ಕೇವಲ 9999 ಸಾಕು! Motorola G45 5G ಬೆಲೆ ಇಳಿಕೆ; 50MP ಕ್ಯಾಮೆರಾ.. ಬಿಗ್ ಬ್ಯಾಟರಿ.. ಖರೀದಿ ಎಲ್ಲಿ?
ಮೊಟೊ ಪ್ರಿಯರಿಗೆ ಖುಷಿ ಸುದ್ದಿ ಇದೆ. ಕಂಪನಿಯು ಮೊಟೊರೊಲಾ G45 5G (Motorola G45 5G) ಫೋನಿನ ಬೆಲೆ ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಖರೀದಿ ಮೇಲೆ ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್ ನೀಡಲಾಗುತ್ತಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ಶೇ.23 ರಷ್ಟು ರಿಯಾಯಿತಿಯ ಲಾಭ ಪಡೆಯಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ ನೀವು ಈ ಫೋನ್ ಖರೀದಿಸಿದರೆ, ಶೇ.5 ರಷ್ಟು ಹೆಚ್ಚುವರಿ ರಿಯಾಯಿತಿ ಸಿಗುತ್ತದೆ. ಈ ಮೂಲಕ ಈ ಫೋನನ್ನು ಕಡಿಮೆ ಬೆಲೆಗೆ ಖರೀದಿಸಬಹುದು. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕಂಪನಿಯು ಮೊಟೊರೊಲಾ G45 5G ಅನ್ನು ಕೇವಲ 9,999 ರೂ.ಗೆ ಮಾರಾಟ ಮಾಡುತ್ತಿದೆ. ಇದು 6.5 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 5000mAh ಬ್ಯಾಟರಿ, 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, ಬಜೆಟ್ ಬೆಲೆಯಲ್ಲಿ ಉತ್ತಮ ಫೋನ್ ಹುಡುಕುತ್ತಿದ್ದರೆ ಮೊಟೊರೊಲಾ G45 5G ಬೆಸ್ಟ್ ಆಯ್ಕೆಯಾಗಿದೆ.

ಮೊಟೊರೊಲಾ G45 5G ಫೋನಿನ ಬೆಲೆ
4GB + 128GB ಸ್ಟೋರೇಜ್ ಬೆಲೆ = 10,999 ರೂ.
ಡಿಸ್ಕೌಂಟ್ ಬೆಲೆ = 9,999 ರೂ.
8GB + 128GB ಸ್ಟೋರೇಜ್ ಬೆಲೆ = 12,999 ರೂ.
ಡಿಸ್ಕೌಂಟ್ ಬೆಲೆ = 11,999 ರೂ.
ಕಂಪನಿಯು ಮೊಟೊರೊಲಾ G45 5G ಅನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟ ಮಾಡುತ್ತಿದೆ. ಈ ಫೋನಿನ 4GB ಮತ್ತು 128GB ಸ್ಟೋರೇಜ್ ರೂಪಾಂತರವನ್ನು 10,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. 8GB ಮತ್ತು 128GB ಸ್ಟೋರೇಜ್ ಅನ್ನು 12,999 ರೂ.ಗೆ ಪರಿಚಯಿಸಲಾಗಿತ್ತು. ಈ ಫೋನ್ ಮೂರು ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ವಿವಾ ಮೆಜೆಂಟಾ, ಬ್ರಿಲಿಯಂಟ್ ಬ್ಲೂ ಮತ್ತು ಬ್ರಿಲಿಯಂಟ್ ಗ್ರೀನ್ ಬಣ್ಣಗಳಲ್ಲಿ ಮಾರಾಟವಾಗಲಿದೆ.
ಮೊಟೊ G45 5G ವೈಶಿಷ್ಟ್ಯಗಳು
ಡಿಸ್ಲ್ಪೇ ವಿವರ
ಮೊಟೊರೊಲಾ G45 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.5 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಇದು 1600 x 720 ಪಿಕ್ಸೆಲ್ ರೆಸಲ್ಯೂಶನ್, 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6s ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 4GB, 8GB LPDDR4X RAM, 128GB UFS 2.2 ಸ್ಟೋರೇಜ್, ಮೈಕ್ರೊ SD ಜೊತೆಗೆ 1TB ವರೆಗೆ ವಿಸ್ತರಿಸಬಹುದಾದ ಮೆಮೊರಿಯನ್ನು ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ಮೊಟೊರೊಲಾ G45 5G ಮೊಬೈಲ್ 50 ಮೆಗಾಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ, ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ. ಫೋನ್ ಇಮೇಜ್ ಸ್ವಯಂ ವರ್ಧನೆ, ಮ್ಯಾಕ್ರೋ ವಿಷನ್ ಕ್ಯಾಮೆರಾ, ಆಟೋ ನೈಟ್ ವಿಷನ್ ಮತ್ತು ಇನ್ನಿತರ ವೈಶಿಷ್ಟ್ಯಗಳನ್ನು ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಬೆಂಬಲದೊಂದಿಗೆ ಬರತ್ತದೆ. ಇದು ಟರ್ಬೋಪವರ್ ವೇಗದ ಚಾರ್ಜಿಂಗ್ ತಂತ್ರವನ್ನು ಸಹ ಒಳಗೊಂಡಿದೆ. ಈ ಫೋನ್ 162.7 x 74.64 x 8.03mm ದಪ್ಪ ಮತ್ತು 18 ಗ್ರಾಂ ತೂಕ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಮೊಟೊರೊಲಾ G45 5G ಮೊಬೈಲ್ ನೀರು ಮತ್ತು ಧೂಳು ನಿರೋಧಕ IP52 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಡಾಲ್ಬಿ ಅಟ್ಮಾಸ್ ಸ್ಟೀರಿಯೋ ಸ್ಪೀಕರ್‌ಗಳು, ದಪ್ಪ ಗೆಸ್ಚರ್ ವೈಶಿಷ್ಟ್ಯಗಳು, 13 5G ಬ್ಯಾಂಡ್‌ಗಳು, ಡ್ಯುಯಲ್ ಸಿಮ್ 5G, ಬ್ಲೂಟೂತ್ 5.2, ವೈ ಫೈ ಇತ್ಯಾದಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








