 10W ವೈರ್‌ಲೆಸ್ ಪವರ್ ಶೇರಿಂಗ್ ತಂತ್ರಜ್ಞಾನವನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 50 ಅಲ್ಟ್ರಾ 5G ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ, ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಮತ್ತು ಹಲವು ಎಐ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, ವೈ ಫೈ, ಬ್ಲೂಟೂತ್ ಮುಂತಾದ ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








