Home
Deal of the day

ಎಂಥಾ ಆಫರ್‌! ಬರೀ 6,999 ರೂ.ಗೆ ಸಿಗುತ್ತೆ.. 50MP ಕ್ಯಾಮೆರಾ.. 5200mAh ಬ್ಯಾಟರಿ; ಯಾವ ಫೋನ್?

ಮೊಟೊ ಮೊಬೈಲ್ ಪ್ರಿಯರಿಗೆ ಫ್ಲಿಪ್‌ಕಾರ್ಟ್‌ ಬೊಂಬಾಟ್ ಆಫರ್‌ ಘೋಷಿಸಿದೆ. ನೀವು ಕೇವಲ 7,000ಕ್ಕಿಂತ ಅಗ್ಗದ ಬೆಲೆಗೆ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಹೌದು, ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ ಮೊಟೊರೊಲಾ G05 (Motorola G05) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಇದು ಕಳೆದ ವರ್ಷ ಬಿಡುಗಡೆಯಾಗಿದ್ದ Motorola G04 ಫೋನಿನ ಉತ್ತರಾಧಿಕಾರಿಯಾಗಿದೆ. ಈ ಮೊಬೈಲ್ ಮೊಟೊ G04 ಗಿಂತ ದೊಡ್ಡ ಡಿಸ್ಪ್ಲೇ ಹೊಂದಿದೆ. ಜೊತೆಗೆ ಪ್ರೊಸೆಸರ್, ಕ್ಯಾಮೆರಾ ಮತ್ತು ಬ್ಯಾಟರಿಯಲ್ಲಿ ಅಪ್ಡೇಟ್‌ ಮಾಡಲಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊರೊಲಾ G05 ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾಟೆಕ್ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 4GB RAM + 64GB ಸ್ಟೋರೇಜ್, 5200mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ ಈ ಮೊಟೊರೊಲಾ G05 ಫೋನಿನ ಖರೀದಿ ಮೇಲೆ ಶೇ.30 ರಿಯಾಯಿತಿ ನೀಡಲಾಗುತ್ತಿದೆ.

ಬರೀ 6,999 ರೂ.! 50MP ಕ್ಯಾಮೆರಾ, 5200mAh ಬ್ಯಾಟರಿ.. ಅದೂ Motorola ಫೋನ್

ಮೊಟೊರೊಲಾ G05 ಬೆಲೆ ಮತ್ತು ಆಫರ್‌

ಮೊಟೊರೊಲಾ G05 ಮೊಬೈಲ್ ಕೇವಲ 4GB + 64GB ಸ್ಟೋರೇಜ್ ರೂಪಾಂತರದಲ್ಲಿ ಮರಾಟವಾಗುತ್ತಿದೆ. ಇದನ್ನು ಕೇವಲ 6,999 ರೂ.ಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಶೇ. 30 ರಷ್ಟು ರಿಯಾಯಿತಿ ಲಭ್ಯವಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ಶೇ.5 ರಷ್ಟು ಹೆಚ್ಚುವರಿ ಡಿಸ್ಕೌಂಟ್ ಸಿಗುತ್ತದೆ. ನೀವು ಮತ್ತಷ್ಟು ಕಡಿಮೆ ಬೆಲೆಗೆ ಈ ಫೋನನ್ನು ಖರೀದಿಸಬಹುದು. ಇದು ಫಾರೆಸ್ಟ್ ಗ್ರೀನ್ ಮತ್ತು ಪ್ಲಮ್ ರೆಡ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಮೊಟೊರೊಲಾ G05 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಮೊಟೊರೊಲಾ G05 ಸ್ಮಾರ್ಟ್‌ಫೋನ್‌ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್‌ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1604 × 720 ಪಿಕ್ಸೆಲ್ ರೆಸಲ್ಯೂಶನ್, 90Hz ರಿಫ್ರೆಶ್ ದರ ಮತ್ತು 1,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.

ಮೀಡಿಯಾಟೆಕ್‌ ಪ್ರೊಸೆಸರ್

ಮೊಟೊರೊಲಾ G05 ಮೊಬೈಲ್ ಮೀಡಿಯಾಟೆಕ್‌ನ ಹೆಲಿಯೊ G81 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಸ್ಮಾರ್ಟ್‌ಫೋನ್, ಆರ್ಮ್ ಮಾಲಿ G52 MC2 ಜಿಪಿಯು ಹೊಂದಿದೆ. ಇದು 4GB RAM ಮತ್ತು 8GB ವರ್ಚುವಲ್ RAM ಹೊಂದಿದೆ. ಈ ಫೋನ್ 64GB ಸ್ಟೋರೇಜ್‌ ಆಯ್ಕೆಯಲ್ಲಿ ಬರುತ್ತದೆ. ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಸ್ಟೋರೇಜ್‌ ವಿಸ್ತರಿಸಬಹುದು.

ಬರೀ 6,999 ರೂ.! 50MP ಕ್ಯಾಮೆರಾ, 5200mAh ಬ್ಯಾಟರಿ.. ಅದೂ Motorola ಫೋನ್

ಡ್ಯುಯಲ್ ಕ್ಯಾಮೆರಾ ಸೆಟಪ್

ಮೊಟೊರೊಲಾ G05 ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್‌ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಭರ್ಜರಿ ಬ್ಯಾಟರಿ ಬ್ಯಾಕಪ್

ಮೊಟೊರೊಲಾ G05 ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಎರಡು ದಿನ ಬಾಳಿಕೆ ಬರುತ್ತದೆ. ಈ ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್‌ ಪಡೆದಿದೆ. ಡ್ಯುಯಲ್ ಡಾಲ್ಬಿ ಅಟ್ಮಾಸ್, ಸ್ಟೀರಿಯೋ ಸ್ಪೀಕರ್‌ಗಳು, 3.5mm ಆಡಿಯೋ ಜಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸಿಮ್, ಬ್ಲೂಟೂತ್ 5.4, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Motorola G05 Available With 30 percent discount on Flipkart sale: check new price, offers, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+