ತುಂಬಾ ಅಗ್ಗ! 10,000ಕ್ಕಿಂತ ಕಡಿಮೆ.. ಸೂಪರ್ ಫೀಚರ್ಸ್.. ಈ Motorola 5G ಫೋನಿಗೆ ಬಂಪರ್ ಆಫರ್
ಮೊಟೊರೊಲಾ 5G ಸ್ಮಾರ್ಟ್‌ಫೋನ್ ಬೆಲೆ ತುಂಬಾ ಅಗ್ಗವಾಗಿದೆ. ನೀವು, ಫ್ಲಿಪ್‌ಕಾರ್ಟ್‌ನಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಬಹುದು. ಹೌದು, ಮೊಟೊರೊಲಾ G35 5G (Motorola G35 5G) ಸ್ಮಾರ್ಟ್‌ಫೋನ್ ಬೆಲೆ ದಿಢೀರನೆ ಇಳಿಕೆಯಾಗಿದೆ. ನೀವು, ಫ್ಲಿಪ್‌ಕಾರ್ಟ್‌ನಲ್ಲಿ ಶೇ.20 ರಷ್ಟು ಡಿಸ್ಕೌಂಟ್‌ನ ಲಾಭ ಪಡೆಯಬಹುದು. ಜೊತೆಗೆ ಬ್ಯಾಂಕ್ ಕಾರ್ಡ್‌ಗಳ ಮೇಲೆ ಶೇ.5 ರಷ್ಟು ಆಫರ್ ಸಹ ಲಭ್ಯವಿದೆ. ನೀವು 10,000 ರೂ.ಗಳ ಬಜೆಟ್‌ನಲ್ಲಿ 5G ಮೊಬೈಲ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ.
ಮೊಟೊರೊಲಾ G35 5G ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಯುನಿಸಾಕ್ T760 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಜೊತೆಗೆ 4GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 20W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮಾರಾಟವಾಗುತ್ತಿದೆ. ಈ ಫೋನಿನ ಮೂಲ ಬೆಲೆ, ರಿಯಾಯಿತಿ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ಮೊಟೊರೊಲಾ G35 5G ಹೊಸ ಬೆಲೆ
ಮೊಟೊರೊಲಾ G35 5G ಫೋನ್ 4GB RAM + 128GB ಸ್ಟೋರೇಜ್ ರೂಪಾಂತರದಲ್ಲಿ ಖರೀದಿಗೆ ಲಭ್ಯವಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ಶೇ.20 ರಷ್ಟು ರಿಯಾಯಿತಿಯೊಂದಿಗೆ ಕೇವಲ 9,999 ರೂ. ಬೆಲೆಗೆ ಖರೀದಿಸಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ನೀವು ಈ ಮೊಬೈಲ್ ಕೊಂಡರೆ, ಶೇ.5 ರಷ್ಟು ಡಿಸ್ಕೌಂಟ್ ಸಹ ಲಭ್ಯವಿದೆ. ಈ ಮೂಲಕ ಮತ್ತಷ್ಟು ಕಡಿಮೆ ಬೆಲೆಗೆ ಈ ಮೊಟೊರೊಲಾ 5G ಫೋನನ್ನು ನಿಮ್ಮದಾಗಿಸಿಕೊಳ್ಳಬಹುದು. ಇದು ಗುವಾವಾ ರೆಡ್, ಲೀಫ್ ಗ್ರೀನ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳಲ್ಲಿ ಮಾರಾಟವಾಗುತ್ತಿದೆ.
ಮೊಟೊರೊಲಾ G35 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊರೊಲಾ G35 5G ಫೋನ್ 6.72 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 2400 x 1080 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ವಿಷನ್ ಬೂಸ್ಟರ್ ಮತ್ತು ವಾಟರ್ ಟಚ್ ತಂತ್ರಜ್ಞಾನ ಸಹ ಹೊಂದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ G35 5G ಸ್ಮಾರ್ಟ್‌ಫೋನ್ ಯುನಿಸಾಕ್ T760 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ಮಾಲಿ G57 MC4 ಜಿಪಿಯು ಸಹ ಹೊಂದಿದೆ.
RAM ಮತ್ತು ಸ್ಟೋರೇಜ್
ಮೊಟೊರೊಲಾ G35 5G ಮೊಬೈಲ್ 4GB RAM ಹೊಂದಿದೆ. ಈ ಫೋನ್‌ನಲ್ಲಿ RAM ಬೂಸ್ಟ್ ತಂತ್ರಜ್ಞಾನ ಸಹ ಲಭ್ಯವಿದೆ. ನೀವು 8GB ವರ್ಚುವಲ್ RAM ಮತ್ತು ಭೌತಿಕ RAM ಜೊತೆಗೆ 12GB RAM ಬಳಸಬಹುದು. ಈ ಫೋನ್ 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಮೊಟೊರೊಲಾ G35 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು PDAF ಮತ್ತು ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನದೊಂದಿಗೆ ಬರುತ್ತದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊರೊಲಾ G35 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 20W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಯುಎಸ್‌ಬಿ ಟೈಪ್ ಸಿ ಪೋರ್ಟ್ ಸಹ ಹೊಂದಿದೆ.
ಇತರ ವೈಶಿಷ್ಟ್ಯಗಳು
ಮೊಟೊರೊಲಾ G35 5G ಮೊಬೈಲ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP52 ರೇಟಿಂಗ್ ಪಡೆದಿದೆ. ಭದ್ರತೆಗಾಗಿ, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಬ್ಲೂಟೂತ್ 5.0, 5GHz ವೈ-ಫೈ ಮತ್ತು ವೈ-ಫೈ ಹಾಟ್‌ಸ್ಪಾಟ್, 3.5mm ಹೆಡ್‌ಫೋನ್ ಜ್ಯಾಕ್, ಡಾಲ್ಬಿ ಅಟ್ಮಾಸ್ ಡ್ಯುಯಲ್ ಸ್ಟೀರಿಯೊ ಸ್ಪೀಕರ್ ಮತ್ತು ಎಫ್ ರೇಡಿಯೋ ಸಹ ಒಳಗೊಂಡಿದೆ.


Click it and Unblock the Notifications








