Home
Deal of the day

ವಾವ್..! 50MP + 50MP + 32MP ಕ್ಯಾಮೆರಾಗಳು.. ಬಿಗ್ ಬ್ಯಾಟರಿ.. ಈ Nothing ಫೋನಿಗೆ ಬಂಪರ್ ಆಫರ್

ನಥಿಂಗ್ ಕಂಪನಿಯು ವಿಭಿನ್ನ ವಿನ್ಯಾಸಗಳೊಂದಿಗೆ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಇವು ಪಾರದರ್ಶಕ ಮೊಬೈಲ್‌ಗಳಾಗಿವೆ. ಅದರಂತೆ ಕಳೆದ ವರ್ಷ ಮೀಡಿಯಾಟೆಕ್ ಡೈಮೆನ್ಸಿಟಿ 7200 ಪ್ರೊ ಪ್ರೊಸೆಸರ್‌ನೊಂದಿಗೆ ನಥಿಂಗ್ ಫೋನ್ 2a (Nothing Phone 2a) ಫೋನನ್ನು ಪರಿಚಯಿಸಿತ್ತು. ಇದೀಗ, ತನ್ನ ಫೋನ್‌ಗಳ ಮೇಲೆ ರಿಯಾಯಿತಿ ಘೋಷಿಸಿದೆ. ನೀವು ನಥಿಂಗ್ ಫೋನ್ (2A) ಮೊಬೈಲ್ ಅನ್ನು 2,000 ರೂ. ರಿಯಾಯಿತಿಯೊಂದಿಗೆ ಖರೀದಿಸಬಹುದು. ಕಂಪನಿಯು ಈ ಫೋನಿನ ಎಲ್ಲಾ ರೂಪಾಂತರಗಳನ್ನು ಅಗ್ಗದ ದರದಲ್ಲಿ ಮಾರಾಟ ಮಾಡುತ್ತಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ

ನಥಿಂಗ್ ಫೋನ್ (2a) ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು 50MP + 50MP ಹಿಂಭಾಗದ ಕ್ಯಾಮೆರಾ ಮತ್ತು 32MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ 6.7 ಅಮೋಲೆಡ್ ಡಿಸ್ಪ್ಲೇಯೊಂದಿಗೆ ಬರುತ್ತದೆ. ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಬ್ಯಾಟರಿ ಬ್ಯಾಕಪ್ ನೋಡುವುದಾದರೆ, ಇದು 5,000mAh ಬ್ಯಾಟರಿ ಮತ್ತು 45W ಫ್ಲ್ಯಾಶ್ ಚಾರ್ಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಲಭ್ಯತೆ ಮತ್ತು ಆಫರ್ ತಿಳಿಯೋಣ.

ವಾವ್! 50MP + 50MP ಕ್ಯಾಮೆರಾ.. ಬಿಗ್ ಬ್ಯಾಟರಿ.. ಈ Nothing ಫೋನಿಗೆ ಸಖತ್ ಆಫರ್

ನಥಿಂಗ್ ಫೋನ್ (2a) ರಿಯಾಯಿತಿ ಬೆಲೆ

ನಥಿಂಗ್ ಫೋನ್ 2A ಪೋನನ್ನು 23,999 ರೂ.ಗಳ ಆರಂಭಿಕ ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ಇದು 8GB RAM + 128GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಪ್ರಸ್ತುತ ಈ ರೂಪಾಂತರವನ್ನು 21,999 ರೂ.ಗೆ ರಿಯಾಯಿತಿ ದರದಲ್ಲಿ ಖರೀದಿಸಬಹುದು. ಇನ್ನು 25,999 ರೂ.ಗೆ ಬಿಡುಗಡೆಯಾದ 8GB + 256GB ವೇರಿಯಂಟ್ 23,999 ರೂ.ಗೆ ಲಭ್ಯವಿದೆ. ಮತ್ತು 27,999 ರೂ.ನ 12GB + 256GB ಸ್ಟೋರೇಜ್ ರೂಪಾಂತರವು 25,999 ರೂ.ಗೆ ಮಾರಾಟವಾಗುತ್ತಿದೆ.

ಕಂಪನಿಯು ನಥಿಂಗ್ ಫೋನ್ (2a) ಖರೀದಿ ಮೇಲೆ ನೀಡಿರುವ ಈ ಆಫರ್ ಸೀಮಿತ ಅವಧಿಗೆ ಮಾತ್ರ ಲಭ್ಯವಿದೆ. ಅಂದರೆ, ಮಾರ್ಚ್ 26 ರವರೆಗೆ ಇರುತ್ತದೆ. ನೀವು ಫೋನಿನ ಎಲ್ಲಾ ರೂಪಾಂತರಗಳು ಮತ್ತು ಬಣ್ಣದ ಮಾದರಿಗಳನ್ನು ಅಗ್ಗದ ದರದಲ್ಲಿ ಖರೀದಿಸಬಹುದು. ಆಫ್‌ಲೈನ್ ಚಿಲ್ಲರೆ ಅಂಗಡಿಗಳು ಮತ್ತು ಮೊಬೈಲ್ ಅಂಗಡಿಗಳಲ್ಲಿ ಈ ಆಫರ್ ಲಾಭವನ್ನು ಪಡೆಯಬಹುದು.

Take a Poll

ನಥಿಂಗ್ ಫೋನ್ (2a) ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ನಥಿಂಗ್ ಫೋನ್ (2a) ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್ ಹೆಚ್‌ಡಿ+ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಅಮೋಲೆಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 1,084 x 2,412 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 2160Hz PWM ಡಿಮ್ಮಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ನಥಿಂಗ್ ಫೋನ್ 2a ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ ಆಧಾರಿತ ನಥಿಂಗ್ ಓಎಸ್ 2.5 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ನಥಿಂಗ್ ಫೋನ್ 8GB RAM ಮತ್ತು 12GB RAM ಹೊಂದಿದೆ. ಈ ಮೊಬೈಲ್ 8GB RAM ಬೂಸ್ಟರ್ ತಂತ್ರಜ್ಞಾನ ಸಹ ಒಳಗೊಂಡಿದೆ. ಈ ಫೋನಿನಲ್ಲಿ 128GB ಮತ್ತು 256GB ಸ್ಟೋರೇಜ್ ಲಭ್ಯವಿದೆ.

ವಾವ್! 50MP + 50MP ಕ್ಯಾಮೆರಾ.. ಬಿಗ್ ಬ್ಯಾಟರಿ.. ಈ Nothing ಫೋನಿಗೆ ಸಖತ್ ಆಫರ್

ಕ್ಯಾಮೆರಾ ಸೆಟಪ್

ನಥಿಂಗ್ ಫೋನ್ (2a) ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಸಹ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ನಥಿಂಗ್ ಫೋನ್ (2a) ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ಸೂಪರ್‌ವೂಕ್ ಚಾರ್ಜಿಂಗ್‌ ತಂತ್ರಜ್ಞಾನವನ್ನು ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Nothing Phone (2a) With 12GB RAM Price Drop in india: check price, offers, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+