ಮೊಟೊ ಸಂಸ್ಥೆಯ ಈ 5G ಫೋನ್ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಆನ್‌ಲೈನ್ ಮಾರುಕಟ್ಟೆಯಲ್ಲಿ ಇ ಕಾಮರ್ಸ್ ದಿಗ್ಗಜ ಎಂದೇ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಎಲ್ಲ ಉತ್ಪನ್ನಗಳಿಗೂ ಕೊಡುಗೆ ಘೋಷಿಸಿರುತ್ತದೆ. ಮುಖ್ಯವಾಗಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೂ ಸಹ ಆಕರ್ಷಕ ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಮುನ್ನಡೆದಿದೆ. ಇದೀಗ ಮೊಟೊರೊಲಾ G64 5G ಮೊಬೈಲ್ ಅತ್ಯುತ್ತಮ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರು ಬೆರಗುಗಣ್ಣಿನಿಂದ ಈ ಫೋನಿನತ್ತ ನೋಡುವಂತಾಗಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ ಸಂಸ್ಥೆಯ ಮೊಟೊರೊಲಾ G64 5G (Motorola G64 5G) ಮೊಬೈಲ್ ಶೇ. 22% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 13,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ.

ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಪವರ್ ಪಡೆದುಕೊಂಡಿದೆ. ಇನ್ನು ಈ ಫೋನ್ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಮೊಟೊರೊಲಾ G64 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಮೊಟೊರೊಲಾ G64 5G - ಫೀಚರ್ಸ್ ಹೀಗಿವೆ
ಮೊಟೊರೊಲಾ G64 5G ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಅನ್ನು ಡಿಸ್‌ಪ್ಲೇ ಹೊಂದಿದ್ದು, ಈ ಫೋನಿನ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದಲ್ಲದೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಹೊಂದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ಸಪೋರ್ಟ್ ಕೂಡಾ ಒಳಗೊಂಡಿದೆ.
ಮೊಟೊರೊಲಾ G64 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 14 ಓಎಸ್ ಕೆಲಸ ಮಾಡಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಕೂಡಾ ಒಳಗೊಂಡಿದ್ದು, 24GB ವರೆಗೂ RAM ಬೂಸ್ಟ್ ಸೌಲಭ್ಯ ಸಹ ಇದೆ.
ಮೊಟೊರೊಲಾ G64 5G ಫೋನ್ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಮೊಟೊರೊಲಾ G64 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದ್ದು, ಇದು ಪ್ಲಸ್ ಪಾಯಿಂಟ್ ಎನಿಸಿದೆ. ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್ ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ.
ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5GG, 4G LTE, Wi-Fi, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಫೋನ್ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP52 ರೇಟಿಂಗ್ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








