Home
Deal of the day

Motorola: ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 50MP ಕ್ಯಾಮೆರಾ... 1 TB ವರೆಗೆ ಸ್ಟೋರೇಜ್ ಆಯ್ಕೆ

ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು (Motorola smartphone) ಕಡಿಮೆ ದರದಲ್ಲಿ ಉತ್ತಮ ಫೀಚರ್ಸ್ ಆಯ್ಕೆ ನೀಡುವ ಮೂಲಕ ಬಳಕೆದಾರರಿಗೆ ವಿವಿಧ ರೀತಿಯಲ್ಲಿ ಪ್ರಯೋಜನ ನೀಡಲಿವೆ. ಈ ನಡುವೆ ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ (Motorola G14 smartphone) ಭಾರೀ ಆಫರ್ ನೀಡಲಾಗಿದೆ.

ಹೌದು, ಪ್ರಮುಖ ಇ-ಕಾಮರ್ಸ್‌ ಸೈಟ್‌ನಲ್ಲಿ ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ ಆಫರ್ ಘೋಷಣೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 1 TB ವರೆಗೆ ಸ್ಟೋರೇಜ್ ಆಯ್ಕೆ ಬೆಂಬಲಿಸಲಿದ್ದು, 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಇದರ ಆಫರ್ ಬೆಲೆ ವಿವರ ಇಲ್ಲಿದೆ ನೋಡಿ.

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 50MP ಕ್ಯಾಮೆರಾ...

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 12,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 8,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್‌ ಈ ಬಜೆಟ್‌ ಬೆಲೆಯ ಫೋನ್‌ಗೆ 34% ರಿಯಾಯಿತಿ ನೀಡಿದೆ. ಇದರ ಜೊತೆಗೆ ಬ್ಯಾಂಕ್‌ ಆಫರ್ ಅನ್ನೂ ಸಹ ನೀಡಲಾಗಿದ್ದು, ಈ ಮೂಲಕ ಇನ್ನೂ ಕಡಿಮೆ ದರದಲ್ಲಿ ಇದನ್ನು ಖರೀದಿ ಮಾಡಬಹುದಾಗಿದೆ.

ಈ ಫೋನ್ ಖರೀದಿ ವೇಳೆ ಫ್ಲಿಪ್‌ಕಾರ್ಟ್‌ ಯುಪಿಐ ಮೂಲಕ ಖರೀದಿ ಮಾಡಿದ್ರೆ ತ್ವರಿತ ಡಿಸ್ಕೌಂಟ್, ಫ್ಲಿಪ್‌ಕಾರ್ಟ್‌ ಆಕ್ಸಿಸ್‌ ಬ್ಯಾಂಕ್‌ ಕ್ರೆಡಿಟ್ ಕಾರ್ಡ್‌ ಬಳಕೆ ಮಾಡಿಕೊಂಡು ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್, ಪಾಲುದಾರ ಆಫರ್‌ಗೆ ಸೈನ್ ಅಪ್ ಮಾಡಿ ಫ್ಲಿಪ್‌ಕಾರ್ಟ್‌ ಲೇಟರ್‌ ಪೇಮೆಂಟ್‌ ಆಯ್ಕೆ ಮಾಡಿಕೊಂಡು ಖರೀದಿ ಮಾಡಿದ್ರೆ 20,000 ಮೌಲ್ಯದ ಉಚಿತ ಟೈಮ್ಸ್ ಪ್ರೈಮ್ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 50MP ಕ್ಯಾಮೆರಾ...

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ 405 ಪಿಪಿಐ ಸಾಂದ್ರತೆ ಪಡೆದಿದ್ದು, ಪಾಂಡಾ ಗ್ಲಾಸ್‌ ರಕ್ಷಣೆ ಪಡೆದುಕೊಂಡಿದೆ.

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ವಿವರ: ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಅನ್ನು ರನ್‌ ಮಾಡಲಿದ್ದು, ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡಿಕೊಳ್ಳಬಹುದಾಗಿದೆ. ಇದರ ಜೊತೆಗೆ ಯುನಿಸಾಕ್ ಟೈಗರ್ T616 (12 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಮಾಲಿ-G57 MP1 ಜಿಪಿಯು ಬಲ ಪಡೆದಿದೆ. ಉಳಿದಂತೆ ಆಫರ್ ಬೆಲೆಗೆ ಲಭ್ಯ ಇರುವ ಫೋನ್ 4GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಬಳಕೆ ಮಾಡಿಕೊಂಡು 1 TB ವರೆಗೆ ಸ್ಟೋರೇಜ್ ವಿಸ್ತರಣೆ ಮಾಡಿಕೊಳ್ಳಬಹುದು.

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಅಂದರೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ಮ್ಯಾಕ್ರೋ ಕ್ಯಾಮೆರಾ ಆಯ್ಕೆ ಪಡೆದಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 50MP ಕ್ಯಾಮೆರಾ...

ಮೊಟೊರೊಲಾ G14 ಸ್ಮಾರ್ಟ್‌ಫೋನ್‌ ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಇನ್ನು ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 15W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರ ಜೊತೆಗೆ ಸ್ಟೀರಿಯೋ ಸ್ಪೀಕರ್‌, 3.5 ಎಂಎಂ ಜ್ಯಾಕ್, ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸ್ಥಾನೀಕರಣ ಸೇರಿದಂತೆ ಅಗತ್ಯ ಫೀಚರ್ಸ್ ಅನ್ನು ಈ ಫೋನ್‌ ಹೊಂದಿದೆ.

Best Mobiles in India

English summary
Motorola G14 smartphone get best offer in flipkart . This smartphone will support up to 1 TB storage option and has a 50 megapixel main camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+