Home
Deal of the day

ದೊಡ್ಡ ಆಫರ್‌! ಬರೋಬ್ಬರಿ 32,500 ರಿಯಾಯಿತಿ.. ಈ ದೈತ್ಯ Motorola ಫೋನಿನ ಬೆಲೆ ಇಳಿಕೆ.. ಖರೀದಿ ಎಲ್ಲಿ?

ನಿಮಗೆ ಹೊಸ ಫೋಲ್ಡಬಲ್ ಫೋನ್ ಖರೀದಿಸುಬ ಬಯಕೆ ಇದ್ಯಾ? ಹೆಚ್ಚು ಹಣ ಎಂಬ ಕಾರಣಕ್ಕೆ ಹೀಂದೇಟು ಹಾಕುತ್ತಿದ್ದೀರಾ? ಚಿಂತೆಬೇಡ..! ಇಲ್ಲಿದೆ ನಿಮಗೆ ಬೊಂಬಾಟ್ ಆಫರ್‌. ಬರೋಬ್ಬರಿ 32,500 ರೂ. ಕಡಿಮೆ ಬೆಲೆಗೆ ನೀವು ಹೊಸ ಫೋಲ್ಡಬಲ್ ಮೊಬೈಲ್ ಖರೀದಿಸಬಹುದು. ಹೌದು, ಮೊಟೊರೊಲಾ ರೇಜರ್ 50 ಅಲ್ಟ್ರಾ (Motorola Razr 50 Ultra) ಫೋನಿನ ಬೆಲೆ ಭಾರೀ ಇಳಿಕೆಯಾಗಿದೆ. ಜೊತೆಗೆ 2,500 ರೂ. ರಿಯಾಯಿತಿ ಸಹ ಲಭ್ಯವಿದೆ. ಬನ್ನಿ, ಈ ಫೋನಿ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8S ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 6.9 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 512GB ಸ್ಟೋರೇಜ್, 4000mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಇದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 6 ಫೋನಿಗೆ ನೇರ ಪೈಪೋಟಿ ನೀಡುತ್ತಿದೆ. ಪ್ರಸ್ತುತ, ಬಿಡುಗಡೆ ಬೆಲೆಗಿಂತ ಕಡಿಮೆಗೆ ಲಭ್ಯವಿದೆ.

32,500 ಅಗ್ಗ! ದೈತ್ಯ Motorola ಫೋನಿನ ಬೆಲೆ ಇಳಿಕೆ; ಹೊಸ ಬೆಲೆ, ಆಫರ್‌ ಏನಿದೆ?

ಮೊಟೊರೊಲಾ ರೇಜರ್ 50 ಅಲ್ಟ್ರಾ ಬೆಲೆ ಮತ್ತು ಆಫರ್‌ಗಳು

ಮೊಟೊರೊಲಾ ರೇಜರ್ 50 ಅಲ್ಟ್ರಾ ಸ್ಮಾರ್ಟ್‌ಫೋನ್ 89,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ, ಇದನ್ನು ಭಾರೀ ರಿಯಾಯಿತಿಯೊಂದಿಗೆ 79,999 ರೂ.ಗೆ ಪಟ್ಟಿ ಮಾಡಲಾಗಿದೆ. ನೀವು, ಆಫರ್‌ಗಳೊಂದಿಗೆ ರಿಲಯನ್ಸ್ ಡಿಜಿಟಲ್ ಸ್ಟೋರ್‌ನಿಂದ 69,999 ರೂ.ಗಳಿಗೆ ಈ ಫೋನನ್ನು ಖರೀದಿಸಬಹುದು. ಇದಲ್ಲದೆ ಮತ್ತಷ್ಟು ಅಗ್ಗವಾಗಿ ಈ ಮೊಬೈಲ್ ಖರೀದಿಸಬಹುದು.

ನೀವು ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್ ಮತ್ತು ಫೆಡರಲ್ ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ 2,500 ರೂ. ಹೆಚ್ಚುವರಿ ರಿಯಾಯಿತಿ ಪಡೆಯಬಹುದು. ಬಳಿಕ ಈ ಫೋನಿನ ಬೆಲೆ 67,499 ರೂ.ಗೆ ಇಳಿಕೆಯಾಗಲಿದೆ. ಅಂದರೆ ಈ ಫೋನ್ ಬಿಡುಗಡೆ ಬೆಲೆಗಿಂತ 32,500 ರೂ. ಅಗ್ಗವಾಗಿ ಖರೀದಿಸಬಹುದು.

ಮೊಟೊರೊಲಾ ರೇಜರ್ 50 ಅಲ್ಟ್ರಾ ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್ ವಿವರ

ಮೊಟೊರೊಲಾ ರೇಜರ್ 50 ಅಲ್ಟ್ರಾ ಸ್ಮಾರ್ಟ್‌ಫೋನ್ 6.9 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಪೋಲೆಡ್ LTPO ಮುಖ್ಯ ಡಿಸ್ಪ್ಲೇ ಹೊಂದಿದೆ. ಇದು 165Hz ರಿಫ್ರೆಶ್ ದರ, 2640 × 1080 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಈ ಫೋನಿನಲ್ಲಿ 4 ಇಂಚಿನ ಪೋಲೆಡ್ LTPO ಕವರ್ ಡಿಸ್ಪ್ಲೇ ಇದೆ. ಇದು 165Hz ರಿಫ್ರೆಶ್ ರೇಟ್, 1272 × 1080 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆ ಹೊಂದಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8S ಜೆನ್ 3 ಪ್ರೊಸೆಸರ್‌ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ ಅಡ್ರಿನೊ 735 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ಹೆಲೋ ಯುಐನಲ್ಲಿ ಕೆಲಸ ಮಾಡುತ್ತದೆ.

32,500 ಅಗ್ಗ! ದೈತ್ಯ Motorola ಫೋನಿನ ಬೆಲೆ ಇಳಿಕೆ; ಹೊಸ ಬೆಲೆ, ಆಫರ್‌ ಏನಿದೆ?

ಕ್ಯಾಮೆರಾ ಮತ್ತು ಸ್ಟೋರೇಜ್

ಮೊಟೊರೊಲಾ ರೇಜರ್ 50 ಅಲ್ಟ್ರಾ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ OIS ಜೊತೆಗೆ 50 ಮೆಗಾಪಿಕ್ಸೆಲ್ 2x ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು 512GB ಸ್ಟೋರೇಜ್ ಆಯ್ಕೆ ಹೊಂದಿದೆ.

ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು

ಮೊಟೊರೊಲಾ ರೇಜರ್ 50 ಅಲ್ಟ್ರಾ ಮೊಬೈಲ್ 4000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಟರ್ಬೋಪವರ್ ವೇಗದ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ. ಈ ಮೊಟೊರೊಲಾ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಜೊತೆಗೆ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಐಪಿಎಕ್ಸ್ 8 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, 4G VoLTE, ವೈ-ಫೈ 6E, ಬ್ಲೂಟೂತ್ 5.3 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Motorola Razr 50 Ultra available with Rs 32,500 discount in india: know new price, offers and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+