ಈ ಆಫರ್ ಬಿಡಬೇಡಿ! 11,900 ಉಳಿತಾಯ.. 18% ಡಿಸ್ಕೌಂಟ್.. OnePlus 12 ಬೆಲೆ ಭಾರೀ ಕಡಿತ!
ಒನ್‌ಪ್ಲಸ್ ಪ್ರಿಯರಿಗೆ ಡಬಲ್ ಸಿಹಿಸುದ್ದಿ ಇದೆ. ನಾಳೆ ಒನ್‌ಪ್ಲಸ್ 13 (OnePlus 13) ಮೊಬೈಲ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಮತ್ತೊಂದೆಡೆ, ಹೊಸ ಫೋನಿನ ಬಿಡುಗಡೆಗೂ ಮೊದಲೇ, ಒನ್‌ಪ್ಲಸ್ 12 (OnePlus 12) ಫೋನಿನ ಬೆಲೆ ದಿಢೀರ್ ಇಳಿಕೆಯಾಗಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಸಹ ಲಭ್ಯವಿದೆ. ನೀವು, ಬ್ಯಾಂಕ್ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಇಲ್ಲದೆಯೇ, ನೇರವಾಗಿ 11,900 ರೂ. ಉಳಿತಾಯ ಮಾಡಬಹುದು. ಬನ್ನಿ, ಈ ಪೋನಿನ ಹೊಸ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಒನ್‌ಪ್ಲಸ್ 12 ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.82 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 5400mAh ಬ್ಯಾಟರಿ ಮತ್ತು 100W ಚಾರ್ಜಿಂಗ್ ಒಳಗೊಂಡಿದೆ. ಈ ಒನ್‌ಪ್ಲಸ್ 12 ಫೋನನ್ನು 12GB + 256GB ಮತ್ತು 16GB + 512GB ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು, ಸಿಲ್ಕಿ ಬ್ಲಾಕ್, ಫ್ಲೋವಿ ಎಮರಾಲ್ಡ್ ಮತ್ತು ಗ್ಲೇಶಿಯಲ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದು. ಈ ಫೋನಿನ ಆಫರ್ ಬೆಲೆ ತಿಳಿಯಲು ಮುಂದೆ ಓದಿ.

ಒನ್‌ಪ್ಲಸ್ 12 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಒನ್‌ಪ್ಲಸ್ 12 ಮೊಬೈಲ್ 6.82 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು LTPO ಪ್ಲಸ್ ಪ್ಯಾನೆಲ್ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಫೋನ್ 120Hz ರಿಫ್ರೆಶ್ ದರ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಯಾವುದು?
ಕಂಪನಿಯು ಒನ್‌ಪ್ಲಸ್ 12 ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಗ್ರಾಫಿಕ್ಸ್‌ಗಾಗಿ, ಅಡ್ರಿನೊ 750 ಜಿಪಿಯು ಲಭ್ಯವಿದೆ. ಗೇಮಿಂಗ್‌ಗಾಗಿ ಆವಿ ಕೂಲಿಂಗ್ ವ್ಯವಸ್ಥೆ ಇದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಆಕ್ಸಿಜನ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 16GB RAM ಮತ್ತು 512GB ಇಂಟರ್ನಲ್ ಸ್ಟೋರೇಜ್ ಲಭ್ಯವಿದೆ.
ಮೂರು ಕ್ಯಾಮೆರಾಗಳು
ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬಿಗ್ ಬ್ಯಾಟರಿ
ಕಂಪನಿಯು ಒನ್‌ಪ್ಲಸ್ 12 ಮೊಬೈಲ್‌ನಲ್ಲಿ 5,400mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 100W ವೇಗದ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಒನ್‌ಪ್ಲಸ್ 12 ಬೆಲೆ ಮತ್ತು ಆಫರ್‌ಗಳು
ಒನ್‌ಪ್ಲಸ್ 12 ಫೋನಿನ 12GB + 256GB ಸ್ಟೋರೇಜ್ ರೂಪಾಂತರವನ್ನು 64,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಶೇ.18 ರಷ್ಟು ನೇರ ರಿಯಾಯಿತಿ ಪಡೆದಿದೆ. ನೀವು, ಡಿಸ್ಕೌಂಟ್‌ನೊಂದಿಗೆ 53,057 ರೂ.ಗೆ ಖರೀದಿಸಬಹುದು. ಈ ಮೂಲಕ ಬರೋಬ್ಬರಿ 11,942 ರೂ. ಉಳಿತಾಯ ಮಾಡಬಹುದು.
ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಒನ್‌ಪ್ಲಸ್ 12 ಮೊಬೈಲ್ ಖರೀದಿಸುವ ಗ್ರಾಹಕರು, ಶೇ. 5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಪಡೆಯಬಹುದು. ಇದಲ್ಲದೇ, ನೀವು ತಿಂಗಳಿಗೆ 1,866 ರೂ. ನೀಂದ ಪ್ರಾರಂಭವಾಗುವ ಇಎಂಐ ಆಯ್ಕೆಗಳನ್ನು ಸಹ ಪಡೆಯಬಹುದು. ಅಮೆಜಾನ್‌ನಲ್ಲಿಯೂ ಒನ್‌ಪ್ಲಸ್ 12 ಫೋನಿನ ಮೇಲೆ ಭಾರೀ ರಿಯಾಯಿತಿ ಲಭ್ಯವಿದೆ.


Click it and Unblock the Notifications








